ಗದಗ | ಮನರೇಗಾ ಜಾಬ್ ಕಾರ್ಡ್‌ಗೆ ಇ-ಕೆವೈಸಿ ಮಾಡಲು ಶ್ರಮ ವಹಿಸಿ : ಚಂದ್ರಶೇಖರ್ ಕಂದಕೂರ

Date:

“ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ಗೆ ಇ-ಕೆವೈಸಿ ವ್ಯಾಲಿಡೇಶನ್‌ ಅನ್ನು ತುರ್ತಾಗಿ ಪೂರ್ಣಗೊಳಿಸಲು ರೋಣ ಮತ್ತು ಗಜೇಂದ್ರಗಡ ತಾಲೂಕ ಪಂಚಾಯಿತಿಗಳ ಸಿಬ್ಬಂದಿಗಳಿಗೆ ಸೂಚಿಸಿದರು.

- Advertisement -

ಈ ಕಾರ್ಯಕ್ಕೆ ಎಲ್ಲಾ ನರೇಗಾ ಕೂಲಿಕಾರರು ಸಕ್ರಿಯವಾಗಿ ಭಾಗವಹಿಸಿ, ಅಭಿಯಾನವನ್ನು ಯಶಸ್ವಿಗೊಳಿಸಬೇಕು” ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ. ಕಂದಕೂರ ಎಂದು ಅವರು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಗದಗ ಜಿಲ್ಲೆಯ ರೋಣ ತಾಲೂಕ ಪಂಚಾಯತ ಸಭಾಂಗಣದಲ್ಲಿ ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ಮನರೇಗಾ ಸಿಬ್ಬಂದಿಗಳಾದ ಜಿಕೆಎಂ, ಬಿಎಫ್‌ಟಿ, ಇಂಜಿನಿಯರ್‌ಗಳು ಮತ್ತು ಇತರ ಸಿಬ್ಬಂದಿಗಳ ಸಭೆಯನ್ನುದ್ದೇಶಿಸಿ ಮಾತನಾಡಿರು.

 “ಮನರೇಗಾ ಯೋಜನೆಯ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳನ್ನು ಇ-ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯವು ತುರ್ತಾಗಿ ನಡೆಯುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ ವ್ಯಾಲಿಡೇಶನ್‌ ಅನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು” ಎಂದು ಒತ್ತಿ ಹೇಳಿದರು.

“ಮನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರ ಮಾಹಿತಿಯನ್ನು ಎನ್‌ಎಂಎಂಎಸ್ (ನರೇಗಾ ಮೊಬೈಲ್ ಮಾನಿಟರಿಂಗ್ ಸಿಸ್ಟಮ್) ತಂತ್ರಾಂಶದಲ್ಲಿ ಇ-ಕೆವೈಸಿ ಮೂಲಕ ಅಪ್‌ಡೇಟ್ ಮಾಡಲಾಗುತ್ತಿದೆ. ಈಗಾಗಲೇ ಗ್ರಾಮ ಮಟ್ಟದಲ್ಲಿ ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗಿದ್ದು, ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ನರೇಗಾ ಶಾಖೆಯ ಐಇಸಿ ವಿಭಾಗವು ತಯಾರಿಸಿದ ಧ್ವನಿ ಮುದ್ರಿಕೆಯನ್ನು ಕಸ ಸಂಗ್ರಹ ವಾಹನಗಳ ಮೂಲಕ ಪ್ರಸಾರ ಮಾಡಲು ಸೂಚಿಸಲಾಗಿದೆ” ಎಂದರು.

“ಇನ್ನು ಗ್ರಾಮ ಪಂಚಾಯಿತಿ ಮಟ್ಟದ ಸಿಬ್ಬಂದಿಗಳಿಗೆ ಇ-ಕೆವೈಸಿ ಅಪ್‌ಡೇಟ್ ಕಾರ್ಯಕ್ಕೆ ತರಬೇತಿ ನೀಡಲಾಗಿದ್ದು, ಈ ಮೂಲಕ ಪ್ರಗತಿ ಸಾಧಿಸಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಗ್ರಾಮಗಳಲ್ಲಿ ಕೂಲಿಕಾರರು ವೈಯಕ್ತಿಕ ಕೆಲಸಕ್ಕಾಗಿ ಮನೆಯಿಂದ ಹೊರಗಡೆ ಇರುವುದರಿಂದ, ಮನೆ-ಮನೆ ಭೇಟಿಯ ಸಂದರ್ಭದಲ್ಲಿ ಮೇಟ್‌ಗಳು ಅಥವಾ ನರೇಗಾ ಸಿಬ್ಬಂದಿಗೆ ಅವರು ಲಭ್ಯವಾಗದಿರುವುದು ಇ-ಕೆವೈಸಿ ಪ್ರಕ್ರಿಯೆಯನ್ನು ನಿಧಾನಗೊಳಿಸಿದೆ. ಇದರಿಂದ ಭವಿಷ್ಯದಲ್ಲಿ ಕೂಲಿಕಾರರಿಗೆ ಕೆಲಸ ನೀಡುವಾಗ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ” ಎಂದು ಚಂದ್ರಶೇಖರ್ ಎಚ್ಚರಿಕೆ ನೀಡಿದರು.

“ಗ್ರಾಮ ಪಂಚಾಯಿತಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಮೇಟ್‌ಗಳ ಮೂಲಕವೂ ಈ ಸೌಲಭ್ಯವನ್ನು ಪಡೆಯಬಹುದು. “ಇ-ಕೆವೈಸಿ ಯೋಜನೆಯು ಮನರೇಗಾ ಕಾರ್ಯಕ್ರಮದ ಪಾರದರ್ಶಕ ಅನುಷ್ಠಾನಕ್ಕೆ ಮಹತ್ವದ ಹೆಜ್ಜೆಯಾಗಿದೆ. ಆದ್ದರಿಂದ, ಎಲ್ಲಾ ಕೂಲಿಕಾರರು ಮತ್ತು ಕಾಯಕ ಬಂಧುಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್‌ಡೇಟ್ ಮಾಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದರು.

“ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿಯ ಪಿಡಿಓ, ಕಾರ್ಯದರ್ಶಿ, ಡಿಇಒ, ಬಿಎಫ್‌ಟಿ, ಜಿಕೆಎಂ ಅವರನ್ನು ಸಂಪರ್ಕಿಸಲು ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು” ಸಭೆಯಲ್ಲಿ ಕರೆ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....