ಗದಗ  | ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಮೆಕ್ಕೆಜೋಳ ಬೆಂಬಲ ಬೆಲೆಯಡಿ ಖರೀದಿ : ಸಚಿವ ಎಚ್.ಕೆ. ಪಾಟೀಲ

Date:

“ಬೆಂಬಲ ಬೆಲೆಯಡಿ ಪ್ರತಿ ರೈತನಿಂದ 5 ಕ್ವಿಂಟಾಲ ಮೆಕ್ಕೆಜೋಳವನ್ನು ಖರೀದಿ ಮಾಡಲು ನಿರ್ಧರಿಸಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಕನಿಷ್ಠ 12 ರಿಂದ ಗರಿಷ್ಠ 20 ಕ್ವಿಂಟಲ್ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಲ್ ಗೆ 2400 ರೂಗಳಂತೆ ಖರೀದಿಸಲು ಪ್ರಾರಂಭಿಸಲಾಗುವುದು” ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರು ಹೇಳಿದರು.

- Advertisement -

ಗದಗ ಜಿಲ್ಲೆಯ ಗದಗ ತಾಲ್ಲೂಕಿನ ಮುಳಗುಂದ ಸಮೀಪದ ಕಣಿವಿ ಗ್ರಾಮದಲ್ಲಿ  ಮಂಗಳವಾರ ವಿವಿಧ  ಕಾಮಗಾರಿಗಳಿಗೆ ಚಾಲನೆ ನೀಡಿ ಸಚಿವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಈಗಾಗಲೇ ಗದಗ ತಾಲೂಕು ಮಲಸಮುದ್ರ ಗ್ರಾಮದಲ್ಲಿ  ಧಾರವಾಡ ಹಾಲು ಒಕ್ಕೂಟದ ಹಾಲು ಸಂಗ್ರಹಣ ಕೇಂದ್ರದಲ್ಲಿ ಮೆಕ್ಕೆಜೋಳ ಖರೀದಿ ನೋಂದಣಿ ಪ್ರಕ್ರಿಯೆ ಮಂಗಳವಾರ ಪ್ರಾರಂಭಿಸಲಾಗಿದೆ” ಎಂದರು.

“ಪ್ರಸಕ್ತ ವರ್ಷ ರಾಜ್ಯದಲ್ಲಿ ಅಂದಾಜು 55 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬಿತ್ತನೆ ಮಾಡಿ ಬೆಳೆ ಬೆಳೆದಿದ್ದು  ಈ ಖರೀದಿ ಪ್ರಕ್ರಿಯೆಯನ್ನು ಹೇಗೆ ಮಾಡಬೇಕೆಂಬುದು ಸರಕಾರಕ್ಕೆ ಒಂದು ದೊಡ್ಡ ಸವಾಲಾಗಿತ್ತು. ರೈತರ ನೆರವಿಗೆ  ಸರ್ಕಾರ ಹೇಗಾದರೂ ಮಾಡಿ ಸ್ಪಂದಿಸಬೇಕು ಎಂಬ ಉದ್ದೇಶದಿಂದ ಪ್ರತಿ ರೈತನಿಂದ ಕನಿಷ್ಠ 12 ಕ್ವಿಂಟಲ್ ಗರಿಷ್ಠ 20 ಕ್ವಿಂಟಲ್ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿ ಮಾಡಲಾಗುವುದು” ಎಂದರು.

ಕಣವಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಮೈದಾನ ಹಾಗೂ ಹೈ ಮಾಸ್ಕ್ ವಿದ್ಯುತ ದೀಪ ಉದ್ಘಾಟಿಸಲಾಯಿತು. ಕ್ರೀಡಾಕೂಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳೆಗೆ ಪ್ರಶಸ್ತಿ ವಿತರಿಸಲಾಯಿತು. ಅಂದಾಜು 16 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣವಾದ ಗ್ರಾಮ ಪಂಚಾಯಿತಿ ಉಪಕಾರ್ಯಾಲಯವನ್ನು  ಸಚಿವರಾದ ಹೆಚ್ ಕೆ ಪಾಟೀಲ ಉದ್ಘಾಟಿಸಿದರು.

ಕಣವಿ ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ 41 ಲಕ್ಷ ರೂಗಳ ವೆಚ್ಚದಲ್ಲಿ ಮೂರು ಕೊಠಡಿಗಳನ್ನು ಉದ್ಘಾಟಿಸಲಾಯಿತು. ಅಂದಾಜು 18 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣವಾದ ಅಂಬೇಡ್ಕರ್ ಭವನ ಉದ್ಘಾಟಿಸಿದರು.

ಅಂದಾಜು 33 ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣವಾದ ಹಳ್ಳಿ ಗ್ರಾಮೀಣ ಸಂತೆ ಕಟ್ಟಡದ ಉದ್ಘಾಟನೆ, ರಂಗ ಮಂದಿರ ಹಾಗೂ ನಾಟಕ ಮನೆಯನ್ನು ಉದ್ಘಾಟಿಸಿದರು.

ವಿಪ ಶಾಸಕರಾದ ಎಸ್ ವಿ ಶಂಕನೂರ ಅವರ ಅನುದಾನದಲ್ಲಿ ನಿರ್ಮಾಣವಾದ ಶುದ್ಧ ಕುಡಿಯುವ ನೀರು ಘಟಕವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿಪ ಶಾಸಕರಾದ ಎಸ್. ವಿ. ಸಂಕನೂರ, ಜಿಪಂ ಮಾಜಿ ಅಧ್ಯಕ್ಷರಾದ ಸಿದ್ದು ಪಾಟೀಲ,  ಗ್ರಾ ಪಂ ಅಧ್ಯಕ್ಷೆ ಹಾಲವ್ವ ಕುರಿ, ಉಪಾಧ್ಯಕ್ಷೆ  ರೇಣವ್ವ ತಳವಾರ, ಗದಗ ತಾಪಂ ಮಾಜಿ ಅಧ್ಯಕ್ಷರಾದ ಶರಣ ಬಸನಗೌಡ ಪಾಟೀಲ, ಬಾಬುಸಾಬ ಕಿಲ್ಲೆದಾರ, ಬಸವರಾಜ ಬಂದಕ್ಕನವರ, ಪರಪ್ಪ ಕೋಳಿವಾಡ, ಯಲ್ಲಪ್ಪ ಕೋರಿ ಪ್ರಕಾಶ ಕುರ್ತಕೋಟಿ, ಗಂಗಣ್ಣ ಗಡಾದ, ಕೃಷ್ಣ ನಾಗಲೋಟಿ, ಎಸ್. ವಾಯ್. ಕೋರಿ,  ಶರೀಫ ದೊಡ್ಮನಿ, ಅಕ್ಕಮಹಾದೇವಿ ಬಳಿಗಾರ, ಪಾರವ್ವ ಕುರ್ತುಕೋಟಿ, ಮಂಜುನಾಥ ಕೋರಿ, ಶಂಕ್ರಪ್ಪ ಕೋಳಿವಾಡ,  ಪ್ರಭು ಹುಡೆದ, ಬಿ.ಟಿ. ಸೋಮರಡ್ಡಿ, ಶಿವಾನಂದ ಮಾದಣ್ಣವರ, ನಿಂಗಪ್ಪ ಛಲವಾದಿ ಮತ್ತಿತರರು ಇದ್ದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...