ಗದಗ | ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ

Date:

Advertisements

“ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ. ಬುದ್ಧರ ವಿಚಾರ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ ಮಂತ್ರದ ಬೀಜ ಬಿತ್ತಬೇಕು ಎಂದು ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ ತಿಳಿಸಿದರು.

ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಜೀವನವು ದು:ಖಮಯವಾಗಿದೆ. ಆಸೆಯೇ ದು:ಖಕ್ಕೆ ಮೂಲ ಕಾರಣವಾಗಿದೆ. ಜೀವನದಲ್ಲಿ ದು:ಖ ನಿವಾರಣೆಗಾಗಿ ಅಷ್ಟಾಂಗ ಮಾರ್ಗಗಳನ್ನು ಭಗವಾನ್ ಬುದ್ಧರು ಸಮಾಜಕ್ಕೆ ತಿಳಿಸಿಕೊಟ್ಟಿದ್ದಾರೆ. ಆಧ್ಯಾತ್ಮಿಕ ಜೀವನ ನಡೆಸಲು ಹಾಗೂ ಶಾಂತಿಯುತ ಜೀವನ ನಿರ್ವಹಣೆಗಾಗಿ ಹಿಂಸೆ ಮಾಡದಂತೆ ಭಗವಾನ್ ಬುದ್ಧರು ಉಪದೇಶಿಸಿದ್ದಾರೆ. ಭಗವಾನ್ ಬುದ್ಧರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯತೆಯಿದೆ” ಎಂದು ತಿಳಿದಿದರು.

Advertisements

“ಸರ್ಕಾರದಿಂದ ಪ್ರಥಮ ಬಾರಿಗೆ ಭಗವಾನ ಬುದ್ಧರ ಜಯಂತಿ ಆಚರಿಸುವ ಮೂಲಕ ಬುದ್ಧರ ಆಚಾರ ವಿಚಾರ ಸಂದೇಶಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಕಾರ್ಯ ಮಾಡಲಾಗುತ್ತಿದೆ. ಇದು ನಿತ್ಯ ನಿತಂತರ ಸಾಗಲಿದೆ” ಎಂದು ಅನ್ನಪೂರ್ಣ ಎಂ ಅವರು ಹೇಳಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ವೆಂಕಟೇಶಯ್ಯ ಮಾತನಾಡಿ, “ಭಗವಾನ್ ಬುದ್ಧರ ಜಯಂತಿಯನ್ನು ಹಮ್ಮಿಕೊಂಡಿರುವುದು ಅಭಿನಂದನಾರ್ಹವಾಗಿದೆ. ವಿಶ್ವಕ್ಕೆ ಭಗವಾನ್ ಬುದ್ಧರು ಶಾಂತಿ ಮಂತ್ರ ಸಾರಿದ್ದಾರೆ. ಸಮಾಜದಲ್ಲಿನ ರೋಷ, ದ್ವೇಷ, ಅಸೂಯೆ ಸಮಾಜ ಘಾತುಕ ವಿಚಾರಗಳಿಂದ ಹೊರಬಂದು ಶಾಂತಿಯ ಬದುಕನ್ನು ನಡೆಸಬೇಕು. ಸುಳ್ಳು ಹೇಳಬಾರದು. ಕಳ್ಳತನ, ಅವಮಾನ ಮಾಡಬಾರದು. ಮತ್ತೊಬ್ಬರ ಆಸ್ತಿ ಅಪಹರಿಸುವುದು, ಮತ್ತೊಬ್ಬರ ಮನಸ್ಸಿಗೆ ನೋವು ಉಂಟುಮಾಡುವುದನ್ನು ತ್ಯಜಿಸಬೇಕಲ್ಲದೇ ಮತ್ತೇರಿಸುವ ವಸ್ತುಗಳನ್ನು ತ್ಯಜಿಸಿ ಗೌರವದಿಂದ ಮೌಲ್ಯಯುತ ಜೀವನ ಸಾಗಿಸಬೇಕೆಂದು ಭಗವಾನ್ ಬುದ್ಧರು ಸಮಾಜಕ್ಕೆ ಸಂದೇಶ ಸಾರಿದ್ದಾರೆ” ಎಂದರು.

“ಮನುಷ್ಯನು ಸಂಸ್ಕೃತಿ ಹೀನನಾಗಬಾರದು. ಪ್ರಜ್ಞಾವಂತನಾಗಿ ಬದುಕಬೇಕು. ಸಮಾಜಕ್ಕೆ ಮಾರಕವಾಗುವಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಬಾರದು. ತಮ್ಮ ತಮ್ಮ ಜವಾಬ್ದಾರಿ ಅರಿತುಕೊಂಡು ಜೀವನ ನಿರ್ವಹಣೆ ಮಾಡಬೇಕೆಂದು ಭಗವಾನ್ ಬುದ್ಧರು ಜಗತ್ತಿಗೆ ತಿಳಿಸಿಕೊಟ್ಟಿದ್ದಾರೆ. ಅಂತಹ ಸಂದೇಶಗಳನ್ನು ಪ್ರತಿಯೊಬ್ಬರೂ ಅನುಸರಿಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಜಗತ್ತಿಗೆ ಶಾಂತಿ, ಸಮಾನತೆ ಸಾರಿದ ಭಗವಾನ್ ಬುದ್ಧ : ಸಚಿವ ಈಶ್ವರ ಖಂಡ್ರೆ

ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಹೆಚ್ಚುವರಿ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ಸಮಾಜದ ಗಣ್ಯರು, ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಪಂಡಿತ ವೆಂಕಟೇಶ ಅಲ್ಕೋಡ್ ನಾಡಗೀತೆ ಪ್ರಸ್ತುತಪಡಿಸಿದರು. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X