ಗದಗ | ನಿರುದ್ಯೋಗಿ ಯುವಕರಿಗೆ ಸರಕಾರ ಉದ್ಯೋಗ ನೀಡಲಿ: ತೋಟದ

Date:

“ನಿರುದ್ಯೋಗಿ ಯುವಕರಿಗೆ ಸರಕಾರ ಉದ್ಯೋಗ ಕಲ್ಪಿಸಬೇಕು” ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ರಾಜ್ಯ ಸಮಿತಿ ಸದಸ್ಯ ಫಯಾಜ್ ತೋಟದ ಹೇಳಿದರು.

- Advertisement -

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಶಿವಾಜಿಪೇಟೆಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವಾಯ್ಎಫ್ಐ) ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ದೇಶದಲ್ಲಿ 18ರಿಂದ 35 ವರ್ಷದೊಳ ಗಿನ 40 ಕೋಟಿಯಷ್ಟು ಯುವಕ ರಿದ್ದಾರೆ. ನಿರುದ್ಯೋಗಿ ಯುವ­ಕರಿಗೆ ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿ. ರಾಜ್ಯದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಖಾಲಿ ಹುದ್ದೆಗಳಿವೆ. ಕಾಲಕಾಲಕ್ಕೆ ನೇಮಕಾತಿ ಮಾಡದೆ ಯುವ ಜನರ ಉದ್ಯೋಗ ಅವ­ಕಾಶಕ್ಕೆ ಕೊಡಲಿ ಪೆಟ್ಟು ಬಿದ್ದಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಡಿವಾಯ್ಎಫ್ಐ ಜಿಲ್ಲಾ ಮುಖಂಡ ದಾವಲಸಾಬ ತಾಳಿಕೋಟಿ ಮಾತನಾಡಿ, “ಡಿವಾಯ್ಎಫ್ಐ ಸಂಘಟನೆ ಕಳೆದ 45 ವರ್ಷಗಳಿಂದ ಯುವಜನತೆಯ ಹಕ್ಕುಗಳಿಗಾಗಿ, ಉದ್ಯೋಗ, ಆಹಾರ, ಮೂಲಭೂತ ಸಮಸ್ಯೆ, ಖಾಲಿಯಿರುವ ಹುದ್ದೆಗಳ ಭರ್ತಿ, ಹೊಸ ಹುದ್ದೆಗಳನ್ನು ಸೃಷ್ಟಿಸಿ ನಿರುದ್ಯೋಗ ಸಮಸ್ಯೆ ಪರಿಹರಿಸಲು  ಇಡೀ ದೇಶಾದ್ಯಂತ ಸರ್ಕಾರದ ವಿರುದ್ಧ ಯುವಜನತೆಯ ಪರವಾಗಿ ಹೋರಾಟ ನಡೆಸುತ್ತಲೆ ಬಂದಿದೆ. ಯುವಜನತೆ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ( DYFI )  ಸದಸ್ಯರಾಗುವ ಮೂಲಕ ಸದೃಢ ದೇಶ ನಿರ್ಮಾಣದ ಜೊತೆಗೆ ಕೈ ಜೊಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ನಾಳೆ (ಮಾ. 2) ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಜಿಲ್ಲೆಗೆ

ಈ ವೇಳೆ ಬಾಲು ರಾಠೋಡ, ಚಂದ್ರು ರಾಠೋಡ, ಮೆಹಬೂಬ್ ಹವಾಲ್ದಾರ್, ಪೀರು ರಾಠೋಡ, ಗಣೇಶ ರಾಠೋಡ, ಶಿವಾಜಿ ಗಡ್ಡದ, ನಜೀರ ಮಾಲ್ದಾರ, ಕನಕರಾಯ ಹಾದಿಮನಿ ಸೇರಿದಂತೆ ಡಿವಾಯ್ಎಫ್ಐ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...