ಗದಗ | ಪ್ರತಿಯೊಬ್ಬರಿಗೂ ಸಂವಿಧಾನದ ಪೀಠಿಕೆಯ ಕುರಿತು ತಿಳುವಳಿಕೆ ಅಗತ್ಯ: ಸುದೇಶ್‌

Date:

ಪ್ರತಿಯೊಬ್ಬರಿಗೂ ಸಂವಿಧಾನದ ಪೀಠಿಕೆಯ ಕುರಿತು ತಿಳುವಳಿಕೆ ಇರುವುದು ಅಗತ್ಯವಾಗಿದೆ ಎಂದು ಕೇರಳದ ಲೋಕಲ್ ಸೆಲ್ಫ್ ಗವರ್ನಮೆಂಟ್‍ನ ಜಂಟಿ ನಿರ್ದೇಶಕ ಸುದೇಶ್‌ ಅವರು ತಿಳಿಸಿದರು.

- Advertisement -

ಗದಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸಂವಿಧಾನ ಪೀಠಿಕೆ ಹಾಗೂ ಆಶಯದ ಕುರಿತು ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕೇರಳ ರಾಜ್ಯದ ಕೊಲ್ಲಂ ಜಿಲ್ಲೆ ಪ್ರತಿ ಮನೆಗಳಿಗೆ ಸಂವಿಧಾನವನ್ನು ತಿಳಿಸಿ ಸಂವಿಧಾನದ ಸಾಕ್ಷರತೆ ಸಾಧಿಸಿದ ಏಕೈಕ ಜಿಲ್ಲೆಯಾಗಿದೆ. ನಮ್ಮ ದೇಶದಲ್ಲಿ ಗದಗ ಜಿಲ್ಲೆಯಲ್ಲಿ ಸಂವಿಧಾನದ ಸಾಕ್ಷರತೆಯನ್ನು ಸಾಧಿಸಿ ಕರ್ನಾಟಕದಲ್ಲಿ ಪ್ರಥಮ ಸ್ಥಾನದಲ್ಲಿರಬೇಕು. ಇಡೀ ಭಾರತ ದೇಶಕ್ಕೆ ಸ್ಪೂರ್ತಿ ಕೊಡುವಂತಹದ್ದಾಗಬೇಕು. 10 ವರ್ಷದ ಮಕ್ಕಳಿಂದ ಎಲ್ಲ ವಯಸ್ಸಿನವರಿಗೂ ಸಂವಿಧಾನದ ಪೀಠಿಕೆಯ ಬಗ್ಗೆ ತಿಳಿದಿರಬೇಕು” ಎಂದರು.

“ಸಂವಿಧಾನ ಜಾರಿಯಾದ ಬಳಿಕ ಎಲ್ಲರಿಗೂ ಘನತೆ ಹಾಗೂ ವ್ಯಕ್ತಿತ್ವ ತಂದುಕೊಟ್ಟಿತು. ಅದಕ್ಕಾಗಿ ಸಂವಿಧಾನವು ನಮ್ಮದು ಎನ್ನುವ ಮನೋಭಾವವನ್ನು ನಾವೆಲ್ಲರೂ ಹೊಂದಬೇಕು. ಇದರ ವೈಶಿಷ್ಟ್ಯಗಳು ನಮಗೆಲ್ಲ ಗೌರವ ತಂದುಕ್ಕೊಟ್ಟಿದಕ್ಕಾಗಿ ಈ ಸಂವಿಧಾನದ ಪ್ರಣಾಳಿಕೆಯನ್ನು ಭಾರತದ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು” ಎಂದರು.

“ಸಂವಿಧಾನವನ್ನು ಸಾಮಾಜಿಕವಾಗಿ ಮತ್ತು ಸಾರ್ವಜನಿಕ ಸಂಘ ಸಂಸ್ಥೆಗಳಲ್ಲಿ ಆಚರಿಸಬೇಕು. ಸರ್ಕಾರಿ ಶಾಲೆ, ಕಚೇರಿ ಹಾಗೂ ಸಂಸ್ಥೆಗಳಲ್ಲಿ, ಮನೆ ಮನೆಗಳಲ್ಲಿ ಸಂವಿಧಾನದ ಪೀಠಿಕೆಯ ಕಿರು ಪುಸ್ತಕವನ್ನು ಇಡಬೇಕು” ಎಂದು ಸೂಚಿಸಿದರು.

“ಸಂವಿಧಾನ ನಮಗೆ ಗೌರವ, ಘನತೆ, ಸ್ಥಾನಮಾನ, ಅಧಿಕಾರವನ್ನು ಕೊಟ್ಟಿದೆ. ಈ ಸಂವಿಧಾನದಿಂದ ಅನೇಕ ಜನ ತಮ್ಮ ಅಮೂಲ್ಯವಾದ ಜೀವನವನ್ನು ಜೈಲಿನಲ್ಲಿ ಕಳೆದಿದ್ದಾರೆ. ಜನ ಬ್ರಿಟೀಷರ ಲಾಠಿ ಏಟು ಹಾಗೂ ಗುಂಡೇಟುಗಳಿಗೆ ತಮ್ಮ ಪ್ರಾಣವನ್ನು ತ್ಯಾಗಮಾಡಿದ್ದಾರೆ. ತ್ಯಾಗದ ಪ್ರತಿಫಲವಾಗಿ ಇಂದು ಭಾರತೀಯ ಸಂವಿಧಾನ ಪೀಠಿಕೆಯನ್ನು ಹೊಂದಲು ಸಾಧ್ಯವಾಯಿತು” ಎಂದರು.

