ಗದಗ | ಕುಡಿಯುವ ನೀರಿಗೆ ಕೊರತೆಯಾಗದಂತೆ ನಿಗಾ ವಹಿಸಿ; ಶಾಸಕ ಚಂದ್ರು ಲಮಾಣಿ ಸೂಚನೆ

Date:

Advertisements

ಗ್ರಾಮೀಣ ಮತ್ತು ಪಟಣಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕಾರ್ಯನಿರ್ವಹಿಸಲು ಗದಗ ಜಿಲ್ಲೆ ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಕಂದಾಯ ಮತ್ತು ತಹಶೀಲ್ದಾರರ ಕಚೇರಿಯಲ್ಲಿ ನಡೆದ ಬರಗಾಲ ಟಾಸ್ಕ್‌ಫೋರ್ಸ್‌ ಸಭೆಯಲ್ಲಿ ಮಾತನಾಡಿದರು.

“ಗ್ರಾಮೀಣ ಪ್ರದೇಶಗಳಿಗೆ ನೀರಿನ ಕೊರತೆಯಾಗದಂತೆ ಎಚ್ಚರವಹಿಸಿ ಮತ್ತು ಜೆಜೆಎಂಗಳ ದುರಸ್ತಿ ಕಾಮಗಾರಿಯನ್ನು ಬೇಗ ಮುಗಿಸಿ. ಬೇಸಿಗೆಯಲ್ಲಿ ಗ್ರಾಮ ಮತ್ತು ಪಟ್ಟಣಗಳಲ್ಲಿ ನೀರಿನ ಕೊರೆತೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಎಚ್ಚರ ವಹಿಸಬೇಕು” ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisements

ಶಿರಹಟ್ಟಿ ಕ್ಷೇತ್ರದ ಎರಡು ಕಡೆ ಗೋಶಾಲೆ ತೆರೆಯಲು ಸೂಕ್ತವಾದ ಜಾಗವನ್ನು ಪರಿಶೀಲಿಸಿ ಮಾಹಿತಿ ಕೊಡಲು ತಾಲೂಕಿನ ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಪಶುವೈದ್ಯಾಧಿಕಾರಿ ಹವಳದ ಅವರು, “ಶೆಟ್ಟಿಕೇರಿ ಮತ್ತು ಬಾಲೇಹೊಸೂರು ಗ್ರಾಮದಲ್ಲಿ ಕೆರೆಗಳಿದ್ದು, ಅಲ್ಲಿ ನೀರಿನ ವ್ಯವಸ್ಥೆ ಇರುವುದರಿಂದ ಅಲ್ಲಿ ಗೋಶಾಲೆ ತೆರೆಯಲು ಸೂಕ್ತವಾದ ಸ್ಥಳಗಳಿವೆ” ಎಂದು ಸಲಹೆ ಕೊಟ್ಟರು.

“ಬಜಾಜ್ ಅಲೈನ್ಸ್‌ನಿಂದ ಬೆಳೆವಿಮೆ ರೈತರ ಖಾತೆಗೆ ಜಮೆ ಆಗಿದ್ದರಿಂದ ರೈತರಿಗೆ ಅನುಕೂಲವಾಗಿದೆ. ಇನ್ನು ಶೇ.50ರಷ್ಟು ವಿಮೆ ಜಮಾ ಆಗಬೇಕಾಗಿದೆ. ಅದರೂ ಇದರಿಂದ ನ್ಯೂನ್ಯತೆಗಳು ಕಡಿಮೆ ಆದಂತಾಗಿದೆ. ರೈತರ ಖಾತೆಗೆ ಬರಪರಿಹಾರ ಜಮಾ ಆಗಬೇಕಾಗಿದೆ. ‌ಮುಂದಿನ ದಿನಗಳಲ್ಲಿ ಸರ್ಕಾರ ರೈತರ ಖಾತೆಗೆ ಪರಿಹಾರದ ಹಣ ಜಮಾ ಮಾಡುತ್ತದೆಂಬ ಭರವಸೆ ಇದೆ” ಎಂದು ಶಾಸಕ ಚಂದ್ರು ಲಮಾಣಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಸಭೆಯಲ್ಲಿ ಶಾಸಕ ಚಂದ್ರು ಲಮಾಣಿ, ತಹಶೀಲ್ದಾರ್ ವಾಸುದೇವ್ ಸ್ವಾಮಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರಾ, ಗ್ರೇಡ್ ಟು ತಹಶೀಲ್ದಾರ್ ಮಂಜುನಾಥ ಅಮವಾಸೆ, ಕೃಷಿ ಅಧಿಕಾರಿಗಳು, ತೋಟಗಾರಿಕೆ ಅಧಿಕಾರಿಗಳು, ಪಶು ವೈದ್ಯರು, ನೀರು ಸರಬರಾಜು ಅಧಿಕಾರಿಗಳು, ಗ್ರಾಮ ಲೆ‌ಕ್ಕಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X