ಗದಗ |  ಕಮಲ್ ಹಾಸನ್ ಹೇಳಿಕೆ ಕನ್ನಡಿಗರಿಗೆ ನೋವು: ಕ್ಷಮೆ ಕೇಳಲು ಕರವೇ ಒತ್ತಾಯ

Date:

“ಕಮಲ್‌ ಹಾಸನ್ ಅವರು ಕನ್ನಡಿಗರ ಋಣದಲ್ಲಿ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿ ಅವರ ಅಭಿಮಾನಿಗಳ ಸಂಖ್ಯೆ ಕೂಡ ಹೆಚ್ಚಾಗಿತ್ತು. ಅವರ ಈ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದ್ದು, ಕೂಡಲೇ ಅವರು ಕ್ಷಮೆ ಕೇಳಬೇಕು” ಎಂದು ಕರವೇ ಜಿಲ್ಲಾಧ್ಯಕ್ಷ ಎಂ ಪಿ ಪಾರ್ವತಗೌಡ ಒತ್ತಾಯಿಸಿದರು.

- Advertisement -

ಗದಗ ಪಟ್ಟಣದಲ್ಲಿ ಪಾಳಾ-ಬಾದಾಮಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು  ಕನ್ನಡಕ್ಕೆ ಅವಮಾನಿಸಿದ ಬಹುಭಾಷಾ ನಟ ಕಮಲ್‌ ಹಾಸನ್ ಅವರ ಚಿತ್ರವನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದು ಎಂದು ಕರವೇ (ಶಿವರಾಮೇಗೌಡ್ರ ಬಣ) ವತಿಯಿಂದ ಪ್ರತಿಭಟಿಸಿ ತಹಸೀಲ್ದಾರರಿಗಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕರ್ನಾಟಕ ಹೈಕೋರ್ಟ್ ಕೂಡ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿತ್ತು. ಜೊತೆಗೆ ಕ್ಷಮೆ ಕೇಳುವಂತೆ ಸೂಚಿಸಿತ್ತು. ಹಠಮಾರಿ ಕಮಲ್ ಹಾಸನ್ ತನ್ನ ನೀಚ ಬುದ್ದಿ ಬಿಡುತ್ತಿಲ್ಲ. ತನ್ನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಕನ್ನಡಿಗರ ಕ್ಷಮೆ ಕೇಳದಿದ್ದರೇ ನಾವು ನಿನ್ನ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ” ಎಂದು ಕಮಲ್‌ ಹಾಸನ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

“ಕಮಲ್ ಹಾಸನ್ ಅವರು ಇತ್ತಿಚೆಗೆ ರಾಜಕೀಯ ಪಕ್ಷವೊಂದನ್ನು ಕಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕನ್ನಡಿಗರಿಗೆ ಅವಮಾನಿಸಿದರೇ ತನಗೆ ರಾಜಕೀಯ ಲಾಭ ಆಗುತ್ತದೆ ಎನ್ನುವ ದುರುದ್ದೇಶ ಇಟ್ಟುಕೊಂಡು ಅವಮಾನಿಸಿದ್ದಾರೆ. ನಿಮ್ಮ ಈ ನೀತಿಯನ್ನು ತಮಿಳರು ಕ್ಷಮಿಸುವುದಿಲ್ಲ. ರಾಜ್ಯ-ರಾಜ್ಯಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿದರೆ ಜನ ಸಹಿಸುವುದಿಲ್ಲ. ರಾಜಕೀಯದಲ್ಲಿ ಈಗಾಗಲೇ ನೀವು ನಿಮ್ಮ ಅಸ್ತಿತ್ವ ಕಳೆದುಕೊಂಡಿದ್ದಿರಿ. ಇಂತಹ ಹೇಳಿಕೆಗಳಿಂದ ಪುಟಿದೆಳುತ್ತೇನೆ ಎನ್ನುವ ನಿಮ್ಮ ತಪ್ಪು ಕಲ್ಪನೆಯಿಂದ ದೂರವಿರಿ. ನಿಮ್ಮ ರಾಜಕಾರಣ ನಿಮ್ಮ ರಾಜ್ಯದಲ್ಲಿರಲಿ. ಆದರೆ, ಕನ್ನಡಿಗರನ್ನು ಅವಮಾನಿಸುವ ಹೇಳಿಕೆಯನ್ನು ಯಾರೂ ಸಹಿಸುವುದಿಲ್ಲ. ಇನ್ನೂ ಕಾಲ ಮಿಂಚಿಲ್ಲ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದಿದ್ದರೇ ನಮ್ಮ ಹೋರಾಟ ನಿರಂತರವಾಗಿರುತ್ತೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕರ್ತವ್ಯ ಲೋಪ ಎಸಗಿದ್ದಕ್ಕೆ ಪಿಡಿಒ ಅಮಾನತು

ಈ ಪ್ರತಿಭಟನೆ ಕರವೇ ಉತ್ತರ ಕರ್ನಾಟಕ ರೈತ ಘಟಕದ ಅಧ್ಯಕ್ಷ ಬಸಯ್ಯ ಗುಡ್ಡಿಮಠ, ಜಿಲ್ಲಾ ಗೌರವಾದ್ಯಕ್ಷ ಸುನೀಲ ಭಾರಕೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಮುಳ್ಳಾಳ, ಜಿಲ್ಲಾ ಹಮುಖಂಡರು ಬಶೀರ ಮುಳಗುಂದ, ಶಂಕ್ರಪ್ಪ ಬಿಂಗಿ, ಗದಗ ತಾಲೂಕಾಧ್ಯಕ್ಷ ಸಂತೋಷ ಕುಂಬಾರ, ಪ್ರಸಾದ ಪಾಟೀಲ, ಶರಣಪ್ಪ ಅಡ್ನುರ, ಮುತ್ತು ಬಿಳಿಯಲಿ, ಶರಣಪ್ಪ ಮಣ್ಣೂರ, ಮಂಜುನಾಥ ಕುರ್ತಕೋಟಿ, ಮೈಲಾರಿ ತಡಹಾಳ, ಕೊಟ್ರೇಶ ತಡಹಾಳ, ವಿರೇಶ ಬೊಮ್ಮಸಾಗರ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...