ಗದಗ | ಸ್ವತಂತ್ರ ದಿನಾಚರಣೆ; ಅಧಿಕಾರಿಯಿಂದ ಅಂಬೇಡ್ಕರ್‌ಗೆ ಅವಮಾನ – ಕ್ಷಮೆ ಯಾಚನೆ

Date:

ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ, ಅಂಬೇಡ್ಕರ್‌ಗೆ ಅವಮಾನ ಮಾಡಿರುವ ಘಟನೆ ಗದಗ್‌ನ ವಾಯವ್ಯ ಕರ್ನಾಟಕ ಸಾರಿ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.

ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ವೇಳೆ ಗಾಂಧೀಜಿ ಭಾವಚಿತ್ರ ಮಾತ್ರವೇ ಇತ್ತು. ಅಂಬೇಡ್ಕರ್ ಫೋಟೋವನ್ನು ಉದ್ದೇಶಪೂರ್ವಕವಾಗಿ ಇಡದೇ, ಅವಮಾನ ಮಾಡಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ. ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಶರೀಫ್ ಬಿಳಿಯಲಿ, “ಕೆಲವು ಅಧಿಕಾರಿಗಳಿಗೆ ಸ್ವತಂದ್ರದ ಪರಿಕಲ್ಪನೆಯೇ ಗೊತ್ತಿಲ್ಲ. ಸ್ವತಂತ್ರ್ಯ ದಿನಾಚರಣೆ ಅಂದರೆ, ಅವರ ಮನೆಯಲ್ಲಿ ಪೂಜೆ ಮಾಡುವಂತೆ ಎಂದು ತಿಳಿದುಕೊಂಡಿದ್ದಾರೆ. ಸಾರ್ವಜನಿಕ ಕಛೇರಿಯಲ್ಲಿ ಸ್ವತಂತ್ರ ದಿನಾಚರಣೆ ಹೇಗೆ ಮಾಡಬೇಕೆಂದುನ್ನು ಮರೆತು ಬಿಟ್ಟಿದ್ದಾರೆ” ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಜಿ ಶೀಣಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದ್ವಜದ ಕಲ್ಪನೆಯನ್ನು ಕೊಟ್ಟವರೇ ಅಂಬೇಡ್ಕರ್. ಅವರು ಬರೆದ ಸಂವಿಧಾನದಿಂದಲೇ ಬಹುಸಂಖ್ಯೆಯ ಜನರು ಉನ್ನತ ಸ್ಥಾನಗಳನ್ನು ಪಡೆಯುತ್ತಿದ್ದಾರೆ. ಅವರಿಗೆ ಅಧಿಕಾರಿಗಳು ಅವಮಾನ‌ ಮಾಡುವುದು ದಲಿತ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತದೆ” ಎಂದು ಕಿಡಿಕಾರಿದರು.

ಅಧಿಕಾರಿ ಜಿ ಶೀಣಯ್ಯ ತಪ್ಪನ್ನು ಒಪ್ಪಿಕೊಂಡು, ಪ್ರತಿಭಟನಾಕಾರರ ಬಳಿ ಕ್ಷಮೇಕೋರಿದರು. ಸಂವಿಧಾನ ಪೀಠಿಕೆ ಓದಿ, ಮಹಾತ್ಮ ಗಾಂಧೀಜಿ ಜೊತೆಗೆ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ನಮಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ...

ದಾವಣಗೆರೆ | ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾ

ಎಲ್ಲ ಸಮುದಾಯಗಳ ಮಾನವರು ಒಂದೇ. ನಾವೆಲ್ಲ ಕೂಡಿ ಸಹೋದರತ್ವ ಭಾವನೆಯಿಂದ ಬದುಕಬೇಕೆಂಬ...

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ...

ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು,...