ಗದಗ | ನಾಗಾವಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣಿತ ಗಣಕ ಕಾರ್ಯಾಗಾರ

Date:

Advertisements

“ಮಕ್ಕಳ ಆಂತರಿಕ ವಿಕಾಸಕ್ಕೆ ಗಣಿತ ಗಣಕ ಕಲಿಕಾ ತರಬೇತಿಗಳು ಸೃಜನಶೀಲವಾದ ಚಟುವಟಿಕೆಗಳಾಗಿರುತ್ತವೆ. ಶಿಕ್ಷಕರಲ್ಲಿಯೂ ನವೀನವಾದ ಬೋಧನಾ ಕೌಶಲ್ಯಗಳನ್ನು ಆಳವಡಿಸಿಕೊಳ್ಳಲು ಸಾಧ್ಯವಾಗುವುದು. ಗಣಿತದ ಮೂಲ ಅಂಶಗಳು ಮಕ್ಕಳಲ್ಲಿಯ ವ್ಯವಹಾರದ ಗಣಿತವನ್ನು ಉತ್ತೇಜಿಸಲು ಸರಕಾರ ಇಂತಹ ತರಬೇತಿಗಳನ್ನು ಆಯೋಜಿಸುವುದು ಉಪಯುಕ್ತವಾಗಿದೆ” ಎಂದು ಬಿ.ಆರ್. ದೇವರೆಡ್ಡಿ ಹೇಳಿದರು.

ಗದಗ ಜಿಲ್ಲೆಯ ಗದಗ ತಾಲೂಕಿನ ನಾಗಾವಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಉಪನಿರ್ದೇಶಕರ ಕಾರ್ಯಾಲಯ, ಗದಗ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಗದಗ ಸಹಯೋಗದ ಅಡಿಯಲ್ಲಿ ಬೆಳದಡಿ, ಅಡವಿಸೋಮಾಪುರ, ಹುಯಿಲಗೋಳ, ಲಕ್ಕುಂಡಿ, ಕೋಟುಮುಡಗಿ ಮತ್ತು ಕಣಗಿನಹಾಳ 3,4,5 ನೇ ತರಗತಿ ಗಣಿತ ಬೋಧಿಸುವ ಶಿಕ್ಷಕರಿಗೆ ಗಣಿತ ಗಣಕ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ತರಬೇತಿಯ ಮುಖ್ಯ ಅತಿಥಿ ಸುರೇಶ ಕೊಪ್ಪದ ಮಾತನಾಡಿ, “ಶಿಕ್ಷಕ ವೃತ್ತಿ ಶ್ರೇಷ್ಠವಾದ ವೃತ್ತಿಯಾಗಿದೆ. ಮಗುವಿನ ಬೆಳವಣಿಗೆಯಲ್ಲಿ ಸಮಾಜದ ನಿಯೋಗವಾದ ಶಾಲೆಯ ಪಾತ್ರ ಬಹುಮುಖ್ಯವಾಗಿದೆ. ಗಣಿತ ಮತ್ತು ಅಂಕ ಗಣಿತ ಮೂಲಕ್ರಿಯೆಗಳು ಮಗುವಿನ ಸರ್ವಾಂಗೀಣ ಪ್ರಗತಿಗೆ ಕಾರಣವಾಗಿದೆ. ಗಣಿತ ಕಲಿಕಾ ತರಬೇತಿಯಲ್ಲಿ ಇವು ಸಾಕಾರಗೊಳ್ಳಬೇಕು” ಎಂದು ಹೇಳಿದರು.

Advertisements

ಕ್ಷೇತ್ರ ಸಮನ್ವಯಾಧಿಕಾರಿ ಜೆ.ಎ. ಭಾವಿಕಟ್ಟಿ ಮಾತನಾಡಿ, ಶಿಕ್ಷಕರಿಗೆ ಗಣಿತ ಗಣಕ ಕಲಿಕಾ ತರಬೇತಿಯ ಉಪಯುಕ್ತತೆಯನ್ನು ತಿಳಿಸಿದರು. ಗಣಿತ ಬೋಧಿಸುವ ಶಿಕ್ಷಕರಿಗೆ ಈ ತರಬೇತಿಗಳು ಸೃಜನಶೀಲತೆಯನ್ನು ಬೆಳಸಿಕೊಳ್ಳಲು ಅನುಕೂಲವಾಗುತ್ತವೆ ಎಂದು ಹೇಳಿದರು.

ಶಾಲೆಯ ಪ್ರಧಾನ ಗುರುಗಳಾದ ಶ್ರೀಮತಿ ಎ.ವಿ. ಯಾಳವಾರ ಸರ್ವರನ್ನು ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಚಂದ್ರು ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನು ಓದಿದ್ದೀರಾ? ಗದಗ | ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಅಭಿಯಾನ: ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್

ವಿರ್ದ್ಯಾಥಿನಿಯರಾದ ಮೇಘಾ ಮತ್ತು ಪಾರ್ವತಿ ಪ್ರಾರ್ಥಿಸಿದರು. ಸಹಶಿಕ್ಷಕರು ಶ್ರೀ ಶಂಭುಗೌಡ ಎಸ್ ತಮ್ಮನಗೌಡರ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ಸುರೇಶ ದೊಡ್ಡಮನಿ ವಂದಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕನಕಪ್ಪ ಬೇವಿನಮರದ ಹಾಗೂ ಆರು ವಲಯದ ಸಮೂಹ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಕ್ಷಕರು ಮತ್ತು ಶಿಕ್ಷಕಿಯರು, ಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X