ಗದಗ | ಗ್ರಾಮ ಮಟ್ಟದಲ್ಲಿ ಉತ್ತಮ ಶಿಕ್ಷಣದ ಜತೆಗೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯಪಾಲರು

Date:

Advertisements

ಗ್ರಾಮೀಣ ಅಭಿವೃದ್ಧಿಗಾಗಿ, ಪಂಚಾಯತ್ ರಾಜ್, ಶಿಕ್ಷಣ, ಕೃಷಿ ಮತ್ತು ಇತರ ಉದ್ಯೋಗ ಸಂಬಂಧಿತ ಕೆಲಸಗಳನ್ನು ಗ್ರಾಮ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಬಹಳ ಮುಖ್ಯ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಗದಗದಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 4ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

“ಹಳ್ಳಿಗಳನ್ನು ಸ್ವಾವಲಂಬಿ ಮತ್ತು ಸುಸಜ್ಜಿತವಾಗಿ ಮಾಡದಿದ್ದರೆ, ದೇಶದ ಸರಿಯಾದ ಮತ್ತು ಸಮತೋಲಿತ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದು ಸಾರ್ವತ್ರಿಕವಾಗಿ ಒಪ್ಪಿಕೊಂಡ ಸತ್ಯವಾಗಿದೆ. ಶಿಕ್ಷಣ, ಕೃಷಿ ಮತ್ತು ಇತರ ಉದ್ಯೋಗ ಸಂಬಂಧಿತ ಕೆಲಸಗಳನ್ನು ಗ್ರಾಮ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಪ್ರತಿಯೊಂದು ಗ್ರಾಮ ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ” ಎಂದು ಅಭಿಪ್ರಾಯಪಟ್ಟರು.

Advertisements

“ಪಂಚಾಯತ್ ರಾಜ್ ವ್ಯವಸ್ಥೆಯು ಭಾರತೀಯ ದೃಷ್ಟಿಕೋನದಿಂದ ಬಹಳ ಪ್ರಾಚೀನ ಕಲ್ಪನೆಯಾಗಿದೆ. ನಮ್ಮ ಮೂರು ಹಂತದ ಆಡಳಿತ ವ್ಯವಸ್ಥೆಯಲ್ಲಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜತೆಗೆ ಸ್ಥಳೀಯ ಆಡಳಿತದ ಘಟಕವಾಗಿ ಪಂಚಾಯತ್ ರಾಜ್ ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಂಡಿದ್ದೇವೆ. ಸಾಂವಿಧಾನಿಕ ತಿದ್ದುಪಡಿಯ ಮೂಲಕ, ಪಂಚಾಯತ್ ರಾಜ್ ವ್ಯವಸ್ಥೆಗೆ ಹೆಚ್ಚು ಸಮಗ್ರ ಅಧಿಕಾರವನ್ನು ನೀಡುವ ಮೂಲಕ ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಕೆಲಸ ಮಾಡಲಾಗಿದೆ” ಎಂದು ತಿಳಿಸಿದರು.

“ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ಯುವಜನರ ವಲಸೆಯು ಗಂಭೀರ ಸಮಸ್ಯೆಯಾಗಿದೆ. ನಗರಗಳ ಆರೋಗ್ಯಕ್ಕೆ ಹಾನಿಕಾರಕವಲ್ಲ. ಆದರೆ ಹಳ್ಳಿಗಳ ಅಭಿವೃದ್ಧಿಯಾಗಬೇಕೆಂದರೆ, ಈ ವಲಸೆ ಹೋಗುವುದು ಒಳ್ಳೆಯದಲ್ಲ. ಜನತೆ ವಲಸೆ ಹೋಗುವುದನ್ನು ತಡೆಯಬೇಕಾದರೆ ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿಯಾಗಬೇಕು. ಗ್ರಾಮ ಅಭಿವೃದ್ಧಿಯಿಂದ ಇಡೀ ಸಮಾಜದ ಅಭಿವೃದ್ಧಿ ಸಾಧ್ಯ” ಎಂದು ಹೇಳಿದರು.

“ಜನಹಿತ, ಗ್ರಾಮೀಣ ಹಿತ, ದೇಶದ ಹಿತಕ್ಕಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು. ಪ್ರಾಚೀನ ಕಾಲದಲ್ಲಿ ಹಳ್ಳಿಗಳಲ್ಲಿ ಮುಖಂಡರ ನೇತೃತ್ವದಲ್ಲಿ ನ್ಯಾಯ ಮಾಡಿ ಸಮಸ್ಯೆ ಇತ್ಯರ್ಥ ಮಾಡುತ್ತಿದ್ದರು. ಈಗಲೂ ಕೆಲವು ಗ್ರಾಮಗಳಲ್ಲಿ ವ್ಯವಸ್ಥೆ ಮುಂದುವರೆದಿದೆ. ಗ್ರಾಮದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯು ಶಿಕ್ಷಣದಿಂದ ವಂಚಿತವಾಗಬಾರದು. ಶಿಕ್ಷಣದ ಜೊತೆ ಜೊತೆಗೆ ಉದ್ಯೋಗ ಕಲ್ಪಿಸುವಂತಹ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು. ಹಿಂದಿನ ಕಾಲದಲ್ಲಿ ಬಡವರ ಕಲ್ಯಾಣಕ್ಕಾಗಿ ಅಂತ್ಯೋದಯ ಕಾರ್ಯಕ್ರಮವಿತ್ತು. ಈ ರೀತಿಯ ಕಾರ್ಯಕ್ರಮಗಳು ಪ್ರಸ್ತುತ ದಿನಗಳಲ್ಲಿ ಅವಶ್ಯಕವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಈ ವಿಶ್ವವಿದ್ಯಾಲಯವು ಭಾರತದಲ್ಲೇ ಒಂದು ವಿಶಿಷ್ಟವಾದ ವಿಶ್ವವಿದ್ಯಾಲಯವಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯವನ್ನು ಪರಿಗಣಿಸುತ್ತಿದೆ. ಈ ಘಟಿಕೋತ್ಸವ ಸಮಾರಂಭದಲ್ಲಿ ಸಿ ನಾರಾಯಣ ಸ್ವಾಮಿ ಮತ್ತು ಚಿರಂಜೀವಿ ಸಿಂಗ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಅವರನ್ನು ಅಭಿನಂದಿಸುತ್ತೇನೆ ಹಾಗೂ ಅವರ ಸೇವೆ ನಿರಂತರವಾಗಿರಲಿ” ಎಂದು  ಆಶಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಂವಿಧಾನ ಮಹಿಳೆಯರಿಗೆ ಸಮಾನತೆ, ಸಮಾನ ಅವಕಾಶ ಕಲ್ಪಿಸಿದೆ: ಶ್ರೀಧರ್

“ಗಳಿಸಿದ ಜ್ಞಾನದೊಂದಿಗೆ ಮತ್ತು ಮುಂಬರುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಬೇಕು” ಏಕ್ ಭಾರತ್- ಶ್ರೇಷ್ಠ ಭಾರತ ಮತ್ತು ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದರು.

ಸಚಿವ ಪ್ರಿಯಾಂಕ ಖರ್ಗೆ, ಕೇಂದ್ರ ಪಂಚಾಯತ್‌ ರಾಜ್‌ ಸಚಿವಾಲಯದ ಮಾಜಿ ಜಂಟಿ ಕಾರ್ಯದರ್ಶಿ ಟಿ ಆರ್‌ ರಘುನಂದನ್‌, ವಿವಿ ಕುಲಪತಿ ವಿಷ್ಣುಕಾಂತ್ ಎಸ್ ಚಟಪಲ್ಲಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X