ಗದಗ | ಜಲಜೀವನ್ ಮಿಷನ್‌ ಕುಡಿಯುವ ನೀರಿನ ಕಾಮಗಾರಿ ಕಳಪೆ; ಆರೋಪ

Date:

ಕೇಂದ್ರ ಸರ್ಕಾರದ ಮಹತ್ತರ ಅಮೃತ-2 ಯೋಜನೆಯಡಿ ಕೈಗೆತ್ತಿಕೊಂಡಿರುವ ಜಲಜೀವನ್ ಮಿಷನ್‌(ಜೆಜೆಎಂ) ಕುಡಿಯುವ ನೀರಿನ ಕಾಮಗಾರಿಯು ಎಂಜಿನಿಯರ್, ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ ಕಳಪೆಯಾಗಿದೆ ಎಂದು ಗದಗ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಸಂತೋಷ ಕುರಿ ಆರೋಪಿಸಿದರು.

- Advertisement -

ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಕಾಮಗಾರಿ ಕುರಿತು ಮಾತನಾಡಿದ ಅವರು, “ಕುಡಿಯುವ ನೀರಿನ ಬವಣೆ ನೀಗಿಸಲು‌ ದಿನದ 24 ಗಂಟೆಯೂ(24×7) ನೀರನ್ನು ಒದಗಿಸುವ ಸದುದ್ದೇಶದಿಂದ ಪ್ರಾರಂಭವಾದ ಪ್ರಸ್ತುತ ಯೋಜನೆಯ ಕಾಮಗಾರಿ ಕಳಪೆಯಾಗಿದೆ. ಸ್ಥಳೀಯ ಪಟ್ಟಣ ಪಂಚಾಯಿತಿಯಿಂದ ನೀಡಿದ ನಿವೇಶನದಲ್ಲಿ 5 ಲಕ್ಷ ಲೀಟರ್ ನೀರಿನ ಸಾಮರ್ಥ್ಯ ಹೊಂದಿದ ನೀರಿನ ಟ್ಯಾಂಕ್ ಇದಾಗಿದೆ. ಕಾಮಗಾರಿಯಲ್ಲಿ ಕಡಿಮೆ ದಪ್ಪ ಹೊಂದಿದ ಸ್ಟೀಲ್ ಉಪಯೋಗಿಸುತ್ತಿರುವುದು ಅಚ್ಚರಿಯ ಸಂಗತಿ. ಕಾಂಕ್ರೀಟ್‌ನಲ್ಲಿ ತಮಗೆ ತಿಳಿದ ಕಡಿಮೆ ಗ್ರೇಡ್‌ನ ಸಿಮೆಂಟ್ ಬಳಸುತ್ತಿದ್ದು, ಕಾಂಕ್ರೀಟ್ ಹಾಕುವ ಸಮಯದಲ್ಲಿ ಸ್ಟೀಲ್ ಕಂಬಿಗಳನ್ನು ನೆಟ್ಟು ಅದಕ್ಕೆ ಜಾಲಿ(ತಂತಿ) ಕಟ್ಟುತ್ತಿದ್ದಾರೆ. ಅಲ್ಲದೇ ಕಾಂಕ್ರೀಟ್‌ನಲ್ಲಿ ಹೆಚ್ಚಿನ ಮರಳು ಹಾಗೂ ಜೆಲ್ಲಿಗಳನ್ನು ಹಾಕಿ ಮುಚ್ಚುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಸಂಬಂಧಪಟ್ಟ ಅಧಿಕಾರಿಗಳಾಗಲಿ, ಎಂಜಿನಿಯರ್ ಹಾಗೂ ಗುತ್ತಿಗೆದಾರರಾಗಲೀ ಈವರೆಗೂ ಕಾಮಗಾರಿಯನ್ನು ವೀಕ್ಷಣೆ ಮಾಡಿಲ್ಲ. ಪಟ್ಟಣಕ್ಕೆ ಬಂದರೂ ಕೇವಲ ಕಚೇರಿಯಲ್ಲಿ ತಮ್ಮ ಕೆಲಸ ಮುಗಿಸಿ ಹೋಗುತ್ತಿದ್ದಾರೆ. ಪಟ್ಟಣದ ತುಂಬೆಲ್ಲ ಪೈಪ್‌ಲೈನ್‌ ಮಾಡುತ್ತಿದ್ದಾರೆ. ಗುಣಮಟ್ಟದ ಟ್ಯಾಂಕ್‌ ನಿರ್ಮಿಸದಿದ್ದಲ್ಲಿ ಪಕ್ಕದಲ್ಲಿರುವ ಶಾಲೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಬಹುದು” ಎಂದು ಆತಂಕ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಬೇಡ್ಕರ್‌ಗೆ ಅವಮಾನಿಸಿದ ಅಮಿತ್ ಶಾ ಗಡಿಪಾರಿಗೆ ಚಲವಾದಿ ಮಹಾಸಭಾ ಮಹಿಳಾ ಘಟಕ ಆಗ್ರಹ

“ಟ್ಯಾಂಕ್ ನಿರ್ಮಾಣವಾಗುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಕಾಮಗಾರಿಯ ಗುಣಮಟ್ಟ ಪರೀಶೀಲಿಸಬೇಕು. ಇಲ್ಲದೇ ಹೋದಲ್ಲಿ ಸಂಪೂರ್ಣ ಕಾಮಗಾರಿಯನ್ನು ತಡೆಯಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಚಂದ್ರು ಜೋಗೆರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...