ಗದಗ | ಅಕ್ರಮ ಮರಳುಗಾರಿಕೆ ಪ್ರಶ್ನಿಸಿದ ರೈತನ ಮೇಲೆ ಮಾರಣಾಂತಿಕ ಹಲ್ಲೆ

Date:

ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ರೈತನ ಮೇಲೆ ದಂಧೆಕೋರರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಶೀರನಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಸಮೀಪ ತುಂಗಭದ್ರಾ ನದಿಯಲ್ಲಿ ಮರಳು ದಂಧೆಕೋರರು ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದರು. ಲಾರಿ, ಟ್ರ್ಯಾಕ್ಟರ್‌ಗಳಲ್ಲಿ ಮರಳು ಸಾಗಿಸುತ್ತಿದ್ದ ದಂಧೆಕೋರರು ನದಿ ದಡದ ಜಮೀನುಗಳನ್ನು ಹಾಳು ಮಾಡುತ್ತಿದ್ದರು. ಅಕ್ರಮ ಮರಳುಗಾರಿಕೆ ನಡೆಸಿ ನದಿಯನ್ನೂ, ತಮ್ಮ ಜಮೀನನ್ನೂ ಹಾಳುಮಾಡುತ್ತಿದ್ದುದ್ದನ್ನು ಗ್ರಾಮದ ರೈತ ಕೋಟೆಪ್ಪ ಮಲ್ಲಾಪುರ ಪ್ರಶ್ನಿಸಿದ್ದಾರೆ. ಆ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಶೀರನಹಳ್ಳಿ ಗ್ರಾಮದವರೇ ಆದ ಡ್ಡದಯ್ಯ ಮಜ್ಜಗಿ ಎಂಬಾತ ಮತ್ತು ಆತನ ಸಂಗಡಿಗರು ರೈತ ಕೋಟೆಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಕೋಟೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...