ಗದಗ | ಸರ್ಕಾರಿ ವಸತಿ ನಿಲಯಗಳು ಪ್ರಾರ್ಥನಾ ಕೇಂದ್ರಗಳಿದ್ದಂತೆ: ಇಒ ಚಂದ್ರಶೇಖರ್ ಕಂದಕೂರು

Date:

Advertisements

ಸರ್ಕಾರಿ ವಸತಿ ನಿಲಯಗಳು ಪ್ರಾರ್ಥನಾ ಕೇಂದ್ರಗಳಿದ್ದಂತೆ. ಶೃದ್ಧೆಯಿಂದ ಕಲಿತು ಸರ್ಕಾರಿ ನೌಕರರಾಗಿ ಎಂದು ಗದಗ ಇಒ ಚಂದ್ರಶೇಖರ ಕಂದಕೂರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ನಗರದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಿಸಿಎಂ ಬಾಲಕರ ವಸತಿ ನಿಲಯಗಳಿಗೆ ಭೇಟಿ ನೀಡಿ, ವಸತಿ ನಿಲಯಗಳ ಸ್ವಚ್ಛತೆ, ಊಟದ ವ್ಯವಸ್ಥೆ, ವಸತಿ ನಿಲಯಗಳಲ್ಲಿ ಮೂಲಭೂತ ಅವಶ್ಯಕತೆಗಳ ಪೂರೈಕೆಗಳ ಬಗ್ಗೆ ವಸತಿ ನಿಲಯದ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು.

“ಬಿಸಿಎಂ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಕಲಿಕೆಯ ಅನುಕೂಲತೆಗೆ ರಾಜ್ಯ ಸರ್ಕಾರ ಸಕಲ ಸೌಕರ್ಯಗಳನ್ನು ಒದಗಿಸಿದೆ. ಸರ್ಕಾರದ ಈ ಅನುಕೂಲತೆಯನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರುವ ವಿದ್ಯಾರ್ಥಿಗಳಿಗೂ ಒದಗಿಸಿಕೊಡುವ ಕೆಲಸವನ್ನು ವಸತಿ ನಿಲಯದ ವಿದ್ಯಾರ್ಥಿಗಳು ಮಾಡಬೇಕು. ವಿದ್ಯಾರ್ಥಿಗಳಾಗಿದ್ದ ವೇಳೆ ನಮಗೆಲ್ಲ ಇಂತಹ ಯಾವುದೇ ಸೌಲಭ್ಯಗಳಿರಲಿಲ್ಲ. ಇಂದು ನಿಮಗೆ ಸಕಲ ರೀತಿಯ ಸೌಲಭ್ಯಗಳಿವೆ. ಓದಿನಲ್ಲಿ ಹಿಂದೆ ಬೀಳದೆ ವಸತಿ ನಿಲಯಗಳನ್ನು ಪ್ರಾರ್ಥನಾ ಕೇಂದ್ರಗಳೆಂದು ಭಾವಿಸಿ ಭಕ್ತಿಯಿಂದ ಓದಿನಲ್ಲಿ ತೊಡಗಿಕೊಂಡು ಸರ್ಕಾರದ ಉನ್ನತ ಹುದ್ದೆ ಪಡೆದುಕೊಳ್ಳಿ” ಎಂದು ಹೇಳಿದರು.

ಸ್ವತಃ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅನುಭವವುಳ್ಳ ಅವರು ಮೆಟ್ರಿಕ್ ಪೂರ್ವ ವಸತಿ ನಿಲಯದ ಮಕ್ಕಳಿಗೆ ಯಾವುದೇ ವಿಷಯ ಕಠಿಣವೆನಿಸಿದರೂ ದೂರವಾಣಿ ಕರೆ ಮಾಡಿದರೆ, ಆ ವಿಷಯದ ಕುರಿತು ಪಾಠ ಮಾಡುವುದಾಗಿ ವಸತಿ ನಿಲಯದ ಮಕ್ಕಳಿಗೆ ಓದಿನಲ್ಲಿ ತೊಡಗುವಂತೆ ಪ್ರೇರೆಪಿಸಿದರು. ಪ್ರತಿಯೊಂದು ನಿಲಯದ ಕೊಠಡಿಗೆ ತೆರಳಿ ಸ್ವಚ್ಛತೆ, ಬೆಡ್ ಮತ್ತು ಕಾಟ್ ವ್ಯವಸ್ಥೆ ಪರಿಶೀಲಿಸಿದರು.

ಇದನ್ನೂ ಓದಿ: ಗದಗ | ಕೈಗೆ ಬಂದ ತುತ್ತು ಕಸಿದ ಮಳೆ; ಸಂಕಷ್ಟದಲ್ಲಿ ಹೆಸರು ಬೆಳೆದ ರೈತರ ಬದುಕು

ಇದೇ ವೇಳೆ ಇಒ ಕಂದಕೂರು ಅವರಿಗೆ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಬರುವ ರಸ್ತೆ ಹದಗೆಟ್ಟಿದ್ದು, ದುರಸ್ತಿಗೊಳಿಸುವಂತೆ ಮನವಿ ಮಾಡಿದರು. ಅಲ್ಲದೆ ಸದ್ಯ ಹಾಸ್ಟೆಲ್‌ನ ಸ್ನಾನದ ಕೊಠಡಿಯಲ್ಲಿ ಬಟ್ಟೆ ತೊಳೆದುಕೊಳ್ಳುತ್ತಿದ್ದು ಪ್ರತ್ಯೇಕವಾಗಿ ಬಟ್ಟೆ ತೊಳೆದುಕೊಳ್ಳಲು ಕೊಠಡಿ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ ತಾಪಂ ಬಸವರಾಜ ಬಡಿಗೇರ ಜೊತೆಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X