ಗದಗ | ಅತಿವೃಷ್ಟಿ ನಿರ್ವಹಣೆ: ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

Date:

Advertisements

ಗದಗ ಜಿಲ್ಲಾದ್ಯಂತ ನಿರಂತವಾಗಿ ಮಳೆ ಸುರಿಯುತ್ತಿದ್ದು, ಜನ ಜಾನುವಾರು ಜೀವ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಹಾನಿಗೀಡಾದ ಮನೆಗಳನ್ನು 48 ಗಂಟೆಗಳಲ್ಲಿ ಸರ್ವೆ ನಡೆಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದ್ದಾರೆ.

“ಎಲ್ಲ ತಹಶೀಲ್ದಾರರ ಕಾರ್ಯಾಲಯ, ತಾಲೂಕು ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳ ಕಾರ್ಯಾಲಯಗಳಲ್ಲಿ 24*7 ಕಂಟ್ರೋಲ್ ರೂಮ್‌ಗಳನ್ನು ತೆರೆದು, ಸಿಬ್ಬಂದಿಗಳನ್ನು ನೇಮಕ ಮಾಡಿ ಕಾರ್ಯನಿರ್ವಹಿಸಬೇಕು. ನದಿ, ಕಾಲುವೆ, ಹಳ್ಳಗಳ ಪ್ರವಾಹಗಳಿಂದ ತೊಂದರೆಗೊಳಗಾಗುವ ಪ್ರದೇಶದಲ್ಲಿ ಜನ ಜಾನುವಾರುಗಳು ಓಡಾಡದಂತೆ ಡಂಗೂರ ಸಾರಿರಬೇಕು. ಅಗತ್ಯವಿದ್ದೆಡೆ, ಕಾಳಜಿ ಕೇಂದ್ರಗಳನ್ನು ತೆರೆಯಬೇಕು” ಎಂದು ಸೂಚಿಸಿದ್ದಾರೆ.

“ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗಟಾರ, ಕಾಲುವೆ, ಚರಂಡಿಗಳಲ್ಲಿ ತುಂಬಿರುವ ಕಸ-ಪ್ಲಾಸ್ಟಿಕ್‌ಗಳನ್ನು ತೆಗೆದು ಮಳೆ ನೀರು ಸರಾಗವಾಗಿ ಮುಂದೆ ಸಾಗಲು ಕ್ರಮ ವಹಿಸಬೇಕು. ಪ್ರವಾಹದಿಂದ ಬೆಳೆ ಹಾನಿಯಾದಲ್ಲಿ ಜಂಟಿ ಸರ್ವೇ ನಡೆಸಿ, ವರದಿ ಸಲ್ಲಿಸಬೇಕು. ಈ ಬಗ್ಗೆ ಸಂಬಂಧಿತ ಇಲಾಖೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು” ಎಂದು ಸೂಚಿಸಿದ್ದಾರೆ.

Advertisements

“ಜಿಲ್ಲೆಯಲ್ಲಿ ಅತೀವೃಷ್ಠಿ, ಪ್ರವಾಹದಿಂದ ಯಾವುದೇ ಅವಘಡಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಈ ನಿಟ್ಟಿನಲ್ಲಿ ಕಂದಾಯ ಇಲಾಖೆ, ಪಂಚಾಯತ್ ಇಲಾಖೆ, ಪೊಲೀಸ್ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ನಿಯೋಜಿತ ಅಧಿಕಾರಿಗಳು ನಿರಂತರ ಮೇಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಬೇಕು. ಎಲ್ಲ ಅಧಿಕಾರಿ ನೌಕರರು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X