ಗದಗ | ಹೇಮರೆಡ್ಡಿ ಮಲ್ಲಮ್ಮ ಆಧ್ಯಾತ್ಮಿಕ ಕ್ಷೇತ್ರದ ಧ್ರುವತಾರೆ: ಮುತ್ತು ರಾಯರೆಡ್ಡಿ

Date:

“ಹೇಮರೆಡ್ಡಿ ಮಲ್ಲಮ್ಮ ಸಾಮಾನ್ಯ ವರ್ಗದ ಕುಟುಂಬದಲ್ಲಿ ಜನಿಸಿ ದರು. ಬಾಲ್ಯದಿಂದಲೂ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯನ್ನು ಆರಾಧಿಸುತ್ತಿದ್ದರು. ಮಲ್ಲಿಕಾರ್ಜುನನ ಅನುಗ್ರಹದಿಂದ ಆದರ್ಶ ಶರಣೆಯಾಗಿ ರೂಪುಗೊಂಡರು. ಜೀವನದ ಕಡೆಯಲ್ಲಿ ದೇವರನ್ನೆ ಸಾಕ್ಷಾತ್ಕರಿಸಿಕೊಂಡರು. ಅವರು ಆಧ್ಯಾತ್ಮಿಕ ಕ್ಷೇತ್ರದ ಧ್ರುವತಾರೆ” ಎಂದು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಮುತ್ತು ರಾಯರೆಡ್ಡಿ ಹೇಳಿದರು.

- Advertisement -

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಚಿಕ್ಕನರಗುಂದ  ಗ್ರಾಮ ಪಂಚಾಯಿತಿ  ಸಭಾಂಗಣದಲ್ಲಿ ಶನಿವಾರ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಭರಮರೆಡ್ಡಿ ಅವರೊಂದಿಗೆ ಹೇಮರೆಡ್ಡಿ ಮಲ್ಲಮ್ಮ ಅವರ ವಿವಾಹವಾಗಿತ್ತು. ಭರಮರೆಡ್ಡಿಯನ್ನು ಜನರು ಹುಚ್ಚನಂತೆ ಪರಿಭಾವಿಸುತ್ತಿದ್ದರು. ಭರಮರೆಡ್ಡಿಯಲ್ಲಿನ ಮುಗ್ಧತೆ, ಸಾಧು ಸ್ವಭಾವವನ್ನು ಕಂಡು ಮಲ್ಲಮ್ಮ ಸಮಾಧಾನಗೊಂಡಿದ್ದರು. ಪತಿಯನ್ನು ದೇವರಂತೆ ಉಪಚರಿಸಿದರು” ಎಂದರು.

“ಹೇಮರೆಡ್ಡಿ ಮಲ್ಲಮ್ಮ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದರು. ಕರುಣಾ ಮಯಿ ಹಾಗೂ ದಾಸೋಹಿಯಾಗಿದ್ದರು. ಪರಸ್ಪರ ನಂಬಿಕೆ, ವಿಶ್ವಾಸ, ಕ್ಷಮಿಸುವ ಗುಣ ಸಕಲ ಜೀವರಾಶಿಗಳಿಗೂ ಒಳಿತನ್ನು ಬಯಸಬೇಕು ಎನ್ನುವ ಮನೋಭಾವನೆ ಜೀವನ ಸಾಗಿಸಿದರು. 500 ವರ್ಷ ಕಳೆದರೂ ಮಲ್ಲಮ್ಮ ಜನರ ಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ. ರೆಡ್ಡಿ ಕುಲದವರು ಮಲ್ಲಮ್ಮನನ್ನು ಇಂದಿಗೂ ಮಹಾತಾಯಿಯಂತೆ ಪೂಜಿಸುತ್ತಾರೆ’ ಎಂದರು.

“ಮಲ್ಲಮ್ಮನ ಮೈದುನನಾದ ವೇಮನ ದುಶ್ಚಟಗಳಿಗೆ ಬಲಿಯಾಗಿದ್ದನು. ಆತನಿಗೆ ಮಲ್ಲಮ್ಮ ಮನುಷ್ಯನ ಬದುಕಿನ ಸಾರ್ಥಕತೆಯ ಅರಿವಾಗುವಂತೆ ಮನ ಪರಿವರ್ತನೆ ಮಾಡಿದಳು. ವೇಮನ ಆಧ್ಯಾತ್ಮಿಕ ದಾರಿಯಲ್ಲಿ ಸಾಧನೆಗೈದು, ಮಹಾಯೋಗಿಯಾದನು. ಆಂಧ್ರ ಪ್ರದೇಶದಲ್ಲಿ ಪೂಜನೀಯ ಸ್ಥಾನ ಪಡೆದನು” ಎಂದರು.

“ಮಲ್ಲಮ್ಮ ಹಲವಾರು ಪವಾಡ ಗಳನ್ನು ನಡೆಸಿರುವ ಬಗ್ಗೆ ಪುರಣಾದಲ್ಲಿ ಉಲ್ಲೇಖ ಇದೆ. ಸಂತ ಶಿಶುನಾಳ ಶರೀಫರು ಹೇಮರೆಡ್ಡಿ ಮಲ್ಲಮ್ಮನ ಕುರಿತು ಹಲವಾರು ಗೀತೆಗಳನ್ನು ರಚಿಸಿದ್ದಾರೆ. ಮಲ್ಲಮ್ಮನ ಜೀವನದ ತತ್ವ, ಚಿಂತನೆಗಳು ಎಲ್ಲರಿಗೂ ಆದರ್ಶನೀಯ” ಎಂದು ಮುತ್ತು ರಾಯರೆಡ್ಡಿ ಹೇಳಿದರು.

ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷರು ಮಲ್ಲಮ್ಮ ಮರಿಯಣ್ಣವರ, ಸದಸ್ಯ ಶರಣಬಸಪ್ಪ ಹಳೇಮನಿ, ಗ್ರಾ.ಪಂ ಕಾರ್ಯದರ್ಶಿ ನಾಗವೇಣಿ, ಸಿಬ್ಬಂದಿ  ಶಿವು ಯಲಿಗಾರ, ಸಿದ್ದಪ್ಪ ಹಳಕಟ್ಟಿ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...