ಗದಗ | ಮನರೇಗಾ ಕಾಮಗಾರಿ ನಾಮಫಲಕದಲ್ಲಿ ಓಂಬಡ್ಸ್‌ಮನ್ ಸಹಾಯವಾಣಿ ಸಂಖ್ಯೆ ನಮೂದನೆ ಕಡ್ಡಾಯ

Date:

Advertisements

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿ ಕೈಗೊಳ್ಳುವ ಎಲ್ಲ ಕಾಮಗಾರಿಗಳ ನಾಮಫಲಕದಲ್ಲಿ ಕಡ್ಡಾಯವಾಗಿ ಓಂಬಡ್ಸಮನ್ ಮತ್ತು ಆಯುಕ್ತಾಲಯದ ಉಚಿತ ಸಹಾಯವಾಣಿ ನಮೂದಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ ಸೂಚನೆ ನೀಡಿದರು.

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ, ಪು ಬಡ್ನಿ ಮತ್ತು ಬಟ್ಟೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಅವರು ಪರಿಶೀಲಿಸಿದರು. “ಮನರೇಗಾ ಯೋಜನೆಯಲ್ಲಿ ಸಂಪೂರ್ಣ ಮಾಹಿತಿ ಒಳಗೊಂಡ ನಾಮಫಲಕ ಅಳವಡಿಸಲು ಹಣ ಮೀಸಲಿಡಲಾಗಿರುತ್ತದೆ. ಗ್ರಾಮ ಪಂಚಾಯತಿ ಹಂತದ ಸಿಬ್ಬಂದಿ ಮೇಲೆ ತಾಲೂಕು ಹಂತದ ಸಿಬ್ಬಂದಿ ಮೇಲ್ವಿಚಾರಣೆ ಮಾಡಬೇಕು. ನಾಮ ಫಲಕದಲ್ಲಿ ಜನರಿಗೆ ಮಾಹಿತಿ ದೊರಕುವಂತೆ ಮಾಡಬೇಕು” ಎಂದರು.

“ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಆಸ್ತಿ ಸೃಜನೆ ಮಾಡುವ ಮೂಲಕ ಅವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಕೆಲಸ ಮಾಡಬೇಕು. ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರೀತಿಯ ಲೋಪ ಆಗದಂತೆ ನಿಗಾವಹಿಸಬೇಕು” ಎಂದು ಸೂಚಿಸಿದರು.

Advertisements

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಧರ್ಮರ, ಪಿಡಿಒ ಎಂ.ಆರ್ ಮಾದರ, ಕಾರ್ಯದರ್ಶಿ ಎಸ್.ಕೆ ಡಂಬಳ, ತಾಂತ್ರಿಕ ಸಂಯೋಜಕ ಅರುಣಕುಮಾರ ತಂಬ್ರಳ್ಳಿ, ತಾಂತ್ರಿಕ ಸಹಾಯಕರಾದ ಸುರೇಶ ಬಳ್ಳಾರಿ, ವಿ.ಎಸ್ ಅಳವಂಡಿಮಠ, ಲಿಂಗರಾಜ ಅರಿಷಿಣದ, ಬಿಎಫ್‌ಟಿ ಸತೀಶ ಅರಿಷಿಣದ, ಶಿಲ್ಪಾ ಲಮಾಣಿ, ಗ್ರಾಪಂ ಸಿಬ್ಬಂದಿ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪತಿ ಅಂತ್ಯಕ್ರಿಯಲ್ಲಿ ಪತ್ನಿ ಸಾವು; ಸಾವಿನಲ್ಲೂ ಒಂದಾದ ದಂಪತಿ

ಪತಿ ಅಂತ್ಯಕ್ರಿಯೆ ವೇಳೆ ಪತ್ನಿಯೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ...

ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ...

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

Download Eedina App Android / iOS

X