ಗದಗ | ಅವಧಿ ಮುಗಿದ ಔಷಧಿ ವಿತರಣೆ; ಮಹಿಳೆ ಸೆವಿಸಿ ಅಸ್ವಸ್ಥ

Date:

ಶಿರಹಟ್ಟಿ ಪಟ್ಟಣದಲ್ಲಿ ಇರುವ ತಾಲೂಕು ಆಸ್ಪತ್ರೆಗೆ ಖಾನಾಪೂರ ಗ್ರಾಮದ ಮಹಿಳಾ ರೋಗಿ ಆಶಾಬಿ ದೊಡ್ಡಮನಿ ಅವರಿಗೆ ಸರಕಾರಿ ಆಸ್ಪತ್ರೆಯ ವೈದ್ಯರು ಅವಧಿ ಮುಗಿದಿರುವ ಔಷಧಗಳನ್ನು ನೀಡಿದ್ದಾರೆ. ಕೇಳಲುಬಹೋದ ಮುಖಂಡರ ಮೇಲೆ ಪ್ರಕರಣ ದಾಖಲಿಸಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

- Advertisement -

ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಖಾನಾಪುರ ಗ್ರಾಮದ ಆಶಾಬಿ ದೊಡ್ಡಮನಿ ಎಂಬ ಮಹಿಳೆ ಮಾನಸಿಕ ರೋಗದಿಂದ ಬಳಲುತ್ತಿದ್ದು, ಫೆ.17ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆ ನಂತರ ವೈದ್ಯ ಡಾ.ಗೋಪಾಲರಾಜ್ ಅವಧಿ ಮುಗಿದ ಮಾತ್ರೆ ನೀಡಿ ಕಳುಹಿಸಿದ್ದಾರೆ. ಎರಡು ದಿನ ಮಾತ್ರೆ ತೆಗೆದುಕೊಂಡ ಮಹಿಳೆ ಅಸ್ವಸ್ಥಗೊಂಡಾಗ ಮನೆಯವರು ಔಷಧಿ ಅವಧಿ ಪರಿಶೀಲಿಸಿದ್ದು, 2026 ಜನವರಿ 1ಕ್ಕೆ ಅವಧಿ ಮುಗಿದ ಮಾತ್ರೆ ವಿತರಿಸಿದ್ದಾರೆ ಎಂದು ರೋಗಿಯ ಮನೆಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸ್ಥಳೀಯ ಮುಖಂಡರು ಆಸ್ಪತ್ರೆ ತೆರಳಿ ಅವಧಿ ಮುಗಿದ ಔಷಧಿ ಯಾಕೆ ವಿತರಣೆ ಮಾಡಿದ್ದೀರಿ ಎಂದು ಕೇಳಿದವರ ಮೇಲೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಗೋಪಾಲರಾಜ್  ನೀವು ಯಾರು ಕೇಳೋಕೆ? ಎಂದು ಎರುಧನಿಯಲ್ಲಿ ಕೇಳಿ ಮುಖಂಡ ಪ್ರಕಾಶ ಬಂಡೆನ್ನವರ ಹಾಗೂ  ಶಿಶಿರ ಪಾಟೀಲ್ ಎಂಬುವವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. 

ಈ ಘಟನೆಗೆ ಸಾರ್ಜನಿಕರು ಪ್ರತಿಕ್ರೀಯೆ ನೀಡಿದ್ದು, “ಆಸ್ಪತ್ರೆಗೆ ಕೇಳಲು ಬಂದವರ ಮೇಲೆ ಪ್ರಕರಣ ದಾಖಲು ಮಾಡುವ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತನೆ ಮಾಡುತ್ತಿದ್ದಾನೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಕೊಡುವುದಿಲ್ಲ, ಔಷಧಿಗಳನ್ನು ಹೊರಗೆ ಬರೆದುಕೊಡುತ್ತಾರೆ. ವೈದ್ಯರು ರೋಗಿಗಳ ಜೀವದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಕುರಿತು ಗದಗ ಜಿಲ್ಲೆ ಡಿಎಚ್ಓ ಈದಿನ.ಕಾಮ್ ಜೊತೆಗೆ ಮಾತನಾಡಿದ ಅವರು”ಆಸ್ಪತ್ರೆಗೆ ಎಡಿಸಿ ಅವರು ಭೇಟಿ ಮಾಡಿ ಪರೀಸಿಲನೆ ಮಾಡಿದ್ದು, ಇನ್ನೂ ವರದಿ ಬಂದಿಲ್ಲ. ಬಂದ ನಂತರ ವರದಿ ನೋಡಿ ಮುಂದಿನ ಕ್ರಮ ಕೈಗೊಳುತ್ತೇವೆ” ಎಂದು ಪ್ರತಿಕ್ರೀಯೆ ನೀಡಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...