ಎಸ್ಪಿ/ಟಿಎಸ್ಪಿ ಅನುದಾನವನ್ನು ಬಳಸಿಕೊಂಡು ಎಲ್ಲೂ ಟರ್ಫ್ ನಿರ್ಮಾಣ ಮಾಡಿಲ್ಲ. ಕಲ್ಲು, ಮಣ್ಣಿನಲ್ಲಿ ಆಡುತ್ತಿದ್ದ ಯುವಕರು ಇಂದು ಟರ್ಫ್ ಗ್ರೌಂಡ್ನಲ್ಲಿ ಆಡುವ ಸುಯೋಗ ಒದಗಿ ಬಂದಿದೆ. ಗದಗ ಯುವಕರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಕಿ ತಂಡವನ್ನು ಪ್ರತಿನಿಧಿಸಿದ್ದಾರೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳ ಸಚಿವ ಡಾ. ಎಚ್.ಕೆ ಪಾಟೀಲ್ ಹೇಳಿದ್ದಾರೆ.
ಗದಗ-ಬೆಟಗೇರಿಯ ಗಾಂಧಿ ನಗರದ ಮಹಾತ್ಮಾ ಗಾಂಧಿ ಹಾಕಿ ಕ್ರೀಡಾಂಗಣವನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಅವರು ಉದ್ಘಾಟಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಅಂತಾರಾಷ್ಟ್ರೀಯ ಹಾಕಿ ಕ್ರೀಡಾಪಟು ರಾಜು ಬಗಾಡೆ, ಹರೀಶ ಮುಟಗಾರ, ಹಿರಿಯ ಹಾಕಿ ಕ್ರೀಡಾಪಟು ಹನುಮಂತಪ್ಪ ವೀರಾಪೂರ, ಗಂಗಣ್ಣ ಕೋಟಿ, ರಘುನಾಥಸಾ ಶಿದ್ಲಿಂಗ್, ಯಲ್ಲಪ್ಪ ಗಡಾದ, ಯಲ್ಲಪ್ಪ ಕೊರವರ, ವಿ.ಎಸ್. ಮಣಿ, ಕಾರ್ಲಟನ್ ಗೋಮ್ಸ್ ಅವರನ್ನು ಸನ್ಮಾನಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ರೋಣ ಶಾಸಕ ಜಿ.ಎಸ್.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ, ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ, ಮಾಜಿ ಶಾಸಕ ಡಿ.ಆರ್.ಪಾಟೀಲ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ವಿ.ಎಸ್.ಪಾಟೀಲ ಉಪಸ್ಥಿತಿ ವಹಿಸಿದ್ದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸ್ವಾಗತಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.