ಗದಗ | ದೊಡ್ಡೂರ ಗ್ರಾಮ ಪಂಚಾಯಿತಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

Date:

ಹಡಪದ ಅಪ್ಪಣ್ಣನವರು 12ನೇ ಶತಮಾನದ ವಿಶ್ವಗುರು ಬಸವಣ್ಣನವರ ಒಡನಾಡಿಗಳು. ಅವರ ಆಪ್ತ ಸಹಾಯಕರಾಗಿ ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ “ಅನುಭವ ಮಂಟಪದಲ್ಲಿ” ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯಪ್ರವೃತ್ತರಾಗಿದ್ದರು ಎಂದು ದೊಡ್ಡೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಫ್ ಮಾಳವಾಡ ಹೇಳಿದರು.

- Advertisement -

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“12ನೇ ಶತಮಾನದಲ್ಲಿ ಹಡಪದ ಸಮಾಜದವರು ಬೆಳಿಗ್ಗೆ ಎದರು ಬಂದರೆ ಏನೋ ಅನಾಹುತವಾಗುತ್ತದೆ ಎಂಬ ಮೂಢನಂಬಿಕೆ ಇತ್ತು. ಇದನ್ನು ಹೋಗಲಾಡಿಸಲು ಬಸವಣ್ಣನವರು ಯಾರೇ ಬಂದರೂ ಮೊದಲು ಹಡಪದ ಅಪ್ಪಣ್ಣನವರನ್ನು ನೊಡಿಕೊಂಡು ಬರಬೇಕೆಂಬ ನಿಯಮವನ್ನೇ ಮಾಡಿದ್ದರೆಂಬ ಪ್ರತೀತಿ ಇದೆ” ಎಂದರು.

“ಸಮಾಜಕ್ಕೆ ಒಳ್ಳೆಯ ಸಂದೇಶಗಳನ್ನು ಸಾರುವುದರೊಂದಿಗೆ ಸಾಕಷ್ಟು ವಚನಗಳನ್ನು ಬರೆದ ಕೀರ್ತಿ ಹಡಪದ ಅಣ್ಣನವರಿಗೆ ಸಲ್ಲುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಇಳಿಮುಖ; ಸಂಚಾರಕ್ಕೆ ಅವಕಾಶ

ಈ ಸಂದರ್ಭದಲ್ಲಿ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾಗಿರುವ ನಾನಪ್ಪ ಲಮಾಣಿ, ಪಂಚಾಯಿತಿ ಕಾರ್ಯದರ್ಶಿ ರಾಮಯ್ಯ ಗುರುವಿನರವ, ಗ್ರಾಮದ ಯುವಕರು ಪ್ರಶಾಂತ ಹಡಪದ, ಪರಸಪ್ಪ ಬಾಗಲದ ಪಂಚಾಯಿತಿಯ ಸಿಬ್ಬಂದಿಗಳು ಇದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ, ಲಕ್ಷ್ಮೇಶ್ವರ ಸಿಟಿಜನ್ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...