ಗದಗ | 15 ಗ್ರಾಮಗಳಲ್ಲಿ ಚಿರತೆ ಆತಂಕ; ಎಚ್ಚರಿಕೆಯಿಂದ ಓಡಾಡಲು ಅಧಿಕಾರಿಗಳಿಂದ ಸೂಚನೆ

Date:

ಗದಗ ಜಿಲ್ಲೆಯ ಗಜೇಂದ್ರಗಡದ ಸುತ್ತಮುತ್ತ ಚಿರತೆ ಪದೇ ಪದೆ ಕಾಣಿಸಿಕೊಳ್ಳುತ್ತಿದ್ದು, 15 ಗ್ರಾಮಗಳ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದ್ದು, ಆಗಾಗ ಹಳ್ಳಿಗಳಿಗೆ ಬರುವ ಚಿರತೆ ನಾಯಿ, ಕುರಿ, ಕೋಳಿಗಳ ಮೇಲೆ ದಾಳಿ ಮಾಡುತ್ತಿದೆ. ಗ್ರಾಮಸ್ಥರು ಒಬ್ಬೊಬ್ಬರಾಗಿ ಓಡಾಡದೇ ಗುಂಪು ಗುಂಪಾಗಿ ಓಡಾಡುವಂತೆ ಅರಣ್ಯಾಧಿಕಾರಿಗಳು ಸೂಚಿಸಿದ್ದಾರೆ.

- Advertisement -

ರಾತ್ರಿ ಬೆಳೆಗಳಿಗೆ ನೀರುಣಿಸಲು ಹೋಗುವ ರೈತರು ಭಯದಿಂದ ಹೊರಗೇ ಬರುತ್ತಿಲ್ಲ. ಗಜೇಂದ್ರಗಡದ ಗಿರಣಿ ಮತ್ತು ಅಂಗಡಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕತ್ತಲಾಗುವ ಮೊದಲೇ ಮನೆಗೆ ಮರಳುತ್ತಿದ್ದಾರೆ. ತಡವಾದರೆ ಹಳ್ಳಿಗಳಿಗೆ ಬಾರದೇ ಬಸ್ ನಿಲ್ದಾಣ ಅಥವಾ ಪಟ್ಟಣದಲ್ಲಿ ರಾತ್ರಿ ಕಳೆಯುತ್ತಿದ್ದಾರೆ. ಚಿರತೆ ಸರೆಗೆ ಅರಣ್ಯಾಧಿಕಾರಿಗಳು ಪ್ರಯತ್ನಿಸುತ್ತಿದ್ದು ಈವರೆಗೂ ಚಿರತೆ ಸಿಕ್ಕಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೋಕಾ ಕ್ರಾಸ್‌ನಲ್ಲಿ ಗ್ರಾಮಸ್ಥರಿಗೆ ಚಿರತೆ ಕಾಣಿಸಿಕೊಂಡಿದೆ. ಕುಂಟೋಜಿಯ ಮರದ ಮೇಲೆ ಚಿರತೆಯ ಹೆಜ್ಜೆ ಗುರುತು ಕಂಡುಬಂದಿವೆ. ಅದೇ ದಿನ ರಾತ್ರಿ ಅರಣ್ಯಾಧಿಕಾರಿಗಳು ಸ್ಥಳದಲ್ಲಿ ಬೋನನ್ನು ಹಾಕಿದ್ದರೂ ಚಿರತೆ ಅದರಲ್ಲಿ ಸಿಕ್ಕಿಬಿದ್ದು, ಕೂಡಲೇ ತಪ್ಪಿಸಿಕೊಂಡಿದೆ ಎನ್ನುತ್ತಾರೆ ಗ್ರಾಮದ ಜನ.

ಚಿರತೆ ಭಯದಿಂದ ಹೊಲಗಳಿಗೆ ನೀರುಣಿಸುವ ರೈತರು ರಾತ್ರಿ 10 ಗಂಟೆಗೆ ಮೋಟಾರ್ ಸ್ಟಾರ್ಟ್ ಮಾಡಿ ಮನೆಗೆ ಬರುತ್ತಿದ್ದಾರೆ. ರಾತ್ರಿ ವೇಳೆ ವಿದ್ಯುತ್‌ ಸರಬರಾಜು ನಿಂತರೆ, ನೀರು ಹರಿಯುವುದು ನಿಲ್ಲುತ್ತದೆ ಇದು ಬೆಳೆಗಳನ್ನು ಹಾಳುಮಾಡುತ್ತದೆ ಎನ್ನುವುದು ಇಲ್ಲಿನ ರೈತರ ಆತಂಕ.

ಒಟ್ಟಿನಲ್ಲಿ ಸುಮಾರುದಿನಗಳಿಂದ ಚಿರತೆಯ ಭಯದಲ್ಲಿ 15 ಗ್ರಾಮಗಳ ಜನ ಜೀವನ ನಡೆಸುತ್ತಿದ್ದು, ಆದಷ್ಟು ಬೇಗ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಗೆ ಒತ್ತಾಯಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...