ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ, ಗಜೇಂದ್ರಗಡ ಪೊಲೀಸ್ ಠಾಣೆಯ ಮುಖ್ಯ ಕಾನ್‌ಸ್ಟೆಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಡೆದಿದೆ.
ರಮೇಶ ಡಂಬಳ(43) ಸ್ಥಳದಲ್ಲೇ ಸಾವನ್ನಪ್ಪಿದ ಮುಖ್ಯ ಪೇದೆಯಾಗಿದ್ದು, ಗಣೇಶ ಹಬ್ಬದ ಪ್ರಯುಕ್ತ ಪೂಜಾ ಸಾಮಗ್ರಿಗಳನ್ನು ತೆಗೆದುಕೊಂಡು ಮನೆ ಕಡೆಗೆ ವಾಪಸಾಗುತ್ತಿದ್ದಾಗ ಈ ಘಟನೆ ಜರುಗಿದೆ ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಡೆಂಘೀ ಜ್ವರ: ವಿದ್ಯಾರ್ಥಿನಿ ಸಾವು
ಸ್ಥಳಕ್ಕೆ ಭೇಟಿ ನೀಡಿದ ಟ್ರಾಫಿಕ್ ಪೊಲೀಸರು ಪರಿಶೀಲನೆ ನಡೆಸಿದ್ದು, ಗದಗ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ಘಟನೆ ನಡೆದಿದೆ.