ಗದಗ | ಜೂನ್‌ ಅಂತ್ಯದವರೆಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಕೆಲಸ; ಪಿಡಿಒ ಈಶ್ವರಗೌಡ ಪಾಟೀಲ

Date:

Advertisements

ಈ ಬಾರಿ ಬರಗಾಲದ ಛಾಯೆ ಆವರಿಸಿದೆ, ಈ ಹಿನ್ನೆಲೆ ದುಡಿಯುವ ವರ್ಗಕ್ಕೆ ಮಳೆ ಇಲ್ಲದೆ, ಬೆಳೆ ಕೂಡ ಇಲ್ಲಾ, ಹೀಗಾಗಿ ಡ.ಸ ಹಡಗಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಜೂನ್ ಅಂತ್ಯದ ವರೆಗೂ ಕೆಲಸ ಕೊಡೋಣ ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಈಶ್ವರಗೌಡ ಪಾಟೀಲ ಹೇಳಿದರು.‌

ಗದಗ ಜಿಲ್ಲೆಯ ರೋಣ ತಾಲೂಕಿನ ಡ.ಸ ಹಡಗಲಿ ಗ್ರಾಮ ಪಂಚಾಯತಿಯಲ್ಲಿ ಕಾಯಕ ಬಂಧುಗಳ ಸಭೆಯಲ್ಲಿ ಮಾತನಾಡಿದ ಅವರು, ದುಡಿಯುವ ವರ್ಗಕ್ಕೆ ಕೆಲಸ ಕೊಡುವ ಮೂಲಕ ಅತಿ ಹೆಚ್ಚು ಮಾನವ ದಿನಗಳ ಸೃಜನೆ ಮಾಡುವ ಗುರಿಯನ್ನು ಹೊಂದೊಣ. ಈ ಹಿನ್ನಲೆ ತಾವೇಲ್ಲರೂ ಶ್ರಮ ವಹಿಸಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಎಂದು ಹೇಳಿದರು.

ಪ್ರತೀ ಸೋಮವಾರ ಕೆಲಸದ ಬೇಡಿಕೆ ಸಲ್ಲಿಸಿದ ಕೂಲಿಕಾರರ ವಿವರಗಳನ್ನು ಎಂಐಎಸ್‌ನಲ್ಲಿ ದಾಖಲಿಸುವುದು ಮತ್ತು ಎರಡು ದಿನಗಳೊಳಗೆ ಕೆಲಸವನ್ನು ಒದಗಿಸುವದು ನಮ್ಮ ಕೆಲಸ. ಕೆಲಸದ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ ಮಾಡುವದು ಸಿಬ್ಬಂದಿಗಳ ಕೆಲಸ ತಪ್ಪದೇ ಮಾಡಿ ಎಂದರು.

ಈ ಮೊದಲ ಮಕ್ಕಳಿಗೆ ಸರಿಯಾದ ಸೌಲಭ್ಯಗಳು ಇಲ್ಲದೇ ಇರುವ  ಕಾರಣ ಮಕ್ಕಳಿಗೆ ಸ್ವಲ್ಪ ತೊಂದರೆ ಆಗುತ್ತಿತ್ತು, ಈ ಬಾರಿ ಗ್ರಾಮದಲ್ಲಿ ಕೂಸಿನ ಮನೆಯನ್ನು ತೆರಯಲಾಗಿದ್ದು ಪಾಲಕರಿಗೆ ಮಕ್ಕಳನ್ನು ಅಲ್ಲಿ ಬಿಟ್ಟು ಹೊಗಲು ತಿಳಿಸುವ ಕೆಲಸ ಮಾಡಿ ಈ ಹಿನ್ನೆಲೆ ನಿಮ್ಮ ಸಹಕಾರ ಮುಖ್ಯ ಎಂದರು.

Advertisements
Bose Military School

ಎನ್ಎಂಎಂಎಸ್ ಆ್ಯಪ್ ಬಗ್ಗೆ ಮಾಹಿತಿ ನೀಡಿ ಕಾಯಕ ಬಂಧುಗಳು ಎನ್ಎಂಎಂಎಸ್ ಆ್ಯಪ್‌ನ ಮೂಲಕ ಹಾಜರಾತಿ ಹಾಕಿ, ಕೆಲಸದಲ್ಲಿ ಯಾವುದೇ ರೀತಿಯ ವಿಳಂಬವಾಗುದಂತೆ ನೋಡಿಕೊಳ್ಳಬೇಕು. ಪ್ರತಿ ಕೂಲಿಗಾರರಿಗೆ ನರೇಗಾ ಕೂಲಿ ಯೋಜನೆಯಡಿ 316 ರೂ. ಇದೆ ಹಾಗಾಗಿ ಜನರಿಗೆ ತಿಳಿವಳಿಕೆ ನೀಡುವುದು ಅವರನ್ನು ಹೆಚ್ಚು ಹೆಚ್ಚು ಕೆಲಸಕ್ಕೆ ಬರುವ ಹಾಗೆ ಮಾಡುವ ಜವಾಬ್ದಾರಿ ನಿಮ್ಮದಾಗಿರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಬಸವರಾಜ ತಳವಾರ, ಐಇಸಿ ಮಂಜುನಾಥ, ಬಿಎಫ್‌ಟಿ ಪ್ರಕಾಶ ಅಂಬಕ್ಕಿ ಹಾಗೂ ಡ.ಸ ಹಡಗಲಿ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಸುಮಾರು ವರ್ಷಗಳಿಂದ ಬಯಲು ಸೀಮೆ ಜಿಲ್ಲೆಗಳಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಹೋರಾಟ...

ಉಡುಪಿ | ಜಗತ್ತಿನಾದ್ಯಂತ ಪ್ರತೀ ವರ್ಷ ನೂರಾರು ಮುದ್ರಣ ಪತ್ರಿಕೆಗಳು ಮುಚ್ಚಿಕೊಳ್ಳುತ್ತಿವೆ – ರಾಜಾರಾಂ ತಲ್ಲೂರು

ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ...

ಹಾವೇರಿ | ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ....

Download Eedina App Android / iOS

X