ಗದಗ | ಬಿ. ಆರ್ ಗವಾಯಿ ಅವರಿಗೆ ಅವಮಾನ; ರಾಕೇಶ ಕಿಶೋರನನ್ನು ಗಡಿಪಾರು ಮಾಡಲು ಒತ್ತಾಯ

Date:

“ಸರ್ವೋಚ್ಚ ನ್ಯಾಯಾಲಯದಲ್ಲಿ ಸಂವಿಧಾನದ ಪ್ರಮುಖ ಕಂಬ ನ್ಯಾಯಾಂಗದ ಮೇಲೆ ಒಬ್ಬ ಮನುವಾದಿ ರಾಕೇಶ ಕಿಶೋರ ಎಂಬ ನ್ಯಾಯವಾದಿ ಸೋಗಿನ ಭಯೋತ್ಪಾದಕ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಯವರ ಮೇಲೆ ತನ್ನ ಕಾಲಿನ ಬೂಟನ್ನು ಎಸೆದಿರುವುದು ಭಾರತದ ಸಂವಿಧಾನಕ್ಕೆ ಅವಮಾನಿಸಿದ್ದಾನೆ. ಕೂಡಲೇ ರಾಕೇಶನನ್ನು ಗಡಿಪಾರು ಮಾಡಬೇಕು” ಎಂದು ದಲಿತ ಮುಖಂಡರು ಒತ್ತಾಯಿಸಿದರು.

- Advertisement -

ನ್ಯಾಯಾಧೀಶರು ಬಿ.ಆರ್. ಗವಾಯಿಯವರ ಮೇಲೆ ನಡೆದ ಹಲ್ಲೆ ಖಂಡಿಸಿ ವಿವಿಧ ದಲಿತ ಸಂಘಟನೆಗಳಿಂದ ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಭಾರತ ದೇಶ ವಿವಿಧ ಧರ್ಮಗಳ, ವಿವಿಧ ಜಾತಿಗಳ, ವಿವಿಧ ಸಂಸ್ಕೃತಿಗಳ ಮತ್ತು ಆಚಾರ-ವಿಚಾರಗಳನ್ನು ಅಳವಡಿಸಿಕೊಂಡು ಸೌಹಾರ್ದತೆಯಿಂದ ಬದುಕುತ್ತಿರುವ ದೇಶ. ಇದಕ್ಕೆ ಪೂರಕವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರವರು ದೇಶಕ್ಕೆ ನೀಡಿದ ಸಂವಿಧಾನದಲ್ಲಿ ಎಲ್ಲರು ಗೌರವದಿಂದ ಬದುಕಲು ಅವಕಾಶಗಳನ್ನು ಕಲ್ಪಿಸಿದ್ದಾರೆ” ಎಂದರು.

“ಜಾತ್ಯಾತೀತ ಕಲ್ಪನೆಯನ್ನು ಸಹಿಸಲಾರದ ಮನುವಾದಿಗಳು, ಆಗಾಗೆ ಸಂವಿಧಾನದ ಆಶಯಗಳಿಗೆ ಭಂಗ ತರುವ ತಂತ್ರಗಳು ನಡೆಯುತ್ತಿರುವುದು ಖಂಡನೀಯ” ಎಂದು ಹೇಳಿದರು.

ಗವಾಯಿ ಅವರ ಮೇಲಿನ ದಾಳಿಯು ಭಯೋತ್ಪಾದನೆ ಘಟನೆಯನ್ನು ಖಂಡಿಸುವ ಮೂಲಕ ಸದರಿ ಕೋಮುವಾದಿ ಮತ್ತು ದೇಶದ್ರೋಹಿ ಗುಂಡಾ ನ್ಯಾಯವಾದಿಯನ್ನು ಯಾವುದೇ ಜಾಮೀನಿಗೆ ಅವಕಾಶವಿಲ್ಲದ ಕಾಯ್ದೆಯ ಮೂಲಕ ತಕ್ಷಣ ಬಂಧಿಸದಬೇಕು. ಆತನ ನ್ಯಾಯವಾದಿ ಪರವಾನಿಗೆ ರದ್ದುಪಡಿಸಬೇಕು. ಶೈಕ್ಷಣಿಕ ಪ್ರಮಾಣ ಪತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಅವನ ಆಸ್ತಿಯನ್ನು ಸಹ ಮುಟ್ಟುಗೋಲು ಹಾಕಿಕೊಂಡು ದೇಶದಿಂದಲೇ ಗಡಿಪಾರು ಮಾಡಬೇಕು ” ಎಂದು ಒತ್ತಾಯಿಸಿದರು.

“ಸಂವಿಧಾನದ ಆಶಯಗಳಿಗೆ ಭಂಗಬಾರದ ರೀತಿಯಲ್ಲಿ ಪ್ರಭುತ್ವ ಕ್ರಮ ಜರುಗಿಸಿ ಜಾತ್ಯಾತೀತ ರಾಷ್ಟ್ರ ನಿರ್ಮಾಣಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು ” ಎಂದು ವಿವಿಧ ದಲಿತ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

 ಈ ಸಂದರ್ಭದಲ್ಲಿ ವೆಂಕಟೇಶಯ್ಯ ಜಿಲ್ಲಾ ಸಂಚಾಲಕರು (ಕೆರಗೋಡ ಬಣ), ಪ್ರಕಾಶ ಕೇಲೂರ ರಾಜ್ಯ ಸಂಘಟನಾ ಸಂಚಾಲಕರು (ನಾಗವಾರ ಬಣ), ರಮೇಶ ಬಾಳಮ್ಮನವರ ಜಿಲ್ಲಾ ಸಂಚಾಲಕರು (ಸಾಗರ ಬಣ), ಸತೀಶ ಹುಲಿ ದಲಿತ ಮುಖಂಡರು, ವಿಜಯ ಚಲವಾದಿ ದಲಿತ ಮುಖಂಡರು ನರಗುಂದ, ಅಶೋಕ ತಾಳದವರ ದಲಿತ ಮುಖಂಡರು ರೋಣ, ಮಂಜು ಚಲವಾದಿ ದಲಿತ ಮುಖಂಡರು ರೋಣ, ಯಮನೂರ ಹೊಸಳ್ಳಿ, ಬಸವರಾಜ ಗಾಡಗೋಳಿ, ವಾಸು ಹುಣಸೀಮರದ, ಬಸಪ್ಪ ಸಣ್ಣಕ್ಕಿ, ಮಹಾಂತೇಶ ಬಾಳಮ್ಮನವರ, ಅನಿಲ ದೊಡ್ಡಮನಿ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...