ಗದಗ | ಸಂವಿಧಾನ ಪೀಠಿಕೆ ಓದುವ ಮೂಲಕ ಮಸೀದಿ ಉದ್ಘಾಟನೆ

Date:

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ನದಾಫ್ ಬಡಾವಣೆಯಲ್ಲಿ ಮಸೀದಿ ನಿರ್ಮಾಣವಾಗಿದ್ದು, ರೋಣ ಪುರಸಭೆಯ ಉಪಾಧ್ಯಕ್ಷ ಮಿಥುನ ಜಿ ಪಾಟೀಲ್‌ ಅವರು ಸಂವಿಧಾನದ ಪೀಠಿಕೆ ಓದುವ ಮೂಲಕ‌ ಮಸೀದಿ-ಏ-ಉಮರ್ ಕಟ್ಟಡವನ್ನು ಉದ್ಘಾಟಿಸಿದರು.

- Advertisement -

ಉದ್ಘಾಟನೆ ಬಳಿಕ ಮಾತನಾಡಿದ ಅವರು “ಪ್ರಾರ್ಥನೆಯ ಅತ್ಯಮೂಲ್ಯ ಮೌಲ್ಯದ ಮೇಲೆ ವಿಶೇಷ ಒತ್ತು ನೀಡುವುದು ಇಸ್ಲಾಮಿನ ಗಮನಾರ್ಹ ಲಕ್ಷಣಗಳಲ್ಲಿ ಒಂದಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ಧರ್ಮದ ರಚನೆಯಲ್ಲಿ ಪ್ರಾರ್ಥನೆಯು ಮುಖ್ಯ ಸ್ತಂಭವಾಗಿದೆ. ಇದು ಮನುಷ್ಯನ ನೈತಿಕ ಉನ್ನತಿಯ ಪ್ರಬಲ ಸಾಧನವಾಗಿದೆ. ಮುಸಲ್ಮಾನ್ ಸಮುದಾಯವು ಮಸೀದಿಯನ್ನು ಸಂಪೂರ್ಣವಾಗಿ ಬಳಸಿದರೆ ಮತ್ತು ಅವರು ಪ್ರಾರ್ಥನೆ ಮತ್ತು ಧ್ಯಾನಕ್ಕಾಗಿ(ಮಸ್ಜೀದಿಯನ್ನು) ನಿರಂತರವಾಗಿ ಆಶ್ರಯಿಸಿದರೆ ಅದು ನನಗೆ ತುಂಬಾ ಸಂತೋಷವನ್ನು ನೀಡುತ್ತದೆ” ಎಂದು ಮಿಥುನ್ ಪಾಟೀಲ್ ಹೇಳಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ವಿಜಯ ಮಹಾಂತ ಮಹಾಸ್ವಾಮಿ ಮೈಸೂರು ಸಂಸ್ಥಾನಮಠ, ಕುದರಿಮೋತಿ-ಗಜೇಂದ್ರಗಡ ಅವರು ಮಾತನಾಡಿ, “ಕೂಡಿ ಬಾಳುವುದರಲ್ಲಿ ಮನುಷ್ಯ ಬದುಕಿನ ಸಾರ್ಥಕತೆ ಅಡಗಿದೆ. ಸಾಮಾಜಿಕ ಸ್ವಾಸ್ಥ್ಯ, ಸೌಹಾರ್ದತೆ, ಭಾವೈಕ್ಯತೆ, ಸಾಮರಸ್ಯವು ಉತ್ತಮ ಸಮಾಜದ ಆಧಾರ ಸ್ಥಂಭಗಳಾಗಿವೆ. ಸಮಾಜದ ಜೀವಿಯಾದ ಮನುಷ್ಯ ಸಾಮಾಜಿಕ ಪರೋಪಕಾರ ಪ್ರಜ್ಞೆಯೊಂದಿಗೆ ಬದುಕಿದಾಗ ಮಾತ್ರ ಒಂದು ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಿದೆ” ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಷ್ಟಗಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಟಿಬಿ ಡ್ಯಾಂ ಕಾಡಾ   ಅಧ್ಯಕ್ಷರೂ ಆಗಿರುವ ಮುನಿರಾಬಾದ್‌ ಮಾತನಾಡಿ, “ಪರಸ್ಪರ ಸೌಹಾರ್ದತೆ, ಸಹಬಾಳ್ವೆ, ಸಹನೆಯಿಂದ ನಾವೆಲ್ಲರೂ ಒಂದೇ ಎಂಬ ಮನೋಭಾವನೆ ಬೆಳೆಸಿಕೊಂಡರೆ ಸಮಾಜದ ಹಾಗೂ ದೇಶದ ಅಭಿವೃದ್ಧಿ ಸಾಧ್ಯ. ತಿಳಿವಳಿಕೆಯ ಕೊರತೆಯಿಂದ ಧರ್ಮ-ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಕ್ಷುಲ್ಲಕ ಕಾರಣಕ್ಕೆ ಹಿಂದೂ ಮುಸಲ್ಮಾನರ ಸೌಹಾರ್ದತೆಗೆ ಧಕ್ಕೆ ಆಗಬಾರದು” ಎಂದು ಹೇಳಿದರು.

ಮಸೀದಿ ನಿರ್ಮಾಣಕ್ಕೆ ಸ್ಥಳವನ್ನು ದಾನವಾಗಿ ಕೊಟ್ಟ ಮಹೆಬೂಬಸಾಬ, ಮಹ್ಮದಲಿ, ಹುಸೇನಪಬಾಷಾ, ಜಾವೇದ್‌, ಇಬ್ರಾಹೀಂ ಇವರನ್ನು ಅತಿಥಿಗಳು ಗೌರವಿಸಿ ಸನ್ಮಾನಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಪ್ರವಾಸಿತಾಣಕ್ಕೆ ಬರುವ ಪ್ರವಾಸಿಗರಿಗೆ ಆನ್‌ಲೈನ್ ನೋಂದಣಿ ಕಡ್ಡಾಯ; ಸ್ಥಳೀಯರ ಆಕ್ರೋಶ  

ವೇದಿಕೆಯಲ್ಲಿ ಮೌಲಾನಾ ಝಕ್ರಿಯಾ ಸಾಹೇಬ ಖಾಜಿ, ಮೌಲಾನಾ ಶಬ್ಬೀರ ಅಹ್ಮದ ಕಲ್ಮನಿ, ಹನಮಪ್ಪ ಹೊರಪೇಟಿ, ಇಮಾಮಸಾಬ ಬಾಗವಾನ, ಮೋದಿನಸಾಬ ಮುಜಾವರ, ಮಹೆಬೂಬಸಾಬ ಮಕಾನದಾರ ಮಹ್ಮದ ಹನೀಫ ಲಿಂಗಸ್ಗೂರ, ಮುರ್ತುಜಾಸಾಬ ನಧಾಫ್, ಗುಡುಸಾಬ ಬಾಗವಾನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...