ಗದಗ | ಜೀವನೋಪಾಯ ಹಕ್ಕು, ಸಂರಕ್ಷಣೆ ಖಾತ್ರಿಪಡಿಸುವುದು ಸ್ಥಳಿಯ ಸಂಸ್ಥೆಗಳ ಕರ್ತವ್ಯ: ಮಹೇಶ ಪತ್ತಾರ

Date:

“ಸಣ್ಣಪುಟ್ಟ ವ್ಯಾಪಾರ ಮಾಡುವ ಮುಖಾಂತರ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಈ ಮುಖಾಂತರ ಅವರ ಜೀವನೋಪಾಯ ಹಕ್ಕು,  ಸಂರಕ್ಷಣೆ ಖಾತ್ರಿಪಡಿಸುವುದು ಸ್ಥಳಿಯ ಸಂಸ್ಥೆಗಳ ಕರ್ತವ್ಯ ಆಗಬೇಕು” ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಬೀದಿ ಬದಿ ವ್ಯಾಪಾರಿಗಳ ಫೆಡರೇಶನ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹೇಶ ಪತ್ತಾರ ಆಗ್ರಹಿಸಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ಸಮುದಾಯ ಭವನದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಂಘ (ಸಿಐಟಿಯು)ಸಂಘಟನಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಬೀದಿ ವ್ಯಾಪಾರಿಗಳನ್ನು ಒಂದು ಸಮಸ್ಯೆಯಾಗಿ ನೋಡುವ ಬದಲು ಅವರನ್ನು ನಗರ ಆರ್ಥಿಕತೆಯ ಪ್ರಮುಖ ಭಾಗವೆಂದು ಗುರುತಿಸುವತ್ತ ಸಾಗಬೇಕಿದೆ. ಬೀದಿ ಬದಿ ವ್ಯಾಪಾರಿಗಳು ಅಸಂಘಟಿತ ಕಾರ್ಮಿಕರಾಗಿದ್ದು, ಸರಕಾರ ಅವರಿಗೆ ಯೋಗ್ಯ ಬಡ್ಡಿರಹಿತ ಸಾಲ ಸೌಲಭ್ಯ ಹಾಗೂ ಸಾಮಾಜಿಕ ಭದ್ರತೆಯನ್ನು ಒದಗಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

ಬೀದಿ ಬದಿ ವ್ಯಾಪಾರಸ್ಥರ ಸಂಘದ ತಾಲೂಕ ಕಾರ್ಯದರ್ಶಿ ಪೀರು ರಾಠೋಡ ಮಾತನಾಡಿ, “ಬೀದಿ ಬದಿ ವ್ಯಾಪಾರ ನಂಬಿ ಪಟ್ಟಣದಲ್ಲಿ ನೂರಾರು  ಬಡ ಕುಟುಂಬಗಳು ಬದುಕುತ್ತಿವೆ. ರಾಜಕೀಯ ದೊಂಬರಾಟದಿಂದ ಆತಂಕದಲ್ಲೇ ಜೀವನ ಕಳೆಯುವಂತಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ  ನೋಟಿಸ್ ನೀಡಿದ ನಂತರ ತೆರವುಗೊಳಿಸಬೇಕು. ಕಾನೂನಿನ ಚೌಕಟ್ಟಿನಲ್ಲಿದ್ದರೆ ಬೀದಿ ಬದಿ ವ್ಯಾಪಾರಸ್ಥರಿಗೆ  ಬದುಕಲು ಅವಕಾಶ ಕೊಡಬೇಕು. ಆದರೆ, ರಾಜಕೀಯ ನಾಯಕರ ದೊಂಬರಾಟದ ಫಲ ಈಗ ಬೀದಿ ಬದಿ ವ್ಯಾಪಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

