ಗದಗ | ಮನರೇಗಾ ಯೋಜನೆ ಗ್ರಾಮದ ಮನೆ ಮನೆಗೂ ತಲುಪಲಿ: ಗ್ರಾ.ಪಂ ಅಧ್ಯಕ್ಷ ಲಕ್ಷ್ಮಣ ಕಂಬಳಿ

Date:

  • ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ‘ರೋಜ್‌ಗಾರ್ ಜಾಗೃತಿ ವಾಹನ’
  • ಜಾಗೃತಿ ಸಂಚಾರ ವಾಹನಕ್ಕೆ ಗ್ರಾ.ಪಂ ಅಧ್ಯಕ್ಷ ಹಸಿರು ನಿಶಾನೆ

ಚಿಕ್ಕನರಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಮನೆಗೂ ಮನರೇಗಾ ಯೋಜನೆ ತಲುಪುವಂತಾಗಬೇಕು. ಯೋಜನೆಯ ಉದ್ದೇಶ ಸಾಕಾರವಾದಾಗ ಮಾತ್ರ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನ ಜಾರಿಗೆ ತಂದಿರುವುದಕ್ಕೆ ಸಾರ್ಥಕವಾಗುತ್ತದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಲಕ್ಷ್ಮಣ ಕಂಬಳಿ ಹೇಳಿದ್ದಾರೆ.

ಗದಗ ಜಿಲ್ಲೆ ನರಗುಂದ ತಾಲೂಕಿನಾದ್ಯಂತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ (ಮನರೇಗಾ) ಸಮರ್ಪಕ ಅನುಷ್ಠಾನಗೊಳಿಸುವ ಉದ್ದೇಶದಿಂದ ತಾಲೂಕಿನಾದ್ಯಂತ ಸಂಚರಿಸುತ್ತಿರುವ ‘ರೋಜಗಾರ ಜಾಗೃತಿ ವಾಹಿನಿ’ ರಥವು ಚಿಕ್ಕನರಗುಂದ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಆಗಮಿಸಿತ್ತು.

ಚಿಕ್ಕನರಗುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮಣ ಕಂಬಳಿ ವಾಹನಕ್ಕೆ ನಿಶಾನೆ ತೋರಿ ಮಾತನಾಡಿದರು. “ಮನರೇಗಾ ಯೋಜನೆ ಅಡಿಯಲ್ಲಿ ನಡೆಯುವ ಹಲವು ಕಾಮಗಾರಿಗಳು ಬಡ ಕೂಲಿಕಾರರಿಗೆ ವರದಾನವಾಗಿವೆ. ಬಡ ಕೂಲಿಕಾರರು ಈ ಯೋಜನೆಯ ಅಡಿಯಲ್ಲಿ ದೊರಕುವ ಹಲವು ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಗ್ರಾಮವನ್ನು ಅಭಿವೃದ್ಧಿಗೊಳಿಸಬೇಕು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಯಾದಗಿರಿ | ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುತ್ತು ರಾಯರೆಡ್ಡಿ ಮಾತನಾಡಿ, “ಮನರೇಗಾ ಯೋಜನೆಯು ಬಡ ಕೂಲಿಕಾರರನ್ನು ಆರ್ಥಿಕವಾಗಿ ಸದೃಢರನ್ನಾಗಿಸುವ ಯೋಜನೆಯಾಗಿದ್ದು, ಇದನ್ನು ಗ್ರಾಮದ ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಂಡು ಈ ಯೋಜನೆಯನ್ನು ಯಶಸ್ವಿಗೊಳಿಸಬೇಕು” ಎಂದು ಹೇಳಿದರು.

ಮನರೇಗಾ ಯೋಜನೆ ಅಡಿ ಪಿಂಕ್ ಶೌಚಾಲಯ, ಆಟದ ಮೈದಾನ, ರಸ್ತೆ, ಶಾಲಾ ಅಭಿವೃದ್ಧಿ ಸೇರಿದಂತೆ ಹಲವು ಅಭಿವೃದ್ಧ ಕಾರ್ಯ ನಡೆದಿದೆ. ವಾಹನ ಪ್ರಚಾರ ಕಾರ್ಯದಲ್ಲಿ ನಮ್ಮ ಗ್ರಾಮದ ನರೇಗಾ ಕಾಮಗಾರಿ ಅಡಿಯಲ್ಲಿ ಮಾಡಿದ ಬಾಸ್ಕೆಟ್‌ಬಾಲ್ ಮೈದಾನದ ಚಿತ್ರ ಬಳಸಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

‘ರೋಜ್‌ಗಾರ್ ಜಾಗೃತಿ ವಾಹನ’ಕ್ಕೆ ಚಾಲನೆ ನೀಡುವ ವೇಳೆ ಚಿಕ್ಕನರಗುಂದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕು. ಶೈನಜಾ ಮುಜಾವರ, ತಾಲೂಕ ಪಂಚಾಯತಿ ಮಾಹಿತಿ ಮತ್ತು ಶಿಕ್ಷಣ ಸಂಯೋಜಕ ಸುರೇಶ ಬಾಳಿಕಾಯಿ, ಬಿ.ಎಫ್.ಟಿ ರವಿಭರಮಣ್ಣ ಸೇರಿದಂತೆ ಚಿಕ್ಕನರಗುಂದ ಗ್ರಾಮ ಪಂಚಾಯತಿಯ ಹಲವಾರು ಸಿಬ್ಬಂದಿಗಳು ಹಾಗೂ ಗ್ರಾಮದ ಹಲವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...

ಚಿಕ್ಕಬಳ್ಳಾಪುರ | ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ರೈತ ಸಂಘ ತೀರ್ಮಾನಿಸಿದೆ: ವೀರಸಂಗಯ್ಯ

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ...