ಗದಗ | ಕೊಳವೇ ಬಾವಿಯಲ್ಲಿ ನೀರಿಲ್ಲದೆ ಒಣಗುತ್ತಿದೆ ಶೇಂಗಾ

Date:

ಕೊಳವೆ ಬಾವಿಗಳನ್ನು ನಂಬಿಕೊಂಡು ಶೇಂಗಾ ಬಿತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರೈತರು ಅಂತರ್ಜಲ ಕುಸಿತದಿಂದ ಬೆಳೆಗೆ ನೀರು ಸಾಲದೆ ಹೊಲಗಳನ್ನು ಉಳುಮೆ ಮಾಡಿ, ನೆಲಸಮ ಮಾಡುತ್ತಿದ್ದಾರೆ.

- Advertisement -

ಕೊಳವೆ ಬಾವಿ ಸೌಲಭ್ಯ ಇರುವ ರೈತರು ನೂರಾರು ಹೆಕ್ಟೇರ್‌ನಲ್ಲಿ ಬೇಸಿಗೆ ಶೇಂಗಾ ಬಿತ್ತಿದ್ದರು. ಲಕ್ಷ್ಮೆಶ್ವರದ ರೈತ ಸಂಪರ್ಕ ಕೇಂದ್ರದಿಂದ ಈ ವರ್ಷ 550 ಕ್ವಿಂಟಲ್ ಶೇಂಗಾ ಬೀಜ ಮಾರಾಟ ಮಾಡಲಾಗಿತ್ತು. ಅದರಂತೆ ರೈತರು ಕಷ್ಟಪಟ್ಟು ಶೇಂಗಾ ಬಿತ್ತನೆ ಕೂಡ ಮಾಡಿದ್ದರು. ಆದರೆ, ಈಗ ಕೊಳವೆಬಾವಿಗಳು ಬತ್ತುವ ಹಂತಕ್ಕೆ ಬಂದಿದ್ದು ಶೇಂಗಾ ಬೆಳೆಗೆ ನೀರು ಸಾಲದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹೀಗಾಗಿ ಬಿತ್ತಿದ್ದ ಬೆಳೆಯನ್ನು ರೈತರು ಉಳುಮೆ ಮಾಡಿ, ನೆಲಸಮ ಗೊಳಿಸಿದ್ದಾರೆ. ತಾಲೂಕಿನಾದ್ಯಂತ ಒಟ್ಟು 4,592 ಕೊಳವೆ ಬಾವಿಗಳು ಇವೆ. ಲಕ್ಷ್ಮೇಶ್ವರ ಸಮೀಪದ ಉಂಡೇನಹಳ್ಳಿ ಗ್ರಾಮದಲ್ಲಿ ರೈತರು ಬರೋಬ್ಬರಿ 450ಕ್ಕೂ ಕೊಳವೆ ಬಾವಿಗಳನ್ನು ಕೊರೆಸಿದ್ದಾರೆ. ಈ ಬಾರಿಯ ಮುಂಗಾರು ಮತ್ತು ಹಿಂಗಾರು ಮಳೆಗಳು ಸರಿಯಾಗಿ ಆಗದ ಕಾರಣ ಅಂತರ್ಜಲಮಟ್ಟ ದಿನದಿಂದ ದಿನಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ.

ಕೊಳವೆ ಬಾವಿಗಳನ್ನೇ ನೆಚ್ಚಿದ್ದ ರೈತರ ಭಲವೇ ಕುಸಿದಂತಾಗಿದೆ. ಶೇಂಗಾ ಬಿತ್ತನೆಗೆ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿದ್ದಾರೆ. ಈಗ ನೀರಿಲ್ಲದೆ ರೈತರಲ್ಲಿ ಆತಂಕ ಮನೆಮಾಡಿದೆ. ಬೋರ್‌ವೆಲ್‌ಗಳನ್ನು ನಂಬಿ ಸಾಲಸೋಲ ಮಾಡಿ ಬೀಜ ತಂದು ಶೇಂಗಾ ಬಿತ್ತಿದ್ದೇವು ಈಗ ಬೆಳೆಕೈಗೆ ಬರದೆ ಸಂಕಷ್ಟಕ್ಕೆ ಸಿಲುಕಿದ್ದೇವೆ ಎನ್ನುತ್ತಿದ್ದಾರೆ ತಾಲೂಕಿನ ರೈತರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...