ಗದಗ | ಮುಖ್ಯ ರಸ್ತೆ ದುರಸ್ಥಿ ಮಾಡುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

Date:

ಗದಗ ಮುಖ್ಯ ರಸ್ತೆ ರೈಲ್ವೆ ಇಲಾಖೆಗೆ ಸಂಬಂಧಪಟ್ಟಿದ್ದು ಈ ರಸ್ತೆಯ ದುರಸ್ತಿ ಕಾಮಗಾರಿ ಮಾಡದೆ ಇರುವ ಕಾರಣ ರಸ್ತೆ ತುಂಬಾ ಹದಗೆಟ್ಟು ಹೋಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು.

ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.

ರೈಲ್ವೆ ಸೇತುವೆ ಕೆಳಗಡೆ ಇರುವ ಹೊಳೆ ಆಲೂರಿನಿಂದ ರೋಣಕ್ಕೆ ಹೋಗುವ ಮುಖ್ಯ ರಸ್ತೆ ದುರಸ್ಥಿ ಮಾಡಬೇಕು. ರಸ್ತೆಯ ಮಧ್ಯಭಾಗಕ್ಕೆ ಹಾಕಿರುವ ಕಬ್ಬಿಣದ ರಾಡುಗಳು ವಾಹನಗಳ ಗಾಲಿಗೆ ಸಿಕ್ಕು ವಾಹನ ಸವಾರರ ಜೀವ ಹೋಗುವ ಪರಿಸ್ಥಿತಿ ಉಂಟಾಗಿದೆ. ಈಗ ಮಳೆಗಾಲ ಪ್ರಾರಂಭವಾದ ಕಾರಣ ಮಳೆಯ ನೀರು ಸೇತುವೆ ಕೆಳಗಡೆ ಬಂದು ನಿಂತು ಮುಖ್ಯರಸ್ತೆ ಸಂಪೂರ್ಣ ಜಲಾವೃತ ಆಗಿಬಿಡುತ್ತದೆ ಮತ್ತು ಮಳೆಯ ನೀರು ಹರಿದು ಹೋಗುವುದಿಲ್ಲ. ನೀರು ಹರಿದು ಹೋಗುವ ಮಾರ್ಗ ಸರಿಯಾಗಿಲ್ಲ ಇದರಿಂದ ವಾಹನ ಸವಾರರು, ಪಾದಾಚಾರಿಗಳು ಹಾಗೂ ಸಾರ್ವಜನಿಕರು ಚಿಕ್ಕ-ಚಿಕ್ಕ ಮಕ್ಕಳನ್ನು ಕರೆದುಕೊಂಡು ಹೋಗಲು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇಷ್ಟೆಲ್ಲಾ ತೊಂದರೆ ಆದರೂ ಕೂಡ ಇದನ್ನೆಲ್ಲಾ ನೋಡಿ ಸಾರ್ವಜನಿಕರು ನಮ್ಮ ಜಯ ಕರ್ನಾಟಕ ಸಂಘಟನೆ ಮುಂದೆ ತಮ್ಮ ತೊಂದರೆ ಹೇಳಿದ ಕಾರಣ ನಾವು ನಿಮಗೆ ಎಂಟು ದಿನಗಳ ಕಾಲಾವಕಾಶದಲ್ಲಿ ಈ ರಸ್ತೆ ಮತ್ತು ನೀರು ಹರಿದು ಹೋಗುವುದಕ್ಕೆ ಸರಿಯಾದ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಡಬೇಕೆಂದು ತಮ್ಮಲ್ಲಿ ಸಾಂಕೇತಿಕ ಮನವಿ ನೀಡುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೆಂಕಿ ಅವಘಡ ; ಹೊತ್ತಿ ಉರಿದ ಜೆಸ್ಕಾಂ ಕಚೇರಿ

“ನಾವು ಕೊಟ್ಟ ಗಡುವ ಮುಗಿದ ನಂತರ ತಾವೇನಾದರೂ ಕಾಮಗಾರಿ ಮಾಡದೆ ಹೋದಲ್ಲಿ ಹೊಳೆ ಆಲೂರು ರೈಲ್ವೆ ಸ್ಟೇಷನ್‌ಗೆ ಬರುವ ಎಲ್ಲ ರೈಲುಗಳನ್ನು ತಡೆಯುತ್ತೇವೆ. ಈ ಕೆಲಸ ನಡೆಯುವ ಮುನ್ನವೇ ತಾವು ಎಚ್ಚೆತ್ತುಕೊಂಡು ಈ ಎಲ್ಲ ಕೆಲಸ ಮಾಡಿಕೊಟ್ಟು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು” ಎಂದು ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...

ಜುಲೈ12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ

ರಾಜ್ಯದಲ್ಲಿ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ12ರಂದು ಉಪ ಚುನಾವಣೆ ನಡೆಯಲಿದೆ.ಕೇಂದ್ರ...