ಗದಗ | ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Date:

Advertisements

ಶಿರಹಟ್ಟಿ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು, ಕೆಲವರು ಪಕ್ಷ ದ್ರೋಹಿ ಕೆಲಸ ಮಾಡಿದ್ದಾರೆ. ಅಂಥವರನ್ನು ನಮ್ಮ ಪಕ್ಷದಿಂದ ಹೊರಗೆ ಇಡುತ್ತೇವೆ ಎಂದು ಕಾರ್ಯಕರ್ತ ಫಕೀರೇಶ ಮ್ಯಾಟನ್ನವರ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಹೊಳಲಮ್ಮ ಗುಡ್ಡದಲ್ಲಿ ಮಾಜಿ ಶಾಸಕ ಜಿ.ಎಸ್ ಗಡ್ಡದೇವರಮಠ ಅವರ ಅಧ್ಯಕ್ಷತೆಯಲ್ಲಿ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಜನತೆಗೆ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ‘ಅಭಿನಂದನಾ ಕಾರ್ಯಕ್ರಮ’ದಲ್ಲಿ ಮಾತನಾಡಿದರು.

“ಈ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 35 ಸಾವಿರಕ್ಕೂ ಹೆಚ್ಚು ಮತ ನೀಡಿದ ಮತದಾರರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸ ಹೀಗೆ ಇರಲಿ” ಎಂದು ಮತದಾರರಲ್ಲಿ‌ ಮನವಿ ಮಾಡಿಕೊಂಡರು.

Advertisements

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ಸಿನ ಕುತಂತ್ರ ರಾಜಕಾರಣದಿಂದ ನಾವು ಸೋತಿದ್ದೇವೆ: ಎಚ್‌ ಡಿ ಕುಮಾರಸ್ವಾಮಿ

ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸುಜಾತಾ ದೊಡ್ಡಮನಿ ಮಾತನಾಡಿ, “ಚುಣಾವಣೆಯಲ್ಲಿ‌ ಕ್ಷೇತ್ರದ ಜನತೆ ನನಗೆ ಬೆಂಬಲವಾಗಿ‌ ನಿಂತಿದ್ದೀರಿ. ನಿಮ್ಮ ಈ ಬೆಂಬಲವನ್ನು ನಾನೆಂದೂ ಮರೆಯುವುದಿಲ್ಲ. ಕ್ಷೇತ್ರದಲ್ಲಿ ಸೋತಿರಬಹುದು. ಆದರೆ, ರಾಜ್ಯದಲ್ಲಿ ನಮ್ಮದೇ ಆಡಳಿತ ನಡೆಸಲು ರಾಜ್ಯದ ಜನತೆ ಆಶಿರ್ವಾದ ಮಾಡಿದ್ದಾರೆ. ಆ ಮೂಲಕ ನಿಮ್ಮ ಸೇವೆ ಮಾಡುವೆ” ಎಂದು ತಿಳಿಸಿದರು.

ಈ  ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹುಮಾಯಾನ್ ಮಾಗಡಿ, ಡಿ.ಕೆ ಹೊನ್ನಪ್ಪ, ರಾಮಣ್ಣ ಲಮಾಣಿ ಸೇರಿದಂತೆ ಬಹುತೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ವರದಿ : ಮೀಡಿಯಾ ವಾಲಂಟಿಯರ್ ಮಲ್ಲೇಶ ಮಣ್ಣಮ್ಮನವರ ಮಾಹಿತಿ ಆಧರಿಸಿದ ವರದಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X