WhatsApp Image 2023 10 12 at 19.20.18

“ಮೂಲ ತತ್ವಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಅನುಕಂಪ ಇವುಗಳು ಪೀಠಿಕೆಯಲ್ಲಿವೆ. ಈ ಮೂರೂ ತತ್ವಗಳು ನಮ್ಮ ಬದುಕನ್ನು ರೂಪಿಸಿಕೊಟ್ಟಿವೆ. ಸಂವಿಧಾನ ರಚನೆಗೂ ಮುನ್ನ ಜಗತ್ತಿನ ಶ್ರೇಷ್ಠ ಸಂವಿಧಾನಗಳ ಅಧ್ಯಯನ ಮಾಡಿ ನಮ್ಮ ಸಂವಿಧಾನವನ್ನು ರಚಿಸಲಾಗಿದೆ. ನಾವು ದೇವರ ಕೋಣೆಯಲ್ಲಿ ಹೇಗೆ ದೇವರ ಫೋಟೋವನ್ನು ಪೂಜಿಸುತ್ತೇವೆಯೋ ಹಾಗೆಯೇ ಸಂವಿಧಾನ ಪುಸ್ತಕವನ್ನು ಪೂಜಿಸಬೇಕು. ಈ ಪೂಜೆಯನ್ನು ನಮ್ಮ ಕೇರಳ ರಾಜ್ಯದ ಕೋಳಂ ಎಂಬ ಊರಿನಲ್ಲಿ ಈಗಲೂ ಕಾಣಬಹುದಾಗಿದೆ” ಎಂದು ಹೇಳಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿ, “ಸಂವಿಧಾನವೇ ನಮ್ಮ ಉಸಿರು. ಇದು ಎಲ್ಲರಿಗೂ ಸ್ವತಂತ್ರವಾಗಿ ಬದುಕಲು ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ನಮ್ಮ ದೇಶದಲ್ಲಿ ವಿದ್ಯಾಭ್ಯಾಸ, ಸರ್ಕಾರಿ ಕೆಲಸ, ರಾಜಕೀಯ ಮತ್ತು ವಿಶೇಷವಾಗಿ ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಧ್ಯತೆ ನೀಡಿರುವುದು ನಮ್ಮ ಸಂವಿಧಾನದಿಂದಲೇ. ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನಮ್ಮ ಗದಗ ಜಿಲ್ಲೆಯಲ್ಲಿ ಪ್ರತಿಯೊಂದು ಮನೆ ಮನೆಯಲ್ಲಿ ಸಂವಿಧಾನ ಪೀಠಿಕೆಯ ಕಿರು ಪುಸ್ತಕವನ್ನು ಪ್ರತಿದಿನ ಜಿಲ್ಲೆಯ ಜನರು ಹೆಚ್ಚಿನ ಪ್ರಮಾಣದಲ್ಲಿ ಓದುವುದರಿಂದ ನಮ್ಮ ಜಿಲ್ಲೆ ರಾಜ್ಯಕ್ಕೆ ಪ್ರಥಮಸ್ಥಾನ ಪಡೆಯುವ ಹಾಗೆ ಆಗಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಉಪನ್ಯಾಸ ಕಾರ್ಯಕ್ರಮದ ಉದ್ಘಾಟನೆ ನಂತರ ಸಂವಿಧಾನದ ಪೀಠಿಕೆಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಹುಲಕೋಟಿಯ ಸಹಕಾರ ರೇಡಿಯೋ ನಿರ್ದೇಶಕ ಜೆ ಕೆ ಜಮಾದರ ಅವರು ಸಂವಿಧಾನದ ಉಪನ್ಯಾಸವನ್ನು ಕನ್ನಡ ಭಾಷೆಗೆ ಅನುವಾದ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಹಿಂಡಲಗಾ ಜೈಲು ಸ್ಫೋಟಿಸುವ ಬೆದರಿಕೆ; ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರ ಸಭೆ ಅದ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಶಾಸಕ ಡಿ ಆರ್ ಪಾಟೀಲ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಲ್ಲಾ ಪಂಚಾಯತ್ ಉಪ‌ ಕಾರ್ಯದರ್ಶಿ ಸಿ ಆರ್ ಮುಂಡರಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರವಿ ಗುಂಜೀಕರ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಜಿಲ್ಲಾ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಇಲಾಖೆಯ ಸಹಾಯಕ ನಿರ್ದೇಶಕ ಮಹಾಂತೇಶ ಕೆ, ನಗರಸಭೆ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...