ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

Date:

Advertisements

“ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ ನಿಷೇದ ಮಸೂದೆ – 2025 ಅಂಗೀಕರಿಸಿದೆ. ಎಲ್ಲ ದೇವದಾಸಿ ಮಹಿಳೆಯರ ಮೂರು ತಲೆ ಮಾರುಗಳ ಕುಟುಂಬದ ಸದಸ್ಯರ ಗಣತಿಗೆ ಕ್ರಮವಹಿಸಿರುವುದನ್ನು ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿ ಸ್ವಾಗತಿಸುತ್ತದೆ” ಎಂದು ಗೌರವಾಧ್ಯಕ್ಷ ಬಾಲು ರಾಠೋಡ ಹೇಳಿದರು.

ಗದಗ ಪಟ್ಟಣದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿಯು ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಗಳ‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು.

“ಈಗ ಕಾರ್ಯ ನಿರ್ವಹಿಸುವ ಗಣತಿಯಲ್ಲಿ ಈಗಾಗಲೇ ಗಣತಿ ಪಟ್ಟಿಯಲ್ಲಿರುವ ದೇವದಾಸಿ ಮಹಿಳೆಯರು ಹಾಗು ಕುಟುಂಬದ ಸದಸ್ಯರನ್ನು ವಿಶೇಷವಾಗಿ ಮರು ಸಮೀಕ್ಷೆಗೆ ಕ್ರಮ ವಹಿಸಲಾಗಿದೆ. ಆದರೆ ಇದುವರೆಗೆ ಗಣತಿಯಲ್ಲಿ ಸೇರಿಸಲಾಗದಿರುವ ದೇವದಾಸಿ ಮಹಿಳೆಯರು ಹಾಗು ಅವರ ಕುಟುಂಬದ ಸಾವಿರಾರು ಸದಸ್ಯರು ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ದೇವದಾಸಿ ಪದ್ಧತಿ, ಜಾತಿ ಅಸಮಾನತೆ ಮತ್ತು ಅಶ್ಪೃಶ್ಯಾಚರಣೆಯ ಅಪಮಾನಗಳ ತೀವ್ರ ಶೋಷಣೆಗೆ ಗುರಿಯಾಗಿದ್ದರೂ, ಅವರು ಕೇವಲ ಗಣತಿ ಪಟ್ಟಿಯಲ್ಲಿ ಇಲ್ಲವೆಂಬ ಕಾರಣಕ್ಕೆ ದೇವದಾಸಿ ಮಹಿಳೆಯರು ಈಗ ಸಿಗುವ ಯಾವುದೇ ಕನಿಷ್ಠ ಸೌಲಭ್ಯಗಳಕನ್ನು ಪಡೆಯಲಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಗಣತಿ ಪಟ್ಟಿಯಲ್ಲಿ ಇಲ್ಲ ಎಂಬ ಕಾರಣಕ್ಕೆ ಅವರಿಗೆ, ಅವರ ಮಕ್ಕಳಿಗೆ ದೇವದಾಸಿ ಕುಟುಂಬದ ಸರ್ಟಿಫಿಕೇಟ್ ಕೂಡಾ ಸಿಕ್ಕಿರುವುದಿಲ್ಲ. ಇದರಿಂದ ಸಾವಿರಾರು ಮಕ್ಕಳು ಅವರ ವಿದ್ಯಾಭ್ಯಾಸ, ಉದ್ಯೋಗದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ತಾಯಂದಿರು ದೌರ್ಜನ್ಯದಿಂದ ನಲುಗಿದ್ದಾರೆ” ಎಂದು ಹೇಳಿದರು.

“ಗಣತಿ ಪಟ್ಟಿಯಾಚೆ ಇರುವ ಎಲ್ಲ ದೇವದಾಸಿ ಮಹಿಳೆಯರನ್ನು ಅವರ ಮೂರು ತಲೆಮಾರು ಕುಟುಂಬದ ಸದಸ್ಯರನ್ನು ಅತಿ ಶೀಘ್ರವಾಗಿ ಗಣತಿಯಪಟ್ಟಿಗೆ ಸೇರಿಸಲು ವಿಶೇಷ ಕ್ರಮ ವಹಿಸಿ 2026ರ ಬಜೆಟ್ ನಲ್ಲಿ ಈ ಎಲ್ಲರಿಗೂ ಎಲ್ಲ ದೇವದಾಸಿ ಮಹಿಳೆಯರ ಕುಟುಂಬದಂತೆ ಸೌಲಭ್ಯಗಳು ದೊರೆಯುವಂತೆ ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಮಕ್ಕಳ ಹಕ್ಕುಗಳ ಹೋರಾಟ ಸಮಿತಿ, ಮನವಿ ಮಾಡುತ್ತದೆ” ಎಂದರು.

ತಕ್ಷಣದಿಂದಲೆ ಈ ಮಹಿಳೆಯರಿಗೆ ಅವರ ಕುಟುಂಬದ ಸದಸ್ಯರಿಗೆ ದೇವದಾಸಿ ಕುಟುಂಬದ ಸರ್ಟಿಫಿಕೇಟ್ ನೀಡುವಂತೆ ಒತ್ತಾಯಿಸಿದರು.

ಈ ವೇಳೆ  ಜಿಲ್ಲಾ ಉಪಾಧ್ಯಕ್ಷ ರಾದ ಫಕೀರಮ್ಮ ಪೂಜಾರ ಮಾದೇವಿ ದೋಡ್ಡಮನಿ ಶಿವಕ್ಕ ಮಾದರ . ಮಕ್ಕಳ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷರು ಮಲ್ಲಿಕಾರ್ಜುನ ಮಾದರ ಆನಂದ ಮಾದರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

Download Eedina App Android / iOS

X