ಗದಗ | ಅಮ್ಮಾ ಫೌಂಡೇಶನ್ ಉದ್ಘಾಟನೆ

Date:

ಗದಗನಲ್ಲಿ ಅಮ್ಮಾ ಫೌಂಡೇಶನ್ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ರೋಟರಿ ಭವನದಲ್ಲಿ ನಡೆದಿದೆ.

- Advertisement -

ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಮಣಕವಾಡದ ಪರಮಪೂಜ್ಯ ಶ್ರಿಸಿದ್ದರಾಮ ದೇವರು ಈ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮುಂದಿನ ದಿನಗಳಲ್ಲಿ ಒಳ್ಳೆಯ ರೀತಿಯಲ್ಲಿ ನಿಮ್ಮ ಪೌಂಡೇಶನ್ ದಿಂದ ಒಳ್ಳೆಯ ಕೆಲಸಗಳು ಆಗಲಿ, ಆ ಕೆಲಸಗಳ ಮುಖಾಂತರ ದೊಡ್ಡ ಪ್ರಮಾಣದಲ್ಲಿ ನಿಮ್ಮ ಫೌಂಡೇಶನ್ ಬೆಳೆಯಲಿ ಎಂದು ಆಶೀರ್ವದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಅಮ್ಮಾ ಫೌಂಡೇಶನ್ ಇದರ ನೂತನ ಅಧ್ಯಕ್ಷರಾಗಿ ವಕೀಲರಾದ ಮೈಲಾರಪ್ಪ ಡಿ.ಎಚ್, ಕಾರ್ಯದರ್ಶಿಯಾಗಿ ವಿಶ್ವನಾಥ ದಾಲಾಲಿ, ಖಜಾಂಚಿಯಾಗಿ ಮಾರುತಿ ಜಿ.ಏಚ್ ಪದಗ್ರಹಣ ಮಾಡಿದರು. ಇದರ ಜೊತೆಗೆ ಇನ್ನುಳಿದ ಎಲ್ಲಾ ಪದಾಧಿಕಾರಿಗಳು ಪದಗ್ರಹಣ ಮಾಡಿದರು ಮತ್ತು ಎಲ್ಲಾ ಅಥಿಗಳು ಈ ಅಮ್ಮಾ ಫೌಂಡೇಶನ್ ಲೋಗೋ ಬಿಡುಗಡೆ ಮತ್ತು ಪದಾಧಿಕಾರಿಗಳ ಪಟ್ಟಿ ಅನಾವರಣ ಮಾಡಿದರು.

ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷರಾಗಿದ್ದ ವಾಯ್.ಎನ್. ಗೌಡರ್ ಅವರು ತಮ್ಮ ಹೋರಾಟದ ಅನುಭವವನ್ನು ಹಂಚಿಕೊಳ್ಳುವ ಮೂಲಕ ಎಲ್ಲಾ ಪದಾಧಿಕಾರಿಗಳು ನ್ಯಾಯುತವಾಗಿ, ಕಾನೂನುಬದ್ಧವಾಗಿ ನಿಮ್ಮ ಈ ಅಮ್ಮಾ ಪೌಂಡೇಶನ ಸಾಮಾಜಿಕ ಕೆಲಸ ಮಾಡಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಗುಂಜಿಕರ್, ತಮ್ಮ ಇಲಾಖೆಯ  ಹಳೆಯ ವಿದ್ಯಾರ್ಥಿಗಳು ಎಲ್ಲರೂ ಸೇರಿ ಈ ಪೌಂಡೇಶನ್ ಹುಟ್ಟು ಹಾಕುವ ಮುಖಾಂತರ ಸಮಾಜಮುಖಿ ಕೆಲಸ ಮಾಡಲು ಮುಂದಾಗುತ್ತಿರುವುದು ತುಂಬಾ ಖುಷಿಯ ವಿಚಾರ. ನಿಮ್ಮ ನಡೆ ಬಡವರ, ಕಾರ್ಮಿಕರ, ರೈತರ, ದಲಿತರ ಪರವಾಗಿ ಮತ್ತು ಅವರ ಅಭಿವೃದ್ದಿ ಪರವಾಗಿ ಇರುವ ಹಲವಾರು ಯೋಜನೆ ಮತ್ತು ಕಾರ್ಯಕ್ರಮಗಳು ಈ ಪೌಂಡೇಶನ್ ನಿಂದ ಆಗಲಿ ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲ  ರುದ್ರಗೌಡ ಪಾಟೀಲ, ನೀವು ಏನೇ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡಿದರೆ ನನ್ನಿಂದ ನಿಮಗೆ ಏನಾದರೂ ಸಹಾಯ ಮತ್ತು ಸಹಕಾರ ಬೇಕಾದ್ರೆ ಕಂಡಿತಾ ಮಾಡುವೆ ಎಂದು ಹೇಳುವ ಮುಖಾಂತರ ಬೆಂಬಲ ಸೂಚಿಸಿದರು.

ಯುವ ನಾಯಕರುಗಳು ಗ್ರಾಮ ಪಂಚಾಯತ ಸದಸ್ಯರುಗಳಾದ ತಿಮ್ಮರೆಡ್ಡಿ ಮರಡ್ಡಿ ಮತ್ತು ಮೋಹನ್ ಗುತ್ತೆಮ್ಮನವರ ಮಾತನಾಡಿ, ನಮ್ಮ ಬಸವರಾಜ್ ಬಳ್ಳಾರಿ ಸರ್ ನೇತೃತ್ವದಲ್ಲಿ ಆರಂಭವಾದ ಈ ಅಮ್ಮಾ ಫೌಂಡೇಶನ್ ಇದು ಮುಂದಿನ ದಿನಗಳಲ್ಲಿ ಒಳ್ಳೆಯ ಕೆಲಸ  ಮಾಡುವ ಮುಖಾಂತರ ಉನ್ನತ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕರು ಏಚ್.ಎಮ್. ಶರಿಪನವರ್, ಪ್ರೇಮನಾಥ ಗರಗ, ರೋಟರಿ ಸಂಸ್ಥೆಯ ಅದ್ಯಕ್ಷ ವಿಜಯ ಹಿರೇಮಠ, ಹುಚ್ಚಪ್ಪ  ಸಂದಕದ, ಕೆ.ಎಫ್. ಹಳ್ಯಾಳ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು,  ವಿದ್ಯಾರ್ಥಿಗಳು ಮಹಿಳೆಯರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...