IMG 20250411 WA0013

ಡಿವಾಯ್ಎಫ್ಐ ಜಿಲ್ಲಾ ಮುಖಂಡರಾದ ದಾವಲಸಾಬ ತಾಳಿಕೋಟಿ, ಫಯಾಜ್ ತೋಟದ ಮಾತನಾಡಿ, “ಸರ್ಕಾರ ಬೀದಿ ಬದಿ ವ್ಯಾಪಾರಿ ಗಳ ಹಿತ ರಕ್ಷಣೆಗಾಗಿಯೆ ಪ್ರತ್ಯೇಕ ಕಾಯ್ದೆ ರೂಪಿಸಿದ್ದರೂ ಅದರ ಪರಿಣಾಮಕಾರಿ ಅನುಷ್ಠಾನದತ್ತ ಇಲ್ಲಿನ ಸ್ಥಳೀಯ ಸಂಸ್ಥೆ ಗಮನ ಹರಿಸಿಲ್ಲ. ಹೀಗಾಗಿ ಇಲ್ಲಿನ ಬೀದಿ ಬದಿ ವ್ಯಾಪಾರಿಗಳು ಸಾಮಾಜಿಕ ಭದ್ರತೆ ಇಲ್ಲದೆ ಬಳಲುವಂತಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ನೆಲೆ ಕಲ್ಪಿಸಬೇಕು ಎಂಬ ವಿಷಯ ಆಗಾಗ ಮುನ್ನೆಲೆಗೆ ಬಂದರೂ ನಂತರ ಅದು ಹಿಂದಕ್ಕೆ ಸರಿಯುತ್ತಿದೆ. ಹೀಗಾಗಿ ಸದಾ ಅಭದ್ರತೆಯಲ್ಲೆ ಬೀದಿ ಬದಿ ವ್ಯಾಪಾರಿಗಳು ಜೀವನ ನಿರ್ವಹಿಸುವಂತಾಗಿದೆ. ಪ್ರತಿಯೊಬ್ಬ ಬೀದಿ ಬದಿಯ ವ್ಯಾಪಾರಿಯ ಹಿಂದೆ ಒಂದು ಕುಟುಂಬವಿದೆ ಎಂಬ ಮಾನವೀಯ ಅಂತಃಕರಣದ ದೃಷ್ಟಿಕೋನ ಆಡಳಿತ ನಡೆಸುವವರಿಗೆ ಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | 42ನೇ ವಯಸ್ಸಿನಲ್ಲಿ ಮಗಳೊಂದಿಗೆ ಪಿಯು ಪರೀಕ್ಷೆ ಬರೆದು ಪಾಸಾದ ತಾಯಿ

ಕಾರ್ಯಗಾರದಲ್ಲಿ ಎಸ್.ಎಫ್.ಐ ಮುಖಂಡ ಗಣೇಶ ರಾಠೋಡ, ಕೃಷಿ ಕೂಲಿಕಾರ ಸಂಘದ ತಾಲೂಕ ಅಧ್ಯಕ್ಷ ಬಾಲು ರಾಠೋಡ, ಮೈಬು ಹವಾಲ್ದಾರ್, ಅನ್ವರಭಾಷಾ ಹಿರೇಕೊಪ್ಪ, ರೂಪೇಶ ಮಾಳೋತ್ತರ, ಅಂಬರೀಶ್ ಚವ್ಹಾಣ,  ಕಳಕಪ್ಪ ಮಾಳೋತ್ತರ, ಮೆಹಬೂಬ್ ಮಾಲ್ದಾರ, ರಾಜು ಮಾಂಡ್ರೆ, ಚೌಡಮ್ಮ ಯಲ್ಪು, ಮಂಜುಳಾ ಪಮ್ಮಾರ, ಪರುಶರಾಮ ಬಡಿಗೇರ, ವಿಷ್ಣು ಚಂದುಕರ, ಸೇರಿದಂತೆ ನೂರಾರು ಬೀದಿ ಬದಿ ವ್ಯಾಪಾರಸ್ಥರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...