ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪಿಯ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ದಾಳಿ ನಡೆದಿದೆ.
ಮುಂಡರಗಿಯ ವಿರೇಶ ಮತ್ತು ಶಿವಾನಂದ ಎಂಬ ಇಬ್ಬರು ಆರೋಪಿಗಳು ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿದ್ದರು ಎಂದು ಆರೋಪಿಸಲಾಗಿದೆ.
ಮುಂಡರಗಿಯ ತಮ್ಮ ಮನೆಯಲ್ಲಿ ಅಕ್ಕಿಯನ್ನು ಸಂಗ್ರಹಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಮನೆಯಲ್ಲಿ ಸುಮಾರು 50 ಕೆ.ಜಿ ತೂಕದ 81 ಚೀಲಗಳು ಪತ್ತೆಯಾಗಿವೆ. ಅವುಗಳ ಒಟ್ಟು ತೂಕ 39 ಕ್ವಿಂಟಾಲ್ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.