ಗದಗ | ಸ್ಕ್ಯಾನಿಂಗ್ ದರ ಹೆಚ್ಚಿಸಿ, ಮತ್ತೆ ವಿವಾದಕ್ಕೀಡಾದ ಜಿಮ್ಸ್: ಮುತ್ತು ಬಿಳಿಯಲಿ ಆಕ್ರೋಶ

Date:

ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಒಳ ಮತ್ತು ಹೊರ ರೋಗಿಗಳಿಗೆ ಉಚಿತವಾಗಿ ಸ್ಕ್ಯಾನಿಂಗ್ ಮಾಡಿಬೇಕಿತ್ತು. ಆದರೆ ಹೊರಗೆ ಫಲಕವನ್ನೂ ಹಾಕದೆ ರೋಗಿಗಳಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಸಾಮಾಜಿಕ‌ ಹೋರಾಟಗಾರ ಮುತ್ತು ಬಿಳೆಯಲಿ ಆರೋಪಿಸಿದರು.

- Advertisement -

ಈ ಕುರಿತು ಮಾತನಾಡಿದ ಅವರು, “ಕಳೆದ ಸೆಪ್ಟೆಂಬರ್‌ನಲ್ಲಿ ಎಲ್ಲ ತರಹದ ಚಿಕಿತ್ಸಾ ದರಗಳನ್ನು ಹೆಚ್ಚಿಸಿ ವಿವಾದಕ್ಕೆ ಈಡಾಗಿದ್ದ ಜಿಮ್ಸ್ ದಲಿತ ಸಂಘಟನೆಗಳ ಪ್ರತಿಭಟನೆಗೆ ಮಣಿದು ಆದೇಶವನ್ನು ರದ್ದುಮಾಡಿತ್ತು. ಈಗ ಮತ್ತೆ ಸರ್ಕಾರಿ ಆದೇಶವೆಂದು ಹೇಳುತ್ತ ಸ್ಕ್ಯಾನಿಂಗ್ ದರವನ್ನು ಏಕಾಏಕಿ ಹೆಚ್ಚಿಸಿದೆ. ಜಿಮ್ಸ್ ಈ ಹಿಂದೆ ಚಿಕಿತ್ಸೆಗಾಗಿ ಬರುವ ಹೊರರೋಗಿಗಳಿಗೆ ಹಾಗೂ ಒಳರೋಗಿಗಳಿಗೆ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಉಚಿತವಾಗಿ ಗದಗ ಕೆ ವಿ ಹಂಚಿನಾಳ ಡಯಗ್ನೋಸ್ಟಿಕ್ ಸೆಂಟರ್‌ನಿಂದ ಉಚಿತವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದರು. ಆದರೆ ಈಗ ವೈದ್ಯರು ಸೂಚಿಸಿದ ಸ್ಕ್ಯಾನಿಂಗ್ ಚೀಟಿಯನ್ನು ತೆಗೆದುಕೊಂಡು ರಿಯಾಯಿತಿಗಾಗಿ ಸ್ಕ್ಯಾನಿಂಗ್‌ಗೆ ಸಂಬಂಧಿಸಿದ ಎಬಿಆರ್‌ಕೆ ಕಚೇರಿಗೆ ಹೋಗಿ ಅಲ್ಲಿ ಅನುಮೋದನೆ ತೆಗೆದುಕೊಂಡು ಬಂದಾಗ ಮಾತ್ರ ಉಚಿತ ಸ್ಕ್ಯಾನಿಂಗ್ ಮಾಡುತ್ತಾರಂತೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಆಗಮಿಸುವ ರೋಗಿಗಳು ಸ್ಕ್ಯಾನಿಂಗ್ ಸಂದರ್ಭದಲ್ಲಿ ನಾಲ್ಕು ಗಂಟೆಗಳ ಕಾಲ ಕಾಯಬೇಕು. ರೋಗಿಗಳು ಈ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ. ರೋಗಿಗಳು ಎಬಿಆರ್‌ಕೆ ಅನುಮತಿಗಾಗಿ ಕಾಯುವುದು ಎಷ್ಟು ಸರಿ?. ಸಂಜೆಯ ನಂತರ ಹಾಗೂ ಸರ್ಕಾರಿ ರಜಾ ದಿನಗಳಲ್ಲಿ ಎಬಿಆರ್‌ಕೆಯ ವ್ಯವಸ್ಥೆಯು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವುದಿಲ್ಲ. ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಆಗಮಿಸುವ ಸುಮಾರು ದಿನನಿತ್ಯ 1,500 ಒಳ ಹಾಗೂ ಹೊರ ರೋಗಿಗಳ ಪೈಕಿ ಎರಡು ಅಥವಾ ಮೂರು ರೋಗಿಗಳಿಗೆ ಮಾತ್ರ ಸ್ಕ್ಯಾನಿಂಗ್ ಮಾಡುತ್ತಾರೆ” ಎಂದು ಹೇಳಿದರು.

“ಜಿಮ್ಸ್‌ನ ಹೊಸ ಕಟ್ಟಡದಲ್ಲಿ ಜಿಮ್ಸ್ ಆಡಳಿತದಲ್ಲಿರುವ ಸ್ಕ್ಯಾನಿಂಗ್ ಸೆಂಟರ್ ಇದೆ. ಅಲ್ಲಿಯೂ ಕೂಡ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತವಾಗಿ ಸ್ಕ್ಯಾನಿಂಗ್ ಮಾಡಬೇಕು. ಆದರೆ ಅಲ್ಲಿ ಇಂಥವರಿಗೆ ಉಚಿತವಾಗಿದೆಯೆಂದು ಯಾವುದೇ ಸೂಚನಾ ಫಲಕವಿಲ್ಲ. ಅಲ್ಲಿಯೂ ಜನರಿಂದ ಒಂದು ಸ್ಕ್ಯಾನಿಂಗ್‌ಗೆ ₹500 ಸುಲಿಗೆಮಾಡಿ ಜನರನ್ನು ವಂಚಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಕರ್ನಾಟಕ ಸರ್ಕಾರ ಉಚಿತ ಸ್ಕ್ಯಾನಿಂಗ್ ರದ್ದುಪಡಿಸಿ, ದರ ನಿಗದಿಯ ಆದೇಶ ಹೊರಡಿಸಿದ್ದಾರೆ. ಕೂಡಲೇ ಆ ಆದೇಶವನ್ನು ರದ್ದುಪಡಿಸಿ ಉಚಿತ ಚಿಕಿತ್ಸೆಯ ಆದೇಶವನ್ನು ಮಾಡಬೇಕು. ಜಿಮ್ಸ್ ಆಸ್ಪತ್ರೆಯಲ್ಲಿ ಯಾವುದೇ ಖಾಸಗಿ ವ್ಯಕ್ತಿಗಳಿಗೆ ಸ್ಕ್ಯಾನಿಂಗ್‌ನ ಪರವಾನಗಿ ನೀಡದೆ ಜಿಮ್ಸ್ ಆಡಳಿತಕ್ಕೆ ಅದರ ಜವಾಬ್ದಾರಿಯನ್ನು ನೀಡಬೇಕು. ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದಾರೆ. ಹಾಗಾಗಿ ಸರ್ಕಾರ ಬಡವರ ಹಿತಕಾಯಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

“ಜಿಮ್ಸ್ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿಯವರು ಆಸ್ಪತ್ರೆಯ ಒಳಗೆ ಉಚಿತ ಚಿಕಿತ್ಸೆಯ ಯಾವುದೇ ಮಾಹಿತಿಯ ಫಲಕವನ್ನು ಹಾಕದೆ ಜನರನ್ನು ವಂಚಿಸುತ್ತಿದ್ದಾರೆ. ಇವರು ಅಧಿಕಾರ ವಹಿಸಿಕೊಂಡ ದಿನದಿಂದ ಒಂದಿಲ್ಲೊಂದು ವಿವಾದಕ್ಕೆ ಕಾರಣರಾಗುತ್ತಿದ್ದಾರೆ. ಇವರ ಆಡಳಿತ ಒಂದು ರೀತಿಯ ಹಿಟ್ಲರ್ ಆಡಳಿತ ಇದ್ದಂತಿದೆ. ಕೂಡಲೇ ಇವರನ್ನು ಆ ಹುದ್ದೆಯಿಂದ ವಜಾಮಾಡಿ ಜನಪರವಾಗಿ ಕೆಲಸ ಮಾಡುವ ಒಬ್ಬ ಒಳ್ಳೆಯ ಅಧಿಕಾರಿಯನ್ನು ನೇಮಿಸಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...