ಗದಗ | ಅಧಿಕಾರಿಗಳ ನಿರ್ಲಕ್ಷ್ಯ: ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟ ಇಟಗಿ ಬಸ್ ನಿಲ್ದಾಣ!

Date:

ಸರ್ಕಾರ ಪ್ರಯಾಣಿಕರ ಅನುಕೂಲಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಣೆ ಮಾಡಲು ನಿರಾಸಕ್ತಿ ತೋರುತ್ತಿರುವುದರಿಂದ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಡುತ್ತಿದೆ. ಸಾರ್ವಜನಿಕರ ಉಪಯೋಗಕ್ಕೆಂದು ಬಸ್ ನಿಲ್ದಾಣ ನಿರ್ಮಿಸಿದರೆ, ಅದು ಉಪಯೋಗಕ್ಕೆ ಬಾರದ ಸ್ಥಿತಿಗೆ ತಲುಪುತ್ತಿದೆ.

- Advertisement -

ಇದಕ್ಕೆ ಉತ್ತಮ ನಿದರ್ಶನ ಎನ್ನುವಂತೆ ಗದಗ ಜಿಲ್ಲೆಯ ರೋಣ ತಾಲೂಕಿನ ಇಟಗಿ ಗ್ರಾಮದ ಬಸ್ ನಿಲ್ದಾಣ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆಯಾದರೂ, ಉಪಯೋಗಕ್ಕೆ ಬಾರದ ಸ್ಥಿತಿಗೆ ತಲುಪಿದೆ. ಈ ಬಸ್ ನಿಲ್ದಾಣ ಬೆಳಗ್ಗಿನ ಸಮಯದಲ್ಲಿ ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟರೆ, ಸಂಜೆಯ ವೇಳೆಗೆ ಮದ್ಯಪಾನದಂತಹ ಅನೈತಿಕ ಚಟುವಟಿಕೆಗಳಿಗೆ ವೇದಿಕೆಯೊದಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಸಿದ್ಧಿ ಪಡೆದಿರುವ ಇಟಗಿ ಭೀಮಾಂಬಿಕೆ ದೇವಸ್ಥಾನಕ್ಕೆ ನೂರಾರು ಜನರು ಪ್ರತಿನಿತ್ಯ ಬರುತ್ತಾರೆ. ಹೀಗೆ ಬರುವ ಜನರಿಗೆ ಸರಿಯಾದ ಬಸ್ ನಿಲ್ದಾಣದಲ್ಲಿ ಕೂರಲು ವ್ಯವಸ್ಥೆ ಇರುವುದಿಲ್ಲ. ರಸ್ತೆ ಬದಿಯಲ್ಲಿಯೇ, ಬಿಸಿಲಿನಲ್ಲಿ ನಿಂತು ಬಸ್ಸಿಗೆ ಕಾಯುವಂತಾಗಿದೆ.

ರೋಣ ಬಸ್ಸುಗಳು ಇಟಗಿ ಗ್ರಾಮಕ್ಕೆ ಬಂದು ಸೂಡಿ  ಗ್ರಾಮದ ಮೂಲಕ ಗಜೇಂದ್ರಗಡಕ್ಕೆ ಸಾಕಷ್ಟು ಬಸ್ಸುಗಳು ಓಡಾಡುತ್ತವೆ. ಬಸ್ ನಿಲ್ದಾಣ ಅವ್ಯವಸ್ಥೆ ಆಗಿರುವುದರಿಂದ ಬೇರೆ ಕಡೆ ಬಸ್ಸುಗಳು ನಿಲ್ಲುತ್ತವೆ. ಹಾಗಾಗಿ ಪ್ರಯಾಣಿಕರು ಇಲ್ಲಿಗೆ ಬರುವುದಿಲ್ಲ

ಗ್ರಾಮದ ಬಸ್ ನಿಲ್ದಾಣವು ವಿಶಾಲವಾದ ಆವರಣ ಇದ್ದೂ ಇಲ್ಲದಂತಾಗಿದೆ. ಎಲ್ಲೆಂದರಲ್ಲಿ ಕಸ ಕಡ್ಡಿ ಬೆಳೆದು ನಿಂತಿದೆ. ಬಸ್ ನಿಲ್ದಾಣ ಉಪಯೋಗಕ್ಕೆ ಬಾರದೆ ಇರುವುದರಿಂದ ರೈತರು ಉಳ್ಳಾಗಡ್ಡಿ ಹಾಕಿದ್ದಾರೆ. ದನಕರುಗಳು ಬಿಡು ಬಿಟ್ಟಿರುತ್ತವೆ. ಇದರಿಂದ ದುರ್ವಸನೆ ಬಿರುತ್ತಿದೆ. ಇದರಿಂದ ಬಸ್ ನಿಲ್ದಾಣ ಹಾಳು ಕೊಂಪೆಯಾಗಿದೆ.

WhatsApp Image 2024 12 10 at 3.00.26 PM 1

ಇನ್ನು ಸರಿಯಾದ ನಿರ್ವಹಣೆ ಇಲ್ಲದೇ ಇರುವುದರಿಂದ ಈ ಬಸ್ ನಿಲ್ದಾಣ ಕುಡುಕರ ತಾಣವಾಗಿದೆ. ರಾತ್ರಿಯಾದರೆ ಕುಡುಕರು ಬಸ್ ನಿಲ್ದಾಣದಕ್ಕೆ ಬಂದು ಕುಡಿಯುತ್ತಾರೆ. ಇದರಿಂದ ಎಲ್ಲೆಂದರಲ್ಲಿ ಸಾರಾಯಿ ಪಾಕೇಟುಗಳು, ಬಾಟಲಿಗಳು, ಪೌಚುಗಳು ಕಾಣುತ್ತವೆ.

ಸರಕಾರದ ಅನುದಾನ ವ್ಯರ್ಥವಾದಂತಾಗಿದೆ. ಪ್ರಯಾಣಿಕರಿಗೆ ಬಸ್ ನಿಲ್ದಾಣ ಇದ್ದೂ ಇಲ್ಲದಂತಾಗಿದೆ. ಇಂತಹ ನಿಲ್ದಾಣ ನಿರ್ಮಾಣ­ವಾದರೂ ಯಾಕೆ ಮಾಡಬೇಕಿತ್ತು? ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ದಿನ ಡಾಟ್ ಕಾಮ್‌ನೊಂದಿಗೆ ಪ್ರಯಾಣಿಕ ಶಂಕ್ರಪ್ಪ ಎಂಬುವವರು ಮಾತನಾಡಿ, “ಎರಡು ಮೂರು ವರ್ಷಗಳಿಂದ ಈ ಬಸ್ ನಿಲ್ದಾಣ ಹೀಗೆಯೇ ಇದೆ.  ಬಸ್ ನಿಲ್ದಾಣ ಕಟ್ಟಿದರೆ ಸಾಲದು, ಸರಿಯಾಗಿ ನಿರ್ವಹಣೆಯು ಮಾಡಬೇಕು. ಸಾರಿಗೆ ಅಧಿಕಾರಿಗಳು ಇದ್ಯಾವುದನ್ನು ಮಾಡುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಬೆಳಗಾವಿ | 2ಎ ಮೀಸಲಾತಿ ಹೋರಾಟದಲ್ಲಿ ಕಲ್ಲು ತೂರಾಟ, ಐವರು ಮೇಲೆ ಎಫ್‌ಐಆರ್

ರೋಣ ಡಿಪೋ ಮ್ಯಾನೇಜರ್ ಈ ದಿನ ಡಾಟ್ ಕಾಮ್‌ ಜೊತೆಗೆ ಮಾತನಾಡಿ, “ಸಿಬ್ಬಂದಿಗಳ ಕೊರತೆ ಇದೆ. ಹಾಗಾಗಿ ಈ ರೀತಿಯಾಗಿದೆ. ಬೇರೆ ವ್ಯವಸ್ಥೆ ಮಾಡಿ ಸರಿಯಾಗಿ ನಿರ್ವಹಣೆ ಮಾಡಲಾಗುವುದು. ಇನ್ನೆರಡು ದಿನಗಳಲ್ಲಿ ಎಲ್ಲವನ್ನು ಸ್ವಚ್ಛತೆ ಮಾಡಿ, ಪ್ರಯಾಣಿಕರಿಗೆ ಅನುಕೂಲ ಆಗುವ ರೀತಿಯಲ್ಲಿ ಮಾಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

WhatsApp Image 2024 12 10 at 3.00.26 PM
WhatsApp Image 2024 12 10 at 3.00.25 PM
SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...