ಗದಗ | ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪೋಲಿಯೊ ಲಸಿಕೆ ಹಾಕಿಸಿ: ಪ್ರೊ. ಎಸ್.ವಿ. ಸಂಕನೂರ

Date:

“ಪೋಲಿಯೊ ಮುಕ್ತ ಭಾರತ ನಿರ್ಮಾಣದ ಸಂಕಲ್ಪವನ್ನು ಯಶಸ್ವಿಗೊಳಿಸಲು ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪೋಲಿಯೊ ಲಸಿಕೆ ಹಾಕಿಸ” ಎಂದು ವಿಧಾನ ಪರಿಷತ್ ಶಾಸಕ ಪ್ರೊ. ಎಸ್.ವಿ. ಸಂಕನೂರ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

- Advertisement -

ಗದಗ ನಗರದ ಎಂಸಿಎಚ್ ಆಸ್ಪತ್ರೆಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಮಗುವಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಪೋಲಿಯೊ ಎಂಬುದು ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯ ಉಂಟುಮಾಡುವ ಗಂಭೀರ ವೈರಾಣುಜನ್ಯ ಕಾಯಿಲೆಯಾಗಿದ್ದು, ಅದರ ವಿರುದ್ಧದ ಅತ್ಯಂತ ಪರಿಣಾಮಕಾರಿ ರಕ್ಷಣೆಯೇ ಪೋಲಿಯೊ ಲಸಿಕೆ” ಎಂದು ತಿಳಿಸಿದರು. 

“ದೇಶದಲ್ಲಿ ಪೋಲಿಯೊ ನಿರ್ಮೂಲನೆ ಸಾಧನೆಯಾಗಿದ್ದರೂ, ಈ ಸಾಧನೆಯನ್ನು ಶಾಶ್ವತವಾಗಿ ಉಳಿಸಿಕೊಳ್ಳಲು ಪ್ರತಿಯೊಂದು ಲಸಿಕಾ ಸುತ್ತಿನಲ್ಲೂ ಯಾವುದೇ ಮಗು ವಂಚಿತವಾಗದಂತೆ ನೋಡಿಕೊಳ್ಳುವುದು ಅತ್ಯಗತ್ಯವಾಗಿದೆ” ಎಂದರು.

“ಸರ್ಕಾರವು ಮಕ್ಕಳ ಆರೋಗ್ಯ ರಕ್ಷಣೆಗಾಗಿ ಉಚಿತವಾಗಿ ಪೋಲಿಯೊ ಲಸಿಕೆಯನ್ನು ನೀಡುತ್ತಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ ಹಾಕಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ. ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆ-ಮನೆಗೆ ತೆರಳಿ ಹಾಗೂ ವಿವಿಧ ಕೇಂದ್ರಗಳಲ್ಲಿ ಲಸಿಕೆ ನೀಡಲಿದ್ದು, ಪೋಷಕರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಕರೆ ನೀಡಿದರು.

“ಪೋಲಿಯೊ ನಿರ್ಮೂಲನೆಗೆ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸಾರ್ವಜನಿಕರು ಸಹ ಇಲಾಖೆಯೊಂದಿಗೆ ಕೈಜೋಡಿಸಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು” ಎಂದು ಶಾಸಕ ಎಸ್ ವಿ ಸಂಕನೂರ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, “ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ವಿವಿಧ ಲಸಿಕಾ ಕೇಂದ್ರಗಳಲ್ಲಿ ಪೋಲಿಯೊ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಲಸಿಕೆ ಪಡೆಯದೆ ಉಳಿದ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯವೂ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರೆಗೌಡ್ರ, ಜಿಲ್ಲಾ ನೋಡಲ್ ಅಧಿಕಾರಿ ಡಾ. ಶಿವಕುಮಾರ ಮಾನಕರ, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....