ಗದಗ | ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ ‘ಕಲಿಕಾ ಹಬ್ಬ’ ಆಶಾದೀಪವಾಗಿದೆ: ಶಿಕ್ಷಣಾಧಿಕಾರಿ

Date:

“ಕಲಿಕಾ ಹಬ್ಬವು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ ಆಶಾದೀಪವಾಗಿದೆ. ಮಕ್ಕಳ ಕಲಿಕಾ ಪ್ರತಿಭೆಯನ್ನು ಹೊರತರುವ ಹಲವಾರು ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡಿರುವ ಈ ಹಬ್ಬ, ಮಕ್ಕಳಲ್ಲಿ ಕಲಿಕೆಯ ಪ್ರೇರಣೆ ಮತ್ತು ಬಲವರ್ಧನೆಗೆ ಉತ್ತಮ ವೇದಿಕೆಯಾಗುತ್ತದೆ”  ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ನಾಣಕೀ ನಾಯ್ಕ ಹೇಳಿದರು.

- Advertisement -

 ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಗುಡ್ಡದಪುರದ ಸರಕಾರಿ ಕಿರಿಯ ಪ್ರಾಥಮಿಕ ಶಲೆಯಲ್ಲಿ ‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪ್ರೇರಣೆ, ಸಂತಸದಾಯಕ ಕಲಿಕೆ ಮತ್ತು ಪ್ರತಿಭಾ ಅನ್ವೇಷಣೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಛಬ್ಬಿ ಕ್ಲಸ್ಟರ್ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಜಿಲ್ಲಾ ಉಪ ನಿರ್ದೇಶಕರಾದ (ಅಭಿವೃದ್ಧಿ) ಜಿ.ಎಂ. ಮುಂದಿನಮನಿ ಅವರು ಮಾತನಾಡಿ, “ಕಲಿಕಾ ಹಬ್ಬವು ಮಕ್ಕಳಲ್ಲಿ ಸಂತಸದಾಯಕ ಕಲಿಕೆಯನ್ನು ಉತ್ತೇಜಿಸುವ ಜೊತೆಗೆ ಅವರಲ್ಲಿರುವ ಅಡಗಿದ ಪ್ರತಿಭೆಯನ್ನು ಅನಾವರಣಗೊಳಿಸುತ್ತದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಸರ್ಕಾರ ‘ಎಫ್‌ಎಲ್‌ಎನ್ ಕಲಿಕಾ ಹಬ್ಬ’ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ” ಎಂದು ಹೇಳಿದರು.

ಡಯಟ್ ಉಪನ್ಯಾಸಕರಾದ ಎಚ್.ಬಿ. ರಡ್ಡೇರ ಅವರು ಮಾತನಾಡಿ, “ಪ್ರತಿಯೊಂದು ಮಗುವಿನಲ್ಲಿಯೂ ಕಲಿಕೆಯಲ್ಲಿ ವೈಯಕ್ತಿಕ ಭಿನ್ನತೆಗಳಿರುತ್ತವೆ. ಹಿಂದುಳಿದ ಮಕ್ಕಳಿಗೆ ಸಂತಸದಾಯಕ ಹಾಗೂ ಸೃಜನಾತ್ಮಕ ಚಟುವಟಿಕೆಗಳ ಮೂಲಕ ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ಪರಿಕಲ್ಪನೆ ಈ ಕಾರ್ಯಕ್ರಮದ ಮುಖ್ಯ ಆಶಯವಾಗಿದೆ” ಎಂದು ತಿಳಿಸಿದರು.

ಕಲಿಕಾ ಹಬ್ಬದಲ್ಲಿ ವಿವಿಧ ಶೈಕ್ಷಣಿಕ ಸ್ಪರ್ಧೆಗಳು, ಸೃಜನಾತ್ಮಕ ಚಟುವಟಿಕೆಗಳು ಮತ್ತು ಕಲಿಕಾ ಪ್ರದರ್ಶನಗಳು ನಡೆಯಿತು. ಹಬ್ಬದ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ಪ್ರವಾಹಕ್ಕೆ ತರುವ ಪ್ರಯತ್ನ ಗಮನಾರ್ಹವಾಗಿತ್ತು.

ಕಾರ್ಯಕ್ರಮದಲ್ಲಿ ಸಿಆರ್‌ಪಿ ಗೀತಾ ಸರವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪ ನಿರ್ದೇಶಕರಾದ (ಅಭಿವೃದ್ಧಿ) ಜಿ.ಎಂ. ಮುಂದಿನಮನಿ, ಬಿಇಒ ಎಚ್. ನಾಣಕೀ ನಾಯ್ಕ, ಡಯಟ್ ಉಪನ್ಯಾಸಕರಾದ ಎಚ್.ಬಿ. ರಡ್ಡೇರ, ಕ್ಷೇತ್ರ ಸಮನ್ವಯಾಧಿಕಾರಿ ಬಿ.ಎಸ್. ಭಜಂತ್ರಿ, ಇಸಿಓ ಆರ್.ಬಿ. ಪವಾರ, ಎಸ್‌ಡಿಎಂಸಿ ಅಧ್ಯಕ್ಷರಾದ ಕೃಷ್ಣಪ್ಪ ಲಮಾಣಿ, ಸದಸ್ಯರಾದ ರೂಪಾ ಲಮಾಣಿ, ಶೇಖಪ್ಪ ಲಮಾಣಿ, ಶಿಕ್ಷಣ ಪ್ರೇಮಿಗಳಾದ ದೀಪಕ್ ಲಮಾಣಿ, ಲಕ್ಷ್ಮಣ ಲಮಾಣಿ, ತಿಪ್ಪಣ್ಣ ಲಮಾಣಿ, ಸಂಘದ ನಿರ್ದೇಶಕ ಮೋಹನ ಮಾಂಡ್ರೆ, ಬಿಆರ್‌ಪಿ ಬಿ.ಎಂ. ಯರಗುಪ್ಪಿ, ಛಬ್ಬಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಗೀತಾ ಸರವಿ, ಸಿಆರ್‌ಪಿ ಮಿತ್ರರಾದ ಆರ್. ಮಹಾಂತೇಶ, ಮುತ್ತು ಸಾವಿರಕುರಿ, ಉಮೇಶ್ ನೇಕಾರ, ಗಿರೀಶ್ ನೇಕಾರ, ಎನ್.ಎ. ಮುಲ್ಲಾ, ಕೆ.ಪಿ. ಕಂಬಳಿ, ಉಪ ಪ್ರಾಚಾರ್ಯ ಅರವಟಗಿ ಸೇರಿದಂತೆ ಛಬ್ಬಿ ಕ್ಲಸ್ಟರ್‌ನ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...