ಗದಗ | ನರಗುಂದ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಿಗೆ ಇಒ ಭೇಟಿ; ಸಿದ್ಧತೆಗೆ ಸೂಚನೆ

Date:

ಗದಗ ಜಿಲ್ಲೆ ನರಗುಂದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನರಗುಂದ ವಿಧಾನಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಗಳಾದ ಸೋಮಶೇಖರ್ ಬಿರಾದರ್ ಅವರು ತಾಲೂಕಿನ ಲೋಕಸಭಾ ಚುನಾವಣೆಗಳ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ತಾಲೂಕಿನ ಹುಣಶೀಕಟ್ಟಿ, ಕನಕಿಕೊಪ್ಪ ಹಾಗೂ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿದ ಸೋಮಶೇಖರ್ ಬಿರಾದರ್ ಅವರು, ಮತಗಟ್ಟೆ ಕೇಂದ್ರಗಳು ಸರಿಯಾದ ಗಾಳಿ ಬೆಳಕಿನ ವ್ಯವಸ್ಥೆ ಹೊಂದಿರುವುದರ ಬಗ್ಗೆ ಪರಿಶೀಲಿಸಿದರು. ಹುಣಶೀಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ‌ 145 ಮತ್ತು 146 ಸಂಖ್ಯೆಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮತಗಟ್ಟೆ ಕೇಂದ್ರಗಳಲ್ಲಿ ಮತದಾರರು ಯಾವುದೇ ಸಮಸ್ಯೆಗಳಿಲ್ಲದೆ ನಿರ್ಭೀತರಾಗಿ ತಮ್ಮ ಮತ ಚಲಾಯಿಸಲು ಸಕಲ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮತಗಟ್ಟೆ ಕೇಂದ್ರದ ಮುಂದೆ ರ‍್ಯಾಂಪ್ ವ್ಯವಸ್ಥೆ, ಕೇಂದ್ರದ ಒಳಗಡೆ ಫ್ಯಾನ್ ಮತ್ತು ವಿದ್ಯುತ್ ಸಂಪರ್ಕದ ವ್ಯವಸ್ಥೆ, ಚುನಾವಣೆ ಕರ್ತವ್ಯಕ್ಕೆ ಬರುವ ಅಧಿಕಾರಿಗಳು ಉಳಿದುಕೊಳ್ಳಲು ಕೊಠಡಿಯ ವ್ಯವಸ್ಥೆ, ಮತಗಟ್ಟೆ ಕೇಂದ್ರದಲ್ಲಿ ಶೌಚಾಲಯ ವ್ಯವಸ್ಥೆ, ಶೌಚಾಲಯದಲ್ಲಿ ನೀರಿನ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪರಿಶೀಲನೆ ವೇಳೆ ಜಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಕೇಂದ್ರ 144ರ ಬಾಗಿಲು ದುರಸ್ಥಿಗೊಂಡಿರುವುದು ಕಂಡುಬಂದಿತು. ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಶೀಘ್ರದಲ್ಲೇ ಬಾಗಿಲನ್ನು ಬದಲಾಯಿಸಿ ಸರಿಪಡಿಸುವಂತೆ ಸೂಚಿಸಿದರು.

ಚುನಾವಣೆ ಕರ್ತವ್ಯದ ಜತೆಗೆ ಶಾಲಾ ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟವನ್ನು ಸ್ವತಃ ಶಾಲೆಯಲ್ಲಿ ಬಿಸಿಯೂಟ ಸವಿಯುವ ಮೂಲಕ ಪರಿಶೀಲಿಸಿದರು. ಚಿಕ್ಕನರಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಹೈಸ್ಕೂಲ್ ಶಾಲೆಯಲ್ಲಿ ಮಕ್ಕಳ ಜೊತೆ ಇಒ ಸೋಮಶೇಖರ್ ಬಿರಾದರ್ ಅವರು ಬಿಸಿಯೂಟ ಸವಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಮೋಸ; ರೈತ ಸಂಘಟನೆ ಆರೋಪ

ಈ ವೇಳೆ ಅಡುಗೆ ಕೋಣೆಗೆ ತೆರಳಿ ಅಡುಗೆ ಸಾಮಾಗ್ರಿಗಳನ್ನು ಪರಿಶೀಲಿಸಿ ಅಡುಗೆಗೆ ಬಳಸುವ ತರಕಾರಿ, ಬೇಳೆ ಕಾಳುಗಳ ಗುಣಮಟ್ಟವನ್ನು ಪರಿಶೀಲಿಸಿದರು. ಮಕ್ಕಳಿಗೆ ನೀಡುವ ಅಡುಗೆಯಲ್ಲಿ ತರಕಾರಿಗಳನ್ನು ಹೆಚ್ಚಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಅಲ್ಲದೆ ಸರ್ಕಾರ ಮಕ್ಕಳ ಕಲಿಕೆಗೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಿದೆ. ಸರ್ಕಾರದ ಈ ಸೌಲಭ್ಯಗಳನ್ನು ಶಾಲಾ ಮಕ್ಕಳ ಸದುಪಯೋಗಪಡಿಸಿಕೊಂಡು ಕಲಿಕೆಯಲ್ಲಿ ಮೇಲುಗೈ ಸಾಧಿಸಬೇಕೆಂದು ಮಾರ್ಗದರ್ಶನ ಮಾಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...