ಗದಗ | ಸಮಯಕ್ಕೆ ಬಾರದ ತುರ್ತು ಆಂಬುಲೆನ್ಸ್; ವ್ಯಕ್ತಿ ಸಾವು, ಪ್ರತಿಭಟನೆ

Date:

 “ನರಗುಂದ ಪಟ್ಟಣದ ತಾಲೂಕ ಆಸ್ಪತ್ರೆಯ ತುರ್ತುವಾಹನ 108 ಸರಿಯಾದ ಸಮಯಕ್ಕೆ ಬಾರದೆ ಇರುವುದರಿಂದ ಹೃದಯಯಘಾತಗೊಂಡು ವ್ಯಕ್ತಿ ಸಾವನ್ನಪ್ಪಿದ್ದಾನೆ. ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಂಘಟನೆಗಳು ನರಗುಂದ ತಾಲ್ಲೂಕು ಆಸ್ಪತ್ರೆ ಎದುರು ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪ್ರತಿಭಟನೆ ನಡೆಸಿದರು.

- Advertisement -

ನರಗುಂದ ಪಟ್ಟಣದ ವಿವೇಕಾನಂದ ಬಡಾವಣೆಯ ವ್ಯಕ್ತಿಯೊಬ್ಬರು ಆರೋಗ್ಯದಲ್ಲಿ ಏರುಪೇರಾದ ಸಂದರ್ಭದಲ್ಲಿ ತಾಲ್ಲೂಕು ಆಸ್ಪತ್ರೆಯ ತುರ್ತು ವಾಹನ 108 ಕರೆ ಮಾಡಿದಾಗ ಬೇರೆ ಕಡೆಗೆ ಪೇಷಂಟ್ ಕರೆದುಕೊಂಡು ಹೋಗಿದೆ” ಎಂದು ಸಿಬ್ಬಂದಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಆದರೆ ತುರ್ತು ವಾಹನವೂ ನರಗುಂದ ತಾಲೂಕ ಆಸ್ಪತ್ರೆ ಆವರಣದಲ್ಲಿ ಇದ್ದರೂ ಸುಳ್ಳು ಹೇಳಿದ್ದಾರೆ. ಸಮಯಕ್ಕೆ ಸರಿಯಾಗಿ ಬರದೇ ವೆಂಕಪ್ಪ ಲಕ್ಷ್ಮಪ್ಪ ಕಲಕೇರಿ ಎಂಬವರು ಮೃತಪಟ್ಟಿದ್ದಾರೆ.

“ಸರಿಯಾದ ಸಮಯಕ್ಕೆ ತುರ್ತು ವಾಹನ ಕಲ್ಪಿಸದ ಸಿಬ್ಬಂದಿಗಳಿಗೆ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ಅಮಾನತುಗೊಳಿಸಬೇಕು. ಮೃತ ವ್ಯಕ್ತಿಯ  ಕುಟುಂಬಕ್ಕೆ ಪರಿಹಾರ ಒದಗಿಸಬೇಕು” ಎಂದು ಮೃತ ವ್ಯಕ್ತಿಯ ಸಂಬಂಧಿಕರು ದಲಿತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನರಗುಂದ ಸಂಚಾಲಕರು ದತ್ತಾತ್ರೇಯ ಜೋಗನ್ನವರ್  ಹೋರಾಟಗಾರರು ನರಗುಂದ ತಾಲೂಕ ಆಸ್ಪತ್ರೆಯ ಅವ್ಯವಸ್ಥೆಯ ಮತ್ತು, ರೋಗಿಗಳಿಗೆ ಸಿಗಬೇಕಾದ ಔಷಧಿ ಉಪಚಾರದ ಬಗ್ಗೆ, ಸಿಬ್ಬಂದಿ ನಿರ್ಲಕ್ಷದ ಬಗ್ಗೆ, ಸ್ವಚ್ಛತೆ ಬಗ್ಗೆ ಆಕ್ರೋಶ” ಹೊರ ಹಾಕಿದರು.

ಬರುವ ದಿನಮಾನಗಳಲ್ಲಿ  ರೋಗಿಗಳಿಗೆ ಸರಿಯಾದ ಆರೋಗ್ಯ ವ್ಯವಸ್ಥೆ ಕಲ್ಪಿಸದೆ ಹೋದಲ್ಲಿ ಉಗ್ರ ಹೋರಾಟ ಮಾಡುವುದಾಗಿ” ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಡಿ ಎಸ್ ಎಸ್ ಮುಖಂಡರು ಸುರಕೋಡ್, ರವಿ ಚಿಂತಾಲ, ಶರಣಪ್ಪ ಛಲವಾದಿ, ವೀರೇಶ್ ಶಿರಹಟ್ಟಿ, ಕಾಜೆಸಾಬ್ ಕಿಲ್ಲೆದಾರ್, ಕಿರಣ್ ವಡಿಗೇರಿ, ಮೈಲಾರಪ್ಪ ಹಿರೇಮನಿ, ಹನುಮಂತ್ ಶಿರಹಟ್ಟಿ ಇನ್ನು ಮುಂತಾದವರು ಉಪಸ್ಥಿತರಿದ್ದರು 

ವರದಿ: ಗುರುನಾಥ ಕೆಂಗಾರಕರ ಸಿಟಿಜನ್ ಜರ್ನಲಿಸ್ಟ್ ನರಗುಂದ

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...