ಗದಗ | ರೈತರ ಬದುಕು ಸಂಕಷ್ಟ; ಬೆಳೆ ಪರಿಹಾರ ನೀಡುವಂತೆ ರೈತ ಸಂಘ ಮನವಿ

Date:

“ಜಿಲ್ಲಾದ್ಯಂತ ರೈತರು ಸಾಲಮಾಡಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ಖರ್ಚು ಮಾಡಿದ್ದು, ಉತ್ತಮವಾಗಿ ಬೆಳೆಗಳು ಬೆಳೆದಿದ್ದವು. ನಿರಂತರ ಮಳೆಗೆ ಸಂಪೂರ್ಣ ಬೆಳೆ ಹಾನಿ ಆಗಿದೆ. ರೈತರು ಅಪಾರ ಪ್ರಮಾಣದಲ್ಲಿ ನಷ್ಟವನ್ನು ಅನುಭವಿಸುತ್ತಿದ್ದಾರೆ. ರೈತರು ಬದುಕು ಸಂಕಷ್ಟದಲ್ಲಿದ್ದು ಶೀಘ್ರವಾಗಿ ರೈತರಿಗೆ ಬೆಳೆ ಪರಿಹಾರ ನೀಡಬೇಕು” ಎಂದು ರೈತ ಮುಖಂಡರು ಒತ್ತಾಯಿಸಿದರು.

- Advertisement -

ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಮುತ್ತನಗೌಡ ಭ. ಚೌಡರಡ್ಡಿ ನೇತೃತ್ವದಲ್ಲಿ ನಿರಂತರ ಮಳೆಯಿಂದ ರೈತರಿಗೆ ನಷ್ಟ ಆಗಿದ್ದು, ಪರಿಹಾರ ನೀಡುವಂತೆ ಗದಗ ಪಟ್ಟಣದಲ್ಲಿ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಮನವಿ ಸಲ್ಲಿಸಿ ರೈತ ಸಂಘದ ಅಧ್ಯಕ್ಷರು ಮುಟ್ಟಗೌಡ ಚೌಡರೆಡ್ಡಿ ಮಾತನಾಡಿ, ರೈತರು ಈ ನಾಡಿನ ಬೆನ್ನೆಲುಬು, ಆದರೆ ಆ ಬೆನ್ನೆಲುಬಿಗೆ ಆಸರೆ ಇಲ್ಲದಂತಾಗಿದೆ. ಕಷ್ಟಪಟ್ಟು, ಸಾಲ ಮಾಡಿ ರೈತ ಬೆಳೆದ ಬೆಳೆ ಅಕಾಲಿಕ ಮಳೆಯಿಂದ ಸಾಕಷ್ಟು ಹಾನಿ ಆಗಿದೆ. ಕೂಡಲೇ ರೈತರಿಗೆ ಬೆಳೆ ಹಾನಿ ಪರಿಹಾರ ಕೊಡಬೇಕು” ಎಂದು ಒತ್ತಾಯಿದರು.

ರೈತ ಮುಖಂಡರು ಮೇಘರಾಜ್ ಬಾವಿ ಮಾತನಾಡಿ, “ಈ ಸರಿ ಮುಂಗಾರು ಮಳೆಯಿಂದ ರೈತರಿಗೆ ಅತೀ ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಆಗಿದೆ. ನಿರಂತರ ಮಳೆಗೆ ಹೆಸರು ಬೂದು ರೋಗ ಬಂದಿದೆ, ಕಪ್ಪಾಗಿವೆ. ಇವನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋದರೆ ಎರಡು ಸಾವಿರ, ಮೂರು ಸಾವಿರ ಕೇಳ್ತಿದ್ದಾರೆ. ರೈತ ಒಂದು ಎಕರೆಗೆ ಖರ್ಚು ಮಾಡಿದಷ್ಟು ಬೆಳೆದ ಬೆಳೆಯಿಂದ ಬರುವುದಿಲ್ಲ ಎಂದರೆ ರೈತ ಹೇಗೆ ತನ್ನ ಕುಟುಂಬವನ್ನು ಸಾಗಿಸಬೇಕು. ಹಾಗಾಗಿ ಸರಕಾರ ಕೂಡಲೇ ಎಕರೆಗೆ ನಲವತ್ತು ಸಾವಿರ ರೂಪಾಯಿ ಬೆಳೆ ನಷ್ಟ ಪರಿಹಾರ ಕೊಡಬೇಕು” ಎಂದು ಒತ್ತಾಯಿಸಿದರು.

ಈ ಮನವಿ ಸಂದರ್ಭದಲ್ಲಿ ರೈತ ಮುಖಂಡರು ಸಂಗಣ್ಣ ದಂಡಿನ, ಅಶೋಕ ಹಿರೇಮಠ, ಎಸ್. ಎಮ್. ಪರಡ್ಡಿ, ಸಂಗಣ್ಣ ಪವಾಡಶೆಟ್ಟಿ, ಧರ್ಮಣ್ಣ ಬೂಸಗೌಡರ, ಬಸವರಾಜ ಹೊಸಮನಿ, ಚಂದ್ರಶೇಖರಯ್ಯ ವಸ್ತçದ, ಸಂಪತಕುಮಾರ ಅಮರನಾಥ, ಮಹೇಶ ಹಿರೇಮಠ, ಎಂ. ಎಸ್. ಹಡಪದ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...