ಗದಗ | ಬೀದಿಬದಿ ವ್ಯಾಪಾರಿಗಳಿಗೆ ಹೈ-ಟೆಕ್ ತಳ್ಳುಗಾಡಿ ವಿತರಣೆ

Date:

Advertisements

ಪ್ರಾಮಾಣಿಕ ಬಡ ಜನರು ದೇಶಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಬೀದಿ ಬದಿ ವ್ಯಾಪಾರಸ್ಥರು ಸ್ವಾಭಿಮಾನದಿಂದ ತಮ್ಮ ಬದುಕು ಸಾಗಿಸಲು ಅನುವಾಗಲು ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಲಾಗುತ್ತಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ್‌ ಹೇಳಿದರು.

ನಗರದ ಕೆ.ಎಚ್.ಪಾಟೀಲ್ ವೃತ್ತದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಿ ಅವರು ಮಾತನಾಡಿದರು. ‘ಶತಮಾನಗಳಿಂದ ಸಮಾಜದಲ್ಲಿ ಬಡ ಜನರನ್ನು ಅಸೂಯೆಯಿಂದ ನೋಡಲಾಗುತ್ತಿತ್ತು. ಇಂದಿರಾ ಗಾಂಧಿ ಅವರು ಬಡ ಜನರನ್ನು ಸ್ವಾಭಿಮಾನಿಗಳನ್ನಾಗಿಸುವ ದಿಸೆಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದ ಧೀಮಂತ ಮಹಿಳೆ. ಬಡ ಜನರ ಏಳಿಗೆಗಾಗಿ ಅವರು ಹಾಕಿ ಕೊಟ್ಟಂತಹ ಕಾರ್ಯಕ್ರಮಗಳು ಇಂದಿಗೂ ಮುಂದುವರಿದಿವೆ. ಅವರ ಜನ್ಮ ದಿನದಂದು ಬೀದಿ ಬದಿ ವ್ಯಾಪಾರಸ್ಥರಿಗೆ ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸುತ್ತಿರುವದು ಅತ್ಯಂತ ಸಂತಸದ ಸಂಗತಿ’ ಎಂದರು.

ಬೀದಿ ಬದಿ ವ್ಯಾಪಾರಸ್ಥರಿಗೆ ಸರ್ಕಾರದ ಸೌಲಭ್ಯಗಳನ್ನು ವಿತರಿಸುವಲ್ಲಿ ಜಿಲ್ಲೆಯು ಒಂದು ಹೆಜ್ಜೆ ಮುಂದಿದೆ. ಇದನ್ನು ಸಂಪೂರ್ಣ ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಧೃಢರಾಗುವಂತೆ ತಿಳಿಸಿದರು.

Advertisements

ಈ ಹೈ-ಟೆಕ್ ತಳ್ಳುಗಾಡಿಗಳಲ್ಲಿ ವ್ಯಾಪಾರಸ್ಥರು ತಮ್ಮ ತರಕಾರಿಯನ್ನು ಸುರಕ್ಷಿತವಾಗಿ ಶೇಖರಣೆ ಮಾಡಬಹುದು.

ಇಂದು ನಗರದ 145 ಬೀದಿ ಬದಿ ವ್ಯಾಪಾರಸ್ಥರಿಗೆ ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಲಾಗಿದ್ದು, ಬಾಕಿ ಫಲಾನುಭವಿಗಳಿಗೆ ಬರುವ ಜನವರಿ ಅಂತ್ಯದೊಳಗಾಗಿ ವಿತರಿಸಲಾಗುವುದು ಎಂದರು. ಇದರ ಜೊತೆಗೆ ಬೀದಿ ಬದಿ ವ್ಯಾಪಾರಸ್ಥರ ಅನುಕೂಲಕ್ಕಾಗಿ ನಗರದಲ್ಲಿ ಕೋಲ್ಡ್ ಸ್ಟೋರೇಜ್ ಘಟಕ ನಿರ್ಮಾಣ ಕುರಿತು ಮನವಿಗೆ ಸ್ಪಂದಿಸುತ್ತಾ ಜನವರಿ 19ರೊಳಗಾಗಿ ಕೋಲ್ಡ್ ಸ್ಟೋರೇಜ್ ಘಟಕವನ್ನು ನಿರ್ಮಾಣ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರಿದ ಆಯುಕ್ತ ರಮೇಶ ವಟಗಲ್, ಮಾಜಿ ಶಾಸಕ ಡಿ.ಆರ್.ಪಾಟೀಲ, ನಗರ ಸಭೆ ಸದಸ್ಯರು, ಗದಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ವಿವಿದೋದ್ದೆಶಗಳ ಸಂಘದ ಪದಾಧಿಕಾರಿಗಳು, ಗಣ್ಯರು, ಬೀದಿ ಬದಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X