ಗದಗ | ಮನರೇಗಾ ನೆರವು ಪಡೆದು ಬದುಕು ಬದಲಾಯಿಸಿಕೊಳ್ಳಿ: ಚಂದ್ರಶೇಖರ ಬಿ ಕಂದಕೂರ

Date:

ಗ್ರಾಮೀಣ ಪ್ರದೇಶದ ಕೂಲಿಕಾರರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯಡಿ ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚು ಒತ್ತುನೀಡಿ, ಆರ್ಥಿಕ ನೆರವು ಪಡೆದು ಬದುಕು ಬದಲಾಯಿಸಿಕೊಳ್ಳಿ ಎಂದು ಸಹಾಯಕ ನಿರ್ದೇಶಕ ಚಂದ್ರಶೇಖರ ಬಿ ಕಂದಕೂರ ಹೇಳಿದರು.

- Advertisement -

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಗ್ರಾಮೀಣ ಭಾಗದ ಕೂಲಿಕಾರರ ಜೀವನಮಟ್ಟ ಸುಧಾರಿಸುವ ಕಾಮಗಾರಿಗಳು ಮನರೇಗಾ ಯೋಜನೆಯಡಿ ಲಭ್ಯವಿದ್ದು, ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದು ಯೋಜನೆಯ ಲಾಭ ಪಡೆಯಿರಿ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ವರ್ಷಕ್ಕೆ 100 ದಿನಗಳವರೆಗೆ ಕೂಲಿಕಾರರಿಗೆ ಕೆಲಸ ನೀಡುತ್ತೇವೆ. ಉದ್ಯೋಗ ಚೀಟಿ ಪಡೆದ ಕುಟುಂಬಗಳಿಗೆ ವರ್ಷಕ್ಕೆ 100 ದಿನ ಕೆಲಸ ಕೊಡಲಾಗುವುದು. ವಾರ್ಷಿಕವಾಗಿ ಈ ಯೋಜನೆಯಡಿ ₹34,800 ಗಳಿಸಬಹುದು” ಎಂದು ಹೇಳಿದರು.

“ಈ ಯೋಜನೆಯಡಿ ಅರ್ಹ ಫಲಾನುಭವಿಗಳು ದನದಕೊಟ್ಟಿಗೆ, ಬಚ್ಚಲು ಗುಂಡಿ, ಕೋಳಿ ಶೆಡ್, ಕೃಷಿಹೊಂಡ ಕಾಮಗಾರಿ ಮಾಡಿಕೊಳ್ಳಲು ಸಾಧ್ಯವಿದೆ. ತೋಟಗಾರಿಕೆ ಇಲಾಖೆ ಬೆಳೆಗಳಾದ ತೆಂಗು, ಮಾವು, ದಾಳಿಂಬೆ, ಸೀಬೆ, ಗುಲಾಬಿ, ಮಲ್ಲಿಗೆ, ಬಾಳೆ ಮತ್ತು ಪಪ್ಪಾಯಿ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ಆರ್ಥಿಕ ನೆರವು ಪಡೆದು ಬೆಳೆದುಕೊಳ್ಳಬಹುದು” ಎಂದು ಚಂದ್ರಶೇಖರ್ ಬಿದರಕುಂದಿ ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಕವಣಾಪುರದಲ್ಲಿ ನ.3ರಂದು ಉಚಿತ ಸಾಮೂಹಿಕ ವಿವಾಹ

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದವ್ವ ಪೂಜಾರಿ, ಉಪಾಧ್ಯಕ್ಷೆ ಜ್ಯೋತಿ ಗಾಣಗೇರ, ಸದಸ್ಯ ಸಂತೋಷ ದೊಡ್ಡಮನಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಗಿರಿತಮ್ಮನ್ನವರ, ತಾಲೂಕ ಪಂಚಾಯತ್ ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ, ತಾಲೂಕು ಪಂಚಾಯತ್ ಐಇಸಿ ಸಂಯೋಜಕ ಮಂಜುನಾಥ ಎಸ್ ಬಿ,  ಎಫ್ ಟಿ ಈರಣ್ಣ ದಳವಾಯಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾವಿ, ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯನನ್ನು ಕೇಂದ್ರವಾಗಿಟ್ಟುಕೊಂಡು ವೈಜ್ಞಾನಿಕವಾಗಿ ಚಿಂತಿಸಬೇಕು: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ...