ಗದಗ | ನಿರಂತರ ಮಳೆಗೆ ಜಮೀನಿನಲ್ಲೇ ಕೊಳೆತ ಈರುಳ್ಳಿ ಬೆಳೆ: ರೈತರು ಕಂಗಾಲು

Date:

ನಿರಂತರ ಮಳೆ ಸುರಿದ ಪರಿಣಾಮವಾಗಿ ಕೊಯ್ಲಿಗೆ ಬಂದಿದ್ದ ಈರುಳ್ಳಿ ಜಮೀನಿನಲ್ಲೇ ಕೊಳೆತು ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದ್ದು, ಗದಗ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.

- Advertisement -

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ರೈತ ಬಸರವಡ್ಡಿ ದೇವಪ್ಪ ಬಂಡಿಹಾಳ ಅವರ ನಾಲ್ಕು ಎಕರೆ ಜಮೀನಿನಲ್ಲಿ ಈರುಳ್ಳಿ ಬಿತ್ತನೆ ಮಾಡಿದ್ದರು. ಉತ್ತಮ ಫಸಲು ಬಂದಿತ್ತು. ಕೊಯ್ಲು ಮಾಡಬೇಕು ಎನ್ನುವಷ್ಟರಲ್ಲೇ ನಿರಂತರವಾಗಿ ಮಳೆ ಸುರಿದ ಪರಿಣಾಮ ಜಮೀನಿನಲ್ಲೇ ಕೊಳೆತಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರಂಟೆ–ಕುಂಟೆ, ಬೀಜ, ಗೊಬ್ಬರ, ಕಳೆ, ನೀರು ಹಾಯಿಸುವುದು ಹಾಗೂ ಇತರ ಕೃಷಿ ಚಟುವಟಿಕೆ ಸೇರಿ ಪ್ರತಿ ಎಕರೆಗೆ ₹40 ಸಾವಿರ ಖರ್ಚು ಬರುತ್ತದೆ. ನಾಲ್ಕು ಎಕರೆಗೆ ₹400 ಪ್ಯಾಕೆಟ್ ಈರುಳ್ಳಿ ಆಗುತ್ತಿತ್ತು. ಬೆಳೆಯು ಉತ್ತಮವಾಗಿತ್ತು. ಇಳುವರಿ ಚೆನ್ನಾಗಿ ಬರುತ್ತಿತ್ತು. ಈಗಿನ ಮಾರುಕಟ್ಟೆ ದರ ಕನಿಷ್ಠ ಕ್ವಿಂಟಲ್‌ಗೆ ₹ 3 ಸಾವಿರದಂತೆ ಮಾರಾಟವಾಗಿದ್ದರೂ ₹5ರಿಂದ ₹6 ಲಕ್ಷ ಆದಾಯ ಬರುತ್ತಿತ್ತು” ಎಂದು ರೈತ ಬಸವರಡ್ಡಿ ಬಂಡಿಹಾಳ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಈರುಳ್ಳಿ 3

ಮಳೆಯ ಪರಿಣಾಮವಾಗಿ ಗ್ರಾಮದ ಬಹುತೇಕ ರೈತರ ಈರುಳ್ಳಿ ಬೆಳೆಗೆ ಹಾನಿಯಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಅಧಿಕಾರಿಗಳು ಬೆಳೆ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಅರಕಲಗೂಡು | ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಬಂಧಿಸಲು ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ಈ ಬಗ್ಗೆ ಮಾಹಿತಿ ನೀಡಿರುವ ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿ ಮಹ್ಮದ ರಫಿ ಎಂ. ತಾಂಬೋಟಿ, “ನಿರಂತರ ಮಳೆಯ ಪರಿಣಾಮವಾಗಿ ಅತಿಯಾದ ತಂಪಿನಿಂದ ಬೆಳೆಹಾನಿಯಾಗಿದೆ. ತೋಟಗಾರಿಕೆ ಇಲಾಖೆಯಿಂದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ಸಮೀಕ್ಷೆ ಮಾಡಲಾಗುತ್ತಿದೆ. ಸರ್ಕಾರದ ನಿಯಮದಂತೆ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...