ಗದಗ | ಸಂತ ಕವಿ ಸರ್ವಜ್ಞರ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್.

Date:

“ಪ್ರತಿಯೊಬ್ಬರೂ ಕವಿ ಸರ್ವಜ್ಞ ಅವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಅವರ ಆದರ್ಶಗಳನ್ನು ಪಾಲಿಸಬೇಕು. ಈಗಿನ ಮಕ್ಕಳಿಗೆ ಸರ್ವಜ್ಞ ಅವರ ವಚನಗಳು ಮತ್ತು ಸಂಸ್ಕೃತಿ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು” ಎಂದು ಅಪರ ಜಿಲ್ಲಾಧಿಕಾರಿ ದುರಗೇಶ ಕೆ.ಆರ್. ಹೇಳಿದರು.

- Advertisement -

ಗದಗ ಪಟ್ಟಣದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್ ನಲ್ಲಿ ಇಂದು ಶುಕ್ರವಾರ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

“ಸರ್ವಜ್ಞ ಅವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕು, ಮೂಡನಂಬಿಕೆ ಹೋಗಲಾಡಿಸಿ ಲೋಕಕಲ್ಯಾಣಕ್ಕೆ ಶ್ರಮಿಸಿದವರಾಗಿದ್ದಾರೆ. ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಶ್ರಮಿಸಬೇಕು” ಎಂದರು.

ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸಕ ಶಿವಾನಂದ ಚಕ್ರಸಾಲಿ ಮಾತನಾಡಿ, “ಸಂತ ಕವಿ ಸರ್ವಜ್ಞ ಸುಮಾರು 16 ನೇ ಶತಮಾನದಲ್ಲಿ ಜನಿಸಿದವರು. ಸರ್ವಜ್ಞ, ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲೂಕಿನ ಅಬಲೂರು ಗ್ರಾಮದವರು. ತಂದೆ ಬಸವರಸ ಮತ್ತು ತಾಯಿ ಮಾಳೆಯ ಪುತ್ರನಾಗಿ ಜನಿಸಿದ ಇವರ ಮೂಲ ಹೆಸರು ಪುಷ್ಪದತ್ತ, ಲೋಕಸಂಚಾರ ಮಾಡುತ್ತಾ, ತಮ್ಮ ಅನುಭವದೊಂದಿಗೆ ಬೆಂದು, ಜ್ಞಾನವನ್ನೇ ಉಸಿರಾಗಿಸಿಕೊಂಡು ಅವರು ಸರ್ವಜ್ಞರಾಗಿ ರೂಪುಗೊಂಡರು” ಎಂದರು.

“ಸರ್ವಜ್ಞನ ವಿಚಾರಗಳು ಇಂದಿಗೂ ಪ್ರಸ್ತುತ. ಸಮಾಜದಲ್ಲಿನ ಜಾತಿ ಪದ್ಧತಿ, ಧಾರ್ಮಿಕ ಅಸಹಿಷ್ಣುತೆ, ಮತ್ತು ಮೌಲ್ಯಗಳ ಕುಸಿತವನ್ನು ಸರಿಪಡಿಸಲು ಸರ್ವಜ್ಞನ ತ್ರಿಪದಿಗಳು ‘ದಿಕ್ಸೂಚಿ’ಯಂತೆ ಇಂದಿಗೂ ಕೆಲಸ ಮಾಡುತ್ತವೆ. ನಮ್ಮ ಶಿಕ್ಷಣ ವ್ಯವಸ್ಥೆ ಕೇವಲ ಪುಸ್ತಕದ ಜ್ಞಾನ ನೀಡುತ್ತಿದೆ, ಆದರೆ ಸರ್ವಜ್ಞ ಹೇಳಿದ ‘ಅನುಭವದ ಶಿಕ್ಷಣ’ ನಮಗೆ ಬೇಕಾಗಿದೆ” ಎಂದರು.

ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಅಕ್ಬರಸಾಬ್ ಬಬರ್ಚಿ, ವಿ.ಆರ್. ಕುಂಬಾರ, ಮುರಿಗೆಪ್ಪ ಕೇರಿ, ಯಲ್ಲಪ್ಪ ಕುಂಬಾರ, ನಿಂಗಪ್ಪ ಕುಂಬಾರ, ಶರಣಮ್ಮ, ಈಶ್ವರಪ್ಪ ಕುಂಬಾರ, ಸಮಾಜದ ಮುಖಂಡರು, ಗಣ್ಯರು, ಮಹಿಳೆಯರು, ಸಾರ್ವಜನಿಕರರು ಉಪಸ್ಥಿತರಿದ್ದರು. ವೀರಣ್ಣ ಅಂಗಡಿ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...