ಗದಗ | ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಡಾ. ರಾಜೇಂದ್ರ ಗಡಾದ

Date:

“ಪ್ಲಾಸ್ಟಿಕ್‌ನಂತಹ ವಿಷಕಾರಿ ವಸ್ತುಗಳು ನೈಸರ್ಗಿಕ ಸಂಪನ್ಮೂಲಗಳಾದ ಮಣ್ಣು, ನೀರು, ಗಾಳಿ ಇವುಗಳೊಂದಿಗೆ ಬೆರೆಯುವುದರಿಂದ ಹಾಳಾಗುತ್ತವೆ. ಹಾನಿಕಾರಕ ಪದಾರ್ಥಗಳು ಪರಿಸರದೊಂದಿಗೆ ಬೆರೆತು ಜೀವಿಗಳ ಆರೋಗ್ಯಕ್ಕೆ ಸಂಚಕಾರ ಮಾಡತ್ತವೆ. ಮಾರಣಾಂತಿಕ ಕಾಯಿಲೆಗಳಿಗೆ ನೂಕುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರವನ್ನು ಜವಾಬ್ದಾರಿಯಿಂದ ರಕ್ಷಣೆ ಮಾಡಬೇಕು” ಎಂದು ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಡಾ. ರಾಜೇಂದ್ರ ಎಸ್ ಗಡಾದ ಅವರು ಹೇಳಿದರು.

- Advertisement -

ಗದಗ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ವತಿಯಿಂದ ಪಟ್ಟಣದ ದಂಡಪ್ಪ ಮಾನ್ವಿ ಹೆರಿಗೆ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದ್ದ ರಾಷ್ಟೀಯ ಮಾಲಿನ್ಯ ನಿಯಂತ್ರಣ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಪರಿಸರ ಮಾಲಿನ್ಯ ಜೀವಸಂಕುಲದ ಮೇಲೂ ಅಪಾರವಾದ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತಿದೆ. ಇದು ಹಲವು ರೋಗಗಳಿಗೆ ಕಾರಣವಾಗಿದೆ. ಮುಂದಿನ ಪೀಳಿಗೆಗೆ ಉತ್ತಮ ಜೀವನ, ಉತ್ತಮ ಪರಿಸರ ಅಗತ್ಯವಾಗಿದದ್ದು. ಮಾಲಿನ್ಯ ಮುಕ್ತ ಪರಿಸರಕ್ಕೆ ಸಾರ್ವಜನಿಕರು ನಾಗರಿಕರು ವಿದ್ಯಾರ್ಥಿಗಳು ಮಹಿಳೆಯರು ಸ್ವಯಂ ಜಾಗೃತರಾಗಿ ಶ್ರಮಿಸಬೇಕಾಗಿದೆ” ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಶ್ರೀಮತಿ ಸುಧಾ ಬೆಂತೂರ, ಗುಡದಪ್ಪ ಜಗ್ಗಿನ ಭೂದೇಶ್ ಸಿದ್ದನಗೌಡರ ಆಸೀನರಾಗಿದ್ದರು.

ಆರಂಭದಲ್ಲಿ ಶ್ರೀಮತಿ ನಿರ್ಮಲ ಮರಿಗೌಡ ಪ್ರಾರ್ಥಿಸಿದರು ಲೀಲಾವತಿ ಚಲವಾದಿ ಸ್ವಾಗತಿಸಿದರು. ಬಿಎಸ್ ಸಿದ್ದನಗೌಡ ಕಾರ್ಯಕ್ರಮ ರೂಪಿಸಿದರು ಕೊನೆಯಲ್ಲಿ ಮೌಲಾನ ಸಿದ್ದಿ ವಂದಿಸಿದರು. ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಸಾರ್ವಜನಿಕರು ವಿದ್ಯಾರ್ಥಿಗಳು ಮಕ್ಕಳು ಮತ್ತು ರೋಗಿಗಳು ಪಾಲಕರು ಪಾಲ್ಗೊಂಡಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...