ಗದಗ | ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸಲು ರೈತರು ಧರಣಿ

Date:

“ಈ ಭಾಗದ ರೈತರ ಗೋವಿನ ಜೋಳದ ಫಸಲು ಆರಂಭವಾಗಿ ಎರಡು ತಿಂಗಳು ಕಳೆದರೂ ಇನ್ನು ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ, ಇದರಿಂದ ಈ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಕೂಡಲೇ ಗೋವಿನ ಜೋಳ ಖರೀದಿ ಕೇಂದ್ರ ಆರಂಭಸಿಬೇಕು” ಎಂದು ರೈತರು ಆಗ್ರಹಿಸಿದರು.

- Advertisement -

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷೇಶ್ವರ ಪಟ್ಟಣದಲ್ಲಿ ರೈತ ಸಂಘಟನೆ ಹಾಗೂ ಪ್ರಗತಿಪರ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಸೋಮನಾಥ ದೇವಸ್ಥಾನದಿಂದ ಪಾದಯಾತ್ರೆ ಮುಖಾಂತರ ಅಹೋರಾತ್ರಿ ಹೋರಾಟಕ್ಕೆ ಚಾಲನೆ ನೀಡಿದ ರೈತರು, ಭಜಾರ ಲೈನ್ ಮುಖಾಂತರ ಲಕ್ಷೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ಸಾಂಕೇತಿಕವಾಗಿ ಗದಗ-ಲಕ್ಷೇಶ್ವರ ರಸ್ತೆ ತಡೆ ನಡೆಸಿ ಅಹೋರಾತ್ರಿ ಧರಣಿಗೆ ಮುಂದಾದರು.

ರೈತ ಮುಖಂಡ ಟಾಕಪ್ಪ ಸಾತಪತಿ ಮಾತನಾಡಿ, “ಶಿರಹಟ್ಟಿ ಭಾಗವು ಅತಿ ಹೆಚ್ಚು ಗೋವಿನ ಜೋಳ ಬೆಳೆಯನ್ನು ಬೆಳೆದಿದ್ದು ಖರೀದಿ ಕೇಂದ್ರ ಪ್ರಾರಂಭದ ನಿರೀಕ್ಷೆಯಲ್ಲಿದ್ದೇವೆ. ಮನೆಯಲ್ಲಿ ಸಂಗ್ರಹಿಸಿ ಇಟ್ಟ ಗೋವಿನ ಜೋಳಕ್ಕೆ ಕೀಟ ಕಾಟ ಪ್ರಾರಂಭವಾಗುವ ಮೊದಲು ಸರಕಾರ ಎಚ್ಚೆತ್ತುಕೊಂಡು ಖರೀದಿ ಕೇಂದ್ರ ಪ್ರಾರಂಭ ಮಾಡಬೇಕು, ರೈತರ ಆರ್ಥಿಕ ಸಂಕಷ್ಟಗಳನ್ನು ಬಂಡವಾಳ ಮಾಡಿಕೊಂಡ ಖಾಸಗಿ ವರ್ತಕರು ಹಾಗೂ ದಲ್ಲಾಳಿಗಳು ಗೋವಿನಜೋಳವನ್ನು 1,500ರೂ ಗಳಿಂದ 1.600 ರೂ. ಗಳವರೆಗೆ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಸರಕಾರ ಈ ಕೂಡಲೇ ಖರೀದಿ ಕೇಂದ್ರ ಪ್ರಾರಂಭಮಾಡುವವರೆಗೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ” ಎಂದರು.

ಇನ್ನು ಧರಣಿ ಸ್ಥಳಕ್ಕೆ ಶಿರಹಟ್ಟಿ-ಲಕ್ಷ್ಮೀಶ್ವರ ತಹಶೀಲ್ದಾರರು ಆಗಮಿಸಿ ರೈತರ ಮನವೊಲಿಸಲು ಪ್ರಯತ್ನ ಮಾಡಿದರು. ಆದರೆ ರೈತರು ಸರಕಾರದಿಂದ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ಪ್ರಾರಂಭವಾದ ನಂತರ ನಾವು ಮನೆಗೆ ಹೋಗುತ್ತೇವೆ, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು.

ಧರಣಿಯಲ್ಲಿ ರೈತ ಮುಖಂಡರಾದ ಮಂಜುನಾಥ ಮಾಗಡಿ, ರವಿಕಾಂತ ಅಂಗಡಿ, ನಾಗಪ್ಪ ಚಂಚಲಿ, ಚನ್ನಪ್ಪ ಸಣ್ಣಕ್ಕಿ, ಬಸಪ್ಪ ಬೆಂಡಿಗೇರಿ, ಹೊನಪ್ಪ ಒಡ್ಡರ ಹಾಗೂ ರೈತರು ಭಾಗಿಯಾಗಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...