ಗದಗ | ಕುಡಿಯುವ ನೀರು ಪೂರೈಕೆ ವ್ಯತ್ಯಯ ಆಗದಂತೆ ಕ್ರಮ: ಜಿಲ್ಲಾಧಿಕಾರಿ

Date:

ಗದಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು ಮುಂಗಾರು ಆರಂಭದವರೆಗೆ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

- Advertisement -

ಗದಗ ಜಿಲ್ಲೆಯಲ್ಲಿ ಕುಡಿಯುವ ನೀರು ನಿರ್ವಹಣೆ, ಮೇವಿನ ಪೂರೈಕೆ, ಬಿಸಿಗಾಳಿ ಕುರಿತು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರʼ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ತುಂಗಭದ್ರಾ ಮತ್ತು ಮಲಪ್ರಭಾ ನದಿ ಮೂಲಗಳಿಂದ ಕುಡಿಯುವ ನೀರು ಪೂರೈಕೆ, ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ, ಬೋರ್‍ವೆಲ್ ಮೂಲಕ ಕುಡಿಯುವ ನೀರು ಪೂರೈಕೆ  ಹೀಗೆ ವಿವಿಧ ಮೂಲಗಳಿಂದ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಈ ಬಗ್ಗೆ ಗಮನ ಹರಿಸಬೇಕು. ಕುಡಿಯುವ ನೀರು ಸಂಗ್ರಹ ಮತ್ತಿತರ ಬಗ್ಗೆ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಅವರು ಸುದೀರ್ಫವಾಗಿ ಚರ್ಚಿಸಿದರು.

ಕುಡಿಯುವ ನೀರು ಪೂರೈಕೆ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಕುಡಿಯುವ ನೀರು ಸರಬರಾಜಿನಲ್ಲಿ ಸಾರ್ವಜನಿಕರಿಂದ ದೂರು ಬಾರದಂತೆ  ಗಮನ ಹರಿಸುವುದು ಅಧಿಕಾರಿಗಳ ಪ್ರಥಮ ಆದ್ಯತೆ ಆಗಬೇಕು. ಕುಡಿಯುವ ನೀರಿನ ಪೂರೈಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು.

ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು. ತಾಲೂಕು ಮಟ್ಟದಲ್ಲಿ ತಹಸೀಲ್ದಾರರು, ತಾಲೂಕು ಪಂಚಾಯತ್ ಇ.ಒಗಳು, ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಹಾಗೂ ಪಿಡಿಒಗಳ ಜೊತೆ ಸಭೆ ನಡೆಸಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಕುಡಿಯುವ ನೀರು ಪೂರೈಕೆಯಲ್ಲಿನ ನಿರ್ವಹಣೆಯನ್ನು ಸರಿಯಾಗಿ ನಿಭಾಯಿಸಬೇಕು. ಪೈಪ್‍ಲೈನ್‍ಗಳನ್ನು ಆಗಾಗ ಪರಿಶೀಲಿಸಬೇಕು. ಕುಡಿಯುವ ನೀರು ಪೂರೈಸುವುದರ ಜೊತೆಗೆ ಗುಣಮಟ್ಟದ ಬಗ್ಗೆಯೂ ಪ್ರತಿನಿತ್ಯ ಪರಿಶೀಲಿಸಬೇಕು. ಯಾವುದೇ ಕಾರಣಕ್ಕೂ ಉದಾಸೀನ ತೋರಬಾರದು ಎಂದು ಜಿಲ್ಲಾಧಿಕಾರಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಸಂಬಂಧ ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ಕುಡಿಯುವ ನೀರು ಪೂರೈಕೆ ಸಂದರ್ಭದಲ್ಲಿ ಛಾಯಾಚಿತ್ರ ಸಹಿತ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ವ್ಯತ್ಯಯ ಆಗಬಾರದು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮೇವು ಪೂರೈಕೆಯನ್ನು ಸರಿಯಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು.

ಜಿ.ಪಂ.ಸಿ.ಇ.ಒ ಎಸ್.ಭರತ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಹಲವು ಕಡೆ  ಖುದ್ದಾಗಿ ಭೇಟಿ ನೀಡಿ  ಪರಿಶೀಲಿಸಲಾಗುತ್ತಿದೆ. ತಾ.ಪಂ.ಇ.ಒಗಳು ಕುಡಿಯುವ ನೀರು ಪೂರೈಕೆ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಸೂಚಿಸಿದರು.

ತಹಸೀಲ್ದಾರರು, ತಾ.ಪಂ.ಇ.ಒಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ  ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ನೀರಾವರಿ ಎಂಜನೀಯರ್ ಗಳು ತುಂಗಭದ್ರ ಹಾಗೂ ಮಲಪ್ರಭ ನದಿಗಳಲ್ಲಿನ ನೀರು ಸಂಗ್ರಹ ಬಗ್ಗೆ ಮಾಹಿತಿ ನೀಡಿದರು.

ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಎಂ.ಬಿ.ಸಂಕದ, ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಉಪ ವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ನಗರಸಭೆ ಪೌರಾಯುಕ್ತರಾದ ಪ್ರಶಾಂತ್ ವರಗಪ್ಪನವರ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ದ.ಕ. ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ನವೆಂಬರ್‌ 18ರಂದು ಮಂಗಳೂರಿನ ಶ್ರೀ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಕರ್ನಾಟಕ ಸಾಹಿತ್ಯ...

ಉಡುಪಿ | ಕೋಟದಲ್ಲಿ ಶಿಕ್ಷಕರಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಸಮಾರೋಪ

ರಿಷಬ್ ಶೆಟ್ಟಿ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹಾಗೂ ವಿ-ಶೈನ್ ಕೋಚಿಂಗ್ ಸೆಂಟರ್ ಸಹಭಾಗಿತ್ವದಲ್ಲಿ...

ದಕ್ಷಿಣ ಕನ್ನಡ | ನವೆಂಬರ್‌ 22ರಿಂದ ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನವೆಂಬರ್ 22ರಂದು...

ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಮೇಳದ ಸಡಗರ

ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ 2026ರ ಕೃಷಿ ಮೇಳಕ್ಕೆ ಚಾಲನೆ...