ಗದಗ | ಚುನಾವಣೆಗೆ ಸ್ಪರ್ಧಿಸಿದರೆ ‘ಗೋ ಬ್ಯಾಕ್‌’ ಅಭಿಯಾನ; ದಿಂಗಾಲೇಶ್ವರ ಸ್ವಾಮೀಜಿಗೆ ಭಕ್ತರ ಎಚ್ಚರಿಕೆ

Date:

ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇ ಆದಲ್ಲಿ ಅವರು ಶಿರಹಟ್ಟಿ ಫಕೀರೇಶ್ವರ ಮಠದಿಂದ ಹೊರ ನಡೆಯುವಂತೆ ಆಗ್ರಹಿಸಿ ʼಗೋ ಬ್ಯಾಕ್‌ʼ ಅಭಿಯಾನ ಆರಂಭಿಸಲಾಗುವುದು ಎಂದು ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಮಠದ ಭಕ್ತರು ಎಚ್ಚರಿಕೆ ನೀಡಿದ್ದಾರೆ.

- Advertisement -

ಶುಕ್ರವಾರ (ಏ.12) ಶಿರಹಟ್ಟಿಯಲ್ಲಿ ನಡೆದ ಭಕ್ತರ ಸಭೆಯಲ್ಲಿ ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಮಾತನಾಡಿ, ಬೇರೆ ರಾಜ್ಯಗಳಲ್ಲಿ ಇರುವಂತೆ ಮಠಾಧೀಶರು ರಾಜಕೀಯ ಪ್ರವೇಶ ಮಾಡುವುದು ನಮ್ಮಲ್ಲಿ ನಿಷಿದ್ಧ. ರಾಜ್ಯದ ಮಠಾಧೀಶರು ಧರ್ಮ ಜಾಗೃತಿ ಮಾಡಿಕೊಂಡು ಇರಬೇಕು. ಒಂದು ವೇಳೆ ಅವರಿಗೆ ರಾಜಕೀಯ ಪ್ರವೇಶ ಮಾಡುವ ಇಚ್ಛೆ ಇದ್ದಲ್ಲಿ ಮಠ ಬಿಟ್ಟು ಹೊರನಡೆಯಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದೇಶದಲ್ಲಿ ಶೇ.5ರಷ್ಟಿರುವ ಬ್ರಾಹ್ಮಣರು ನಮ್ಮನ್ನು ಆಳುತ್ತಾರೆಂದು ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ. ಫಕೀರೇಶ್ವರ ಮಠ ಭಾವೈಕ್ಯದ ಮಠ. ಆದರೆ, ಆ ಮಠದ ಉತ್ತರಾಧಿಕಾರಿ ಆಗಿರುವ ದಿಂಗಾಲೇಶ್ವರ ಶ್ರೀಗಳು ಬ್ರಾಹ್ಮಣ ಸಮುದಾಯದ ವಿರುದ್ಧ ಮಾತನಾಡುತ್ತಿದ್ದಾರೆ. ಬ್ರಾಹ್ಮಣರು ಶೇ. 5 ಅಥವಾ ಶೇ. 10ರಷ್ಟಾದರೂ ಇರಲಿ. ಬ್ರಾಹ್ಮಣರ ಬಗ್ಗೆ ಆ ರೀತಿ ಮಾತನಾಡುವುದೇ ಆದರೆ, ಅವರು ಖಾವಿ ತ್ಯಜಿಸಿ, ಖಾದಿ ಧರಿಸಿ ರಾಜಕೀಯ ಪ್ರವೇಶ ಮಾಡಲಿ ಎಂದು ಕಿಡಿಕಾರಿದರು.

ಫಕೀರೇಶ್ವರ ಮಠವನ್ನು ಸುತ್ತೂರು, ಸಿದ್ಧಗಂಗಾ ಮಠದಂತೆ ಶೈಕ್ಷಣಿಕವಾಗಿ ಉನ್ನತೀಕರಿಸುತ್ತಾರೆ ಎಂಬ ಆಶಯದಿಂದ ಅವರನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಿದೆವು. ಆದರೆ, ಅವರು ರಾಜಕೀಯ ಪ್ರವೇಶ ಮಾಡಲು ನಿರ್ಧರಿಸಿದ್ದಾರೆ. ಅವರು ತಮ್ಮ ಮಾತಿನಿಂದಲೇ ಎಲ್ಲರನ್ನೂ ಮೋಡಿ ಮಾಡುತ್ತಾರೆ. ಮೋದಿ ಬಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ಅವರಿಗೆ ನಾವು ಯಾವ ಲೆಕ್ಕ. ಏ.18ಕ್ಕೆ ಅವರು ಏನು ನಿರ್ಣಯ ತೆಗೆದು ಕೊಳ್ಳುತ್ತಾರೋ ಅದರ ಮೇಲೆ ಶಿರಹಟ್ಟಿ ಜನತೆ, ಮಠದ ಭಕ್ತರು ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...