ಲಿಂ. ಡಾ. ಎಂ.ಎಂ. ಕಲಬುರ್ಗಿ ಅವರಿಗೆ ಮರಣೋತ್ತರವಾಗಿ 2025ನೇ ಸಾಲಿನ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗದಗ ಪಟ್ಟಣದ ಶಿವಾನುಭವ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಲಿಂಗೈಕ್ಯ ಡಾ. ತೋಂಟದ ಸಿದ್ದಲಿಂಗ ಸ್ವಾಮೀಜಿ ಅವರ 7ನೇ ಪುಣ್ಯಸ್ಮರಣೆ ಹಾಗೂ ಮರಣವೇ ಮಹಾನವಮಿ ಆಚರಣೆ ಕಾರ್ಯಕ್ರಮದಲ್ಲಿ ಉಮಾದೇವಿ ಎಂ. ಕಲಬುರ್ಗಿ ಅವರು 5 ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತೋಂಟದಾರ್ಯ ಶಾಖಾಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ, ಶಾಂತಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಧಾರವಾಡದ ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಇದ್ದರು.
ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ, ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಧನೇಶ ದೇಸಾಯಿ, ಲಿಂಗಾಯತರ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡರ, ಕೆ.ಎಸ್. ಚೆಟ್ಟಿ, ಶೇಖಣ್ಣ ಕವಳಿಕಾಯಿ ಇದ್ದರು. ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ನಿರ್ವಹಿಸಿದರು.