ಗದಗ | ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ: ಡಾ.‌ ಯತೀಂದ್ರ ಸಿದ್ಧರಾಮಯ್ಯ

Date:

Advertisements

“ಗ್ರಾಮಾಭಿವೃದ್ಧಿಗೆ ಕೆಳ ಹಂತದ ವಾರ್ಷಿಕ ಯೋಜನೆಗಳು ಅತ್ಯಂತ ಸಹಕಾರಿಯಾಗಿವೆ. ವಿಕೇಂದ್ರೀಕರಣ ವ್ಯವಸ್ಥೆಯಿಂದ ಹಾಗೂ ಸರಿಯಾದ ಯೋಜನೆಗಳಿಂದ ಮಹತ್ತರ ಅಭಿವೃದ್ಧಿ ಸಾಧನೆ ಸಾಧ್ಯ” ಎಂದು ವಿಧಾನ ಪರಿಷತ್ ಶಾಸಕ ಡಾ.‌ ಯತೀಂದ್ರ ಸಿದ್ಧರಾಮಯ್ಯ ಅವರು ಅಭಿಪ್ರಾಯ ಪಟ್ಟರು.

ಗದಗ ಪಟ್ಟಣದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೊರಿಯಂ ಹಾಲ್ ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಕೆಳಹಂತದ ಯೋಜನೆಗಳೊಂದಿಗೆ ವಾರ್ಷಿಕ ಜಿಲ್ಲಾ ಅಭಿವೃದ್ಧಿ ಯೋಜನೆಯನ್ನು ತಯಾರಿಸುವ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

“ಮಾಜಿ ಶಾಸಕರು ಡಿ ಆರ್ ಪಾಟೀಲ ಅವರು ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಅಪಾರ ಅನುಭವ ಹಾಗೂ ಅಭಿವೃದ್ಧಿ ಮುಂದಾಲೋಚನೆ ಉಳ್ಳವರು. ನನ್ನ ತಂದೆಯವರಾದ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದಾರಾಮಯ್ಯ ಅವರು ಡಿ ಆರ್ ಪಾಟೀಲ ಅವರನ್ನು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರನ್ನಾಗಿ ಮಾಡಿದ್ದಾರೆ” ಎಂದರು.

“ಡಿ ಆರ್ ಪಾಟೀಲ ಅವರ ಅಪಾರ ಅನುಭವದಿಂದ ವಿಕೇಂದ್ರೀಕರಣ ವ್ಯವಸ್ಥೆ ಹಾಗೂ ಯೋಜನೆ ತಯಾರಿಕೆ ಕರಡು ಪ್ರತಿ ಇಗಾಗಲೇ ಗದಗ ಜಿಲ್ಲೆಯಲ್ಲಿ ಸಿದ್ದವಾಗಿದೆ. ಇದೇ ತರಹ ಮೈಸೂರಲ್ಲಿ ಸಹ ಅಭಿವೃದ್ಧಿ ಯೋಜನೆಯ ಕರಡು ತಯಾರಿಸಲಾಗುವುದು” ಎಂದು ಹೇಳಿದರು.

“ವಾರ್ಡ, ಗ್ರಾಮ ಮಟ್ಟದಲ್ಲಿ ಸಭೆ ನಡೆಸಿ ತಮ್ಮ ಗ್ರಾಮದಲ್ಲಿ ಅಗತ್ಯವಾದ ಅಭಿವೃದ್ಧಿ ಕೆಲಸಗಳ ಕುರಿತು ಯೋಜನಾ ವರದಿ ಕರಡು ಸಿದ್ದಪಡಿಸುವುದು. ತಾಪಂ, ಜಿಪಂ ಮೂಲಕ ಸರ್ಕಾರಕ್ಕೆ ಕಳುಹಿಸಿ, ಆಧ್ಯತೆ ಆಧಾರದಲ್ಲಿ ಗ್ರಾಮಗಳ ಯೋಜನೆಗಳ ಅನುಷ್ಠಾನಕ್ಕೆ ಇದು ಸಹಕಾರಿ ಆಗಲಿದೆ. ಇದೊಂದು ಉತ್ತಮ ಕಾರ್ಯವಾಗಿದೆ” ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಭಿಪ್ರಾಯ ಪಟ್ಟರು.

ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ ಆರ್ ಪಾಟೀಲ ಅವರು ಪ್ರಾಸ್ತಾವಿಕ ಮಾತನಾಡಿ, “ವಿಕೇಂದ್ರೀಕರಣ ವ್ಯವಸ್ಥೆ ಗ್ರಾಮ ಮಟ್ಟದಿಂದ ಬಲವರ್ದನೆಯಾಗಬೇಕು. ಆಗ ಮಾತ್ರ ಗ್ರಾಮಗಳು ಅಭಿವೃದ್ಧಿ ಯೋಂದಿಗೆ ಆರ್ಥಿಕ ಸದೃಡತೆ ಸಾಧಿಸಲಿವೆ. ರಾಜ್ಯದ ಎಲ್ಲ ಗ್ರಾಮಗಳಲ್ಲೂ ಸಹ ವಾರ್ಷಿಕ ಅಭಿವೃದ್ಧಿ ಯೋಜನೆಗಳ ಕರಡು ಪ್ರತಿ ತಯಾರಿಸಿ ಮುಂದಿನ ಹಂತಕ್ಕೆ ಕಳುಹಿಸಿಕೊಡಬೇಕು. ಅದನ್ನು ಸಹ ನಿಗದಿಪಡಿಸಿದ ಅವದಿಯೋಳಗೆ ಪುರ್ಣವಾಗಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಡಿಜಿಟಲ್ ವಂಚನೆ ಬಗ್ಗೆ ಜಾಗೃತಿ ಮೂಡಿಸಲು ಯುವಕರು ಮುಂದಾಗಬೇಕು: ಮುಹಮ್ಮದ್ ಇಸ್ಮಾಯಿಲ್

ಕಾರ್ಯಾಗಾರದಲ್ಲಿ ಹುಬ್ಬಳ್ಳಿಯ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಅಶೋಕ ಮಂದಾಲಿ, ಸುಜಾತ ದೊಡ್ಮನಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್, ಜಿ ಪಂ ಉಪ ಕಾರ್ಯದರ್ಶಿ ಸಿಆರ್ ಮುಂಡರಗಿ, ಎ ಎ ಕಂಬಾಳಿಮಠ, ಎಂ ವಿ ಚಳಗೇರಿ ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ ಗಳು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X