ಕಳೆದ 5 ತಿಂಗಳಿನಿಂದ ಬೆಳ್ಳಟ್ಟಿ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಒಳಚರಂಡಿ ಸಮಸ್ಯೆ ಇದ್ದು ಅನೇಕ ಬಾರಿ ಶಿರಹಟ್ಟಿ ಸಾರಿಗೆ ಇಲಾಖೆಯವರು ಯಾವುದೆ ಕ್ರಮ ಕೈಗೊಂಡಿರುವದಿಲ್ಲ ಎಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರವೇ ಜಿಲ್ಲಾಧ್ಯಕ್ಷ ಚಂದ್ರು ಪೂಜಾರ್ ಮಾತನಾಡಿ, “ಸಾರ್ವಜನಿಕರು, ವಿದ್ಯಾರ್ಥಿಗಳು, ಅಕ್ಕ-ಪಕ್ಕದ ಹಳ್ಳಿಯವರು ಬೆಳ್ಳಟ್ಟಿ ಬಸ್ ನಿಲ್ದಾಣಕ್ಕೆ ಬಂದರೆ, ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಯಾಕೆಂದರೆ ಸಾರ್ವಜನಿಕರು ಬಸ್ ಸ್ಟ್ಯಾಂಡ್ ಶೌಚಾಲಯ ಉಪಯೋಗಿಸಿದರೆ, ಅದು ರಸ್ತೆ ಮೆಲೆ ಹರಿಯುವ ಪರಿಣಾಮ ಬೀದಿ ವ್ಯಾಪಾರಿಗಳಿಗೆ ತುಂಬಾ ತೊಂದರೆ ಆಗುತ್ತಿದೆ. ಈ ಸಮಸ್ಯೆಯನ್ನು ಶಾಶ್ವತ ಪರಿಹಾರ ಮಾಡಬೇಕು” ಎಂದು ಆಗ್ರಹಿಸಿದರು.
ಬಸ್ ನಿಲ್ದಾಣದ ಸ್ವಚ್ಛತೆ, ಟಾಯ್ಲೆಟ್ ಹಾಗು ಒಳಚರಂಡಿ ನೀರು ರಸ್ತೆ ಮೇಲೆ ಹರಿಯದಂತೆ ರಿಪೇರಿ ಮಾಡಬೇಕು. ಇಲ್ಲವಾದಲ್ಲಿ ಬೆಳ್ಳಟ್ಟಿ ಗ್ರಾಮಸ್ಥರು ಕರ್ನಾಟಕ ರಕ್ಷಣಾ ವೇದಿಕೆ ಹಾಗು ಸುತ್ತ ಮುತ್ತಲಿನ ಗ್ರಾಮಸ್ಥರು ವಿದ್ಯಾರ್ಥಿಗಳ ಜೊತೆಗೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನು ಓದಿದ್ದೀರಾ? ಹಾವೇರಿ | ಸಾಹಿತ್ಯವು ಸಮಾಜಮುಖಿ ಚಿಂತನೆಗಳನ್ನು ಪ್ರತಿಪಾದಿಸಬೇಕು: ಡಾ.ಎಂ.ಈ.ಶಿವಕುಮಾರ
ಪ್ರತಿಭಟನೆಯಲ್ಲಿ ಕರವೇ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